ತೆಂಕನಿಡಿಯೂರು, ಮಾ.10: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಐಕ್ಯೂಎಸಿ, ಮಹಿಳಾ ವೇದಿಕೆ, ರಾಷ್ಟ್ರೀಯ ಸೇವಾ ಯೋಜನೆ, ರೋವರ್ಸ್ ರೇಂಜರ್ಸ್ ಘಟಕ, ಯುವ ರೆಡ್ ಕ್ರಾಸ್ ಘಟಕ, ಕ್ರೀಡಾ ಮತ್ತು ಸಾಂಸ್ಕೃತಿಕ ಸಮಿತಿ ಹಾಗೂ ಗೊರೆಟ್ಟಿ ಆಸ್ಪತ್ರೆ ಕಲ್ಯಾಣಪುರ ಇವರ ಸಹಯೋಗದಲ್ಲಿ ಮಾರ್ಚ್ 9 ಸೋಮವಾರ ಕಾಲೇಜು ಸಭಾಂಗಣದಲ್ಲಿ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮ ನಡೆಯಿತು. ಅಂತರಾಷ್ಟ್ರೀಯ ಕ್ರೀಡಾಪಟು ಅರುಣಕಲಾ ಎಸ್ ರಾವ್, ಸಂಜೀವಿನಿ ಒಕ್ಕೂಟದ ಸಮುದಾಯ ಸಂಪನ್ಮೂಲ ವ್ಯಕ್ತಿ ಜಯಶ್ರೀ, ಸ್ತ್ರೀ ರೋಗ ತಜ್ಞರಾದ ಡಾ. ರಾಜಲಕ್ಷ್ಮೀ ಇವರುಗಳನ್ನು ಸಮ್ಮಾನಿಸಲಾಯಿತು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಂಶುಪಾಲರಾದ ನಿತ್ಯಾನಂದ ವಿ. ಗಾಂವಕರ ಅವರು, ಮಹಿಳಾ ಸಾಧಕಿಯರ ಸಾಧನೆ ವಿದ್ಯಾರ್ಥಿನಿಯರಿಗೆ ಪ್ರೇರಣೆ ನೀಡಿ ಶೈಕ್ಷಣಿಕ ಸಾಧನೆಗೆ ಮುನ್ನುಡಿಯಾಗಲಿ ಎಂದರು. ಗ್ರಾಮೀಣ ಪ್ರದೇಶದ ಮಹಿಳೆಯರು ತಮ್ಮ ಬದುಕನ್ನು ಕಟ್ಟಿಕೊಂಡು ಇತರರಿಗೂ ಉದ್ಯೋಗ ನೀಡುತ್ತಿರುವುದು ಮಹಿಳಾ ಸಬಲೀಕರಣಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ಹೇಳಿದರು. ಸ್ತ್ರೀ ರೋಗ ತಜ್ಞರಾದ ಡಾ. ರಾಜಲಕ್ಷ್ಮೀ ಅವರು ಮಹಿಳಾ ಆರೋಗ್ಯ ಮತ್ತು ನೈರ್ಮಲ್ಯ ಕುರಿತು ವಿಸ್ತ್ರತವಾದ ಮಾಹಿತಿ ನೀಡಿ ಸಂವಾದ ನಡೆಸಿದರು.
ಮಹಿಳಾ ವೇದಿಕೆ ಸಂಚಾಲಕಿ ಡಾ. ಆಶಾ ಸಿ. ಇಂಗಳಗಿ, ಗೊರೆಟ್ಟಿ ಆಸ್ಪತ್ರೆಯ ಸಮಾಜ ಕಾರ್ಯಕರ್ತರಾದ ರಾಕೇಶ್, ಯುವ ರೆಡ್ ಕ್ರಾಸ್ ಸಂಚಾಲಕ ಪ್ರಶಾಂತ ನೀಲಾವರ, ರೋವರ್ಸ್ ರೇಂಜರ್ಸ್ ಸಂಚಾಲಕ ಮರ್ವಿನ್ ವಿಕ್ಟರ್ ಡಿಸೋಜ, ದೈಹಿಕ ಶಿಕ್ಷಣ ನಿರ್ದೇಶಕ ಡಾ. ರೋಶನ್ ಕುಮಾರು ಶೆಟ್ಟಿ, ವಾಣಿಜ್ಯಶಾಸ್ತ್ರ ವಿಭಾಗ ಮುಖ್ಯಸ್ಥರಾದ ಬಿಂದು ಟಿ., ಸಾಂಸ್ಕೃತಿಕ ಸಮಿತಿ ಸಂಚಾಲಕರಾದ ಕೃಷ್ಣ ಸಾಸ್ತಾನ, ರಾಷ್ಟ್ರೀಯ ಸೇವಾ ಯೋಜನೆಯ ಸಂಚಾಲಕಿ ಸುಷ್ಮಾ ಟಿ., ಬೋಧಕ ಬೋಧಕೇತರರು ಉಪಸ್ಥಿತರಿದ್ದರು. ಅಂಬಿಕಾ ಮತ್ತು ಬಳಗ ಪ್ರಾರ್ಥನೆ ನೆರವೇರಿಸಿದರು, ಪ್ರಥಮ ಬಿಸಿಎ ವಿದ್ಯಾರ್ಥಿನಿ ರಶ್ಮಿತಾ ಸ್ವಾಗತಿಸಿ, ದ್ವಿತೀಯ ಬಿಕಾಂ ವಿದ್ಯಾರ್ಥಿನಿ ದೀಕ್ಷಾ ವಂದಿಸಿದರು. ಪ್ರಥಮ ಎಂ.ಎಸ್.ಡಬ್ಲ್ಯೂ ವಿದ್ಯಾರ್ಥಿನಿ ಸಿಯಾನ ಕಾರ್ಯಕ್ರಮ ನಿರೂಪಿಸಿದರು.




By
ForthFocus™