Wednesday, July 29, 2026
Wednesday, July 29, 2026

ಉಡುಪಿ ನಗರಸಭೆ: ಪರಿಷ್ಕೃತ ಆಸ್ತಿ ತೆರಿಗೆ ಪಾವತಿಗೆ ಸೂಚನೆ

ಉಡುಪಿ ನಗರಸಭೆ: ಪರಿಷ್ಕೃತ ಆಸ್ತಿ ತೆರಿಗೆ ಪಾವತಿಗೆ ಸೂಚನೆ

Date:

ಉಡುಪಿ, ಮಾ.11: ಉಡುಪಿ ನಗರಸಭಾ ವ್ಯಾಪ್ತಿಯ ಮಾರುಕಟ್ಟೆ ಬೆಲೆ ಪರಿಷ್ಕರಣೆಯಾಗದೇ ಇರುವುದರಿಂದ, ಪ್ರಸಕ್ತ ಸಾಲಿನಲ್ಲಿ ನಿರ್ಧರಣೆಯಾದ ತೆರಿಗೆಯ ಮೇಲೆ ಶೇ.3 ರಷ್ಟು ತೆರಿಗೆಯನ್ನು ನಗರಸಭೆಯ ಆಡಳಿತಾಧಿಕಾರಿಗಳ ಸಭೆಯ ನಿರ್ಣಯದಂತೆ ಹೆಚ್ಚಿಸಲಾಗಿರುತ್ತದೆ. ಆದ್ದರಿಂದ ಉಡುಪಿ ನಗರಸಭಾ ವ್ಯಾಪ್ತಿಯ ಕಟ್ಟಡದ/ಖಾಲಿ ನಿವೇಶನ ಮಾಲೀಕರು ಹಾಗೂ ಅಧಿಭೋಗದಾರರು 2026-27 ನೇ ಸಾಲಿನ ಆಸ್ತಿತೆರಿಗೆಯನ್ನು, 2025-26 ರ ಆಸ್ತಿತೆರಿಗೆಯ ಮೇಲೆ ಶೇ. 3 ರಷ್ಟು ಹೆಚ್ಚಿಸಿ, ಏಪ್ರಿಲ್ 1 ರಿಂದ 30 ರ ಒಳಗೆ ಪಾವತಿಸಿದ್ದಲ್ಲಿ ಶೇ.5 ರ ರಿಯಾಯಿತಿ ಪಡೆಯಬಹುದಾಗಿದೆ. ಮೇ 1 ರಿಂದ ಜೂನ್ 30 ರ ವರೆಗೆ ದಂಡ ರಹಿತ ಪಾವತಿಗೆ ಅವಕಾಶವಿದ್ದು, ಜುಲೈ 1 ರ ನಂತರ ಪಾವತಿಸಿದ್ದಲ್ಲಿ ಆಸ್ತಿ ತೆರಿಗೆಯ ಮೇಲೆ ಪ್ರತಿ ತಿಂಗಳು ಶೇ. 2 ರಷ್ಟು ದಂಡ ವಿಧಿಸಲಾಗುವುದು. ಪ್ರಸಕ್ತ ಸಾಲಿನ ಹಾಗೂ ಹಿಂದಿನ ಅವಧಿಯ ಆಸ್ತಿ ತೆರಿಗೆ ಪಾವತಿಸದೇ ಇರುವವರು ಶೇ. 2 ರಷ್ಟು ದಂಡದೊಂದಿಗೆ ಪಾವತಿಸಿ, ನಗರಸಭೆಯ ಸರ್ವತೋಮುಖ ಅಭಿವೃದ್ಧಿಗೆ ಸಹಕರಿಸುವಂತೆ ಉಡುಪಿ ನಗರಸಭೆಯ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಿವೃತ್ತ ಶಿಕ್ಷಕ ಮಲ್ಪೆ ರಾಘವೇಂದ್ರರಿಗೆ ಸೇವಾ ಪ್ರಶಸ್ತಿ

ಕಟಪಾಡಿ, ಜು.28: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದಲ್ಲಿ...

ಹೆಜಮಾಡಿ ಟೋಲ್ ಸಮಸ್ಯೆ: ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಶಾಸಕರ ಸಭೆ

ಹೆಜಮಾಡಿ, ಜು.28: ಹೆಜಮಾಡಿ ಟೋಲ್ ಸಮಸ್ಯೆಗೆ ಸಂಬಂಧಿಸಿದಂತೆ ಶಾಸಕರಾದ ಗುರ್ಮೆ ಸುರೇಶ್...

ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ: ಸಮಿತಿ ಸದಸ್ಯರಿಂದ ಧರ್ಮಸ್ಥಳ ಭೇಟಿ

ಬ್ರಹ್ಮಾವರ, ಜು.28: ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ ಇದರ ಅಭಿವೃದ್ಧಿ ಮತ್ತು...
error: Content is protected !!