Wednesday, September 30, 2026
Wednesday, September 30, 2026

ಜಿಲ್ಲಾಸ್ಪತ್ರೆಯಲ್ಲಿ ಮಹಿಳಾ ದಿನಾಚರಣೆ

ಜಿಲ್ಲಾಸ್ಪತ್ರೆಯಲ್ಲಿ ಮಹಿಳಾ ದಿನಾಚರಣೆ

Date:

ಉಡುಪಿ, ಮಾ.10: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಸಾಂಕ್ರಮಿಕ ರೋಗಗಳ ಘಟಕ ಎನ್.ಸಿ.ಡಿ, ಜಿಲ್ಲಾ ಆಸ್ಪತ್ರೆ ಉಡುಪಿ ಎನ್.ಸಿ.ಡಿ ವಿಭಾಗ ಹಾಗೂ ವಾಮನ ವಿಠ್ಠಲ ಟ್ರಸ್ಟ್ ಶಿರೂರು ಮಠ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಉಡುಪಿಯ ಅಜ್ಜರಕಾಡು ಜಿಲ್ಲಾ ಆಸ್ಪತ್ರೆ ಯಲ್ಲಿ ವಿಶ್ವ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಆಸ್ಪತ್ರೆಯ ರೇಡಿಯೋಲಾಜಿಸ್ಟ್ ಡಾ.ಆಮ್ನಾ ಹೆಗ್ಡೆ ಮಾತನಾಡಿ, ಈ ಹಿಂದೆ ಅಬಲೆಯೆಂದು ಕರೆಸಿಕೊಳ್ಳುತ್ತಿದ್ದ ಮಹಿಳೆಯರು ಇಂದು ಸಬಲೆಯಾಗಿ, ಉತ್ತಮ ಶಿಕ್ಷಣವನ್ನು ಪಡೆದು ಉನ್ನತ ಹುದ್ದೆ, ಚಿತ್ರರಂಗ, ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಪುರುಷರಷ್ಟೇ ಸರಿಸಮಾನರಾಗಿ ಸ್ಥಾನ ಪಡೆದಿದ್ದಾರೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಸರ್ಜನ್ ಡಾ.ಹೆಚ್ ಅಶೋಕ ಮಾತನಾಡಿ, ಮಾರ್ಚ್ 8 ರಂದು ವಿಶ್ವ ಮಹಿಳಾ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಮಹಿಳೆಯರ ಸಾಮಾಜಕ, ಆರ್ಥಿಕ, ಸಾಂಸ್ಕೃತಿಕ ಮತ್ತು ರಾಜಕೀಯ ಸಾಧನೆಗಳನ್ನು ಗೌರವಿಸಲು ಹಾಗೂ ಲಿಂಗ ಸಮಾನತೆಗಾಗಿ ಜಾಗೃತಿ ಮೂಡಿಸಲು ಈ ದಿನವನ್ನು ಆಚರಿಸಲಾಗುತ್ತದೆ. ಮಹಿಳಾ ಸಬಲೀಕರಣ, ಹಕ್ಕುಗಳ ರಕ್ಷಣೆ, ತಾರತಮ್ಯದ ನಿರ್ಮೂಲನೆ ಮತ್ತು ಸಮಾಜದಲ್ಲಿ ಮಹಿಳೆಯರ ಕೊಡುಗೆಯನ್ನು ಸ್ಮರಿಸುವುದು ಈ ದಿನದ ಪ್ರಮುಖ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಜಿಲ್ಲಾ ಗೌರವದಿಂದ ಕಾಣಬೇಕು ಎಂದರು.

ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಸ್ತ್ರೀ ರೋಗ ತಜ್ಷರಾದ ಡಾ.ಉಷಾ ಹಾಗೂ ನರ್ಸಿಂಗ್ ಅಧಿಕಾರಿ ಅರುಣ ಇವರು ಮಹಿಳಾ ದಿನಾಚರಣೆಯ ಬಗ್ಗೆ ಮತಾನಾಡಿದರು. ವೈದ್ಯಕೀಯ ತಜ್ಞರಾದ ಡಾ.ದೆಯಮಣಿ, ಡಾ. ದಿವ್ಯ, ಬ್ಲಡ್ ಬ್ಯಾಂಕ್ ಮೆಡಿಕಲ್ ಆಫೀಸರ್ ಡಾ. ವೀಣಾ ಕುಮಾರಿ, ಎಂ.ಸಿ.ಕೆ.ಎಸ್ ಫುಡ್ ಫಾರ್ ದಿ ಹಂಗ್ರೀ ಫೌಂಡೇಶನ್ ನ ನಿಧಿ, ಆಸ್ಪತ್ರೆಯ ನರ್ಸಿಂಗ್ ಸೂಪರಿಂಟೆಂಡೆಂಟ್ ರತ್ನವತಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಎನ್.ಸಿ.ಡಿ ಯ ಜಿಲ್ಲಾ ಸಮಾಲೋಚಕಿ ಡಾ.ಅಂಜಲಿ ಹಾಗೂ ಆಪ್ತ ಸಮಾಲೋಚಕ ಮನು. ಎಸ್. ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರ

ಕುಂದಾಪುರ, ಸೆ.30: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿಗೆ...

ಮಂಗಳೂರಿನ ಎಂಆರ್‌ಪಿಎಲ್ ಸಂಕೀರ್ಣದಲ್ಲಿ ಸ್ಫೋಟ

ಮಂಗಳೂರು, ಸೆ.30: ಬುಧವಾರ ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (ಎಂಆರ್‌ಪಿಎಲ್)...

ಸಮಾನತೆಯ ಸಮಾಜ ನಿರ್ಮಾಣಕ್ಕೆ ಸಂವಿಧಾನ ಭದ್ರ ಬುನಾದಿ: ಡಾ.ಶ್ರೀಪಾದ್ ಭಟ್

ಉಡುಪಿ, ಸೆ.29: ಅಂಬೇಡ್ಕರ್ ರವರು ಶಿಕ್ಷಣಕ್ಕೆ ಅತ್ಯಂತ ಮಹತ್ವವನ್ನು ನೀಡಿದವರು. ಶಿಕ್ಷಣ...

ಮಣಿಪಾಲ ಜ್ಞಾನಸುಧಾ: ಎನ್.ಎಸ್. ಎಸ್ ದಿನಾಚರಣೆ

ಮಣಿಪಾಲ, ಸೆ.29: ಮಣಿಪಾಲ ಜ್ಞಾನಸುಧಾ ಪ. ಪೂ. ಕಾಲೇಜಿನಲ್ಲಿ ಎನ್.ಎಸ್. ಎಸ್...
error: Content is protected !!