Friday, March 13, 2026
Friday, March 13, 2026

ಉಡುಪಿ ಜಿಲ್ಲೆಯ ಅಭಿವೃದ್ಧಿಯಲ್ಲಿ ಮಹಿಳೆಯರ ಕೊಡುಗೆ ಅಪಾರ: ಯಶ್ಪಾಲ್ ಸುವರ್ಣ

ಉಡುಪಿ ಜಿಲ್ಲೆಯ ಅಭಿವೃದ್ಧಿಯಲ್ಲಿ ಮಹಿಳೆಯರ ಕೊಡುಗೆ ಅಪಾರ: ಯಶ್ಪಾಲ್ ಸುವರ್ಣ

Date:

ಉಡುಪಿ, ಮಾ.12: ಉಡುಪಿ ಜಿಲ್ಲೆಯ ಅಭಿವೃದ್ಧಿಯಲ್ಲಿ ಮಹಿಳೆಯರ ಕೊಡುಗೆ ಅಪಾರವಾಗಿದ್ದು, ಉಡುಪಿ ಜಿಲ್ಲೆಯ ಲಿಂಗಾನುಪಾತ ಪ್ರಮಾಣದಲ್ಲಿ ರಾಜ್ಯದಲ್ಲಿಯೇ ಪ್ರಥಮ ಸ್ಥಾನಿಯಾಗಿದ್ದು ಜಿಲ್ಲೆಯ ಆಡಳಿತ ವ್ಯವಸ್ಥೆಯಲ್ಲಿ ಹಲವಾರು ಮಂದಿ ಮಹಿಳಾ ಉಸ್ತುವಾರಿ ಸಚಿವರು, ಮಹಿಳಾ ಜಿಲ್ಲಾಧಿಕಾರಿ, ಸಂಸದರೂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸುವ ಮೂಲಕ ಜಿಲ್ಲೆಯ ಪ್ರಗತಿ ಅಪಾರ ಕೊಡುಗೆ ನೀಡಿದ್ದಾರೆ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಹೇಳಿದರು. ಉಡುಪಿ ನಗರ ಬಿಜೆಪಿ ಹಾಗೂ ಮಹಿಳಾ ಮೋರ್ಚಾದ ವತಿಯಿಂದ ಆಯೋಜಿಸಿದ್ದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.

ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿದ್ದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಮಹಿಳಾ ಮೋರ್ಚಾ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕ ಮಹಿಳೆಯರು ಹಾಗೂ ಸಮಾಜ ಸೇವಕರನ್ನು ಗುರುತಿಸುವ ಮೂಲಕ ಅರ್ಥಪೂರ್ಣವಾಗಿ ಮಹಿಳಾ ದಿನಾಚರಣೆ ಆಚರಿಸುತ್ತಿರುವುದು ಅಭಿನಂದನಾರ್ಹ ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಮಹಿಳಾ ಮೋರ್ಚಾದ ಅಧ್ಯಕ್ಷರಾದ ನೀತಾ ಪ್ರಭು ಪ್ರಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದು ಮಹಿಳೆಯರಾದ ಶಕುಂತಲಾ ಶೆಟ್ಟಿ (ಹೈನುಗಾರಿಕೆ), ವಿಮಲ (ಸಂಜೀವಿನಿ ಗ್ರೂಪ್), ಅನುಷಾ – (ವಕೀಲರು), ಸುಶೀಲ ಸಾಲಿಯಾನ್ (ಮಹಿಳಾ ಹೋಮ್ ಗಾರ್ಡ್), ಗೀತಾ ಕೃಷ್ಣರಾಜ್ (ಆಟೋ ಚಾಲಕಿ), ಲಲಿತ (ಪೌರ ಕಾರ್ಮಿಕರು) ಹಾಗೂ ಸಮಾಜ ಸೇವಕರಾದ ನಿತ್ಯಾನಂದ ಒಳಕಾಡು, ವಿಶು ಶೆಟ್ಟಿ ಅಂಬಲಪಾಡಿ, ಸತೀಶ್ ಸಾಲ್ಯಾನ್ ಮಣಿಪಾಲ ಹಾಗೂ ಪರ್ಕಳದ ಮನೆ ಊಟ ಹೋಟೆಲ್ ನ ಹಿರಿಯ ದಂಪತಿಗಳಾದ ಗೋಪಾಲಕೃಷ್ಣ ಮತ್ತು ವಸಂತಿ ದಂಪತಿಗಳನ್ನು ವಿಶೇಷವಾಗಿ ಸಮ್ಮಾನಿಸಿ ಅಭಿನಂದಿಸಲಾಯಿತು.

ಸಂತೆಕಟ್ಟೆ ವಾತ್ಸಲ್ಯ ಕ್ಲಿನಿಕ್ ನ ಡಾ.ರಾಜಲಕ್ಷ್ಮಿ ಮಹಿಳೆಯರಿಗಾಗಿ ವಿಶೇಷ ಉಪಯುಕ್ತ ಆರೋಗ್ಯ ಮಾಹಿತಿ ನೀಡಿದರು. ಸಮಾರಂಭದಲ್ಲಿ ಮಹಿಳೆಯರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.

ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಕುತ್ಯಾರು ನವೀನ್ ಶೆಟ್ಟಿ, ಪಕ್ಷದ ಮುಖಂಡರಾದ ಕಿದಿಯೂರು ಉದಯ ಕುಮಾರ್ ಶೆಟ್ಟಿ, ಉಡುಪಿ ನಗರ ಮಂಡಲದ ಅಧ್ಯಕ್ಷರಾದ ದಿನೇಶ್ ಅಮಿನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ್ ಶೆಟ್ಟಿ, ರಾಜ್ಯ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಸುವರ್ಣ, ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷರಾದ ಸಂಧ್ಯಾ ರಮೇಶ್, ನಗರ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶಾಂತಿ ಮನೋಜ್ ಮೊದಲಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಂಜೀವಿನಿ ಸ್ವ ಸಹಾಯ ಗುಂಪುಗಳ ಆರ್ಥಿಕ ಸೇರ್ಪಡೆಗಾಗಿ ಬ್ಯಾಂಕರ್ಸ್ ಕಾರ್ಯಾಗಾರ

ಮಣಿಪಾಲ, ಮಾ.12: ಕೌಶಲ್ಯ ಅಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ-...

ವೀಣಾ ಕಛೇರಿ

ಉಡುಪಿ, ಮಾ.12: ರಂಜನಿ ಮೆಮೋರಿಯಲ್ ಟ್ರಸ್ಟ್ ಮತ್ತು ಸುಘೋಷ ಉಡುಪಿ ವತಿಯಿಂದ...

ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಅಂತರ್ ಕಾಲೇಜು ಅಥ್ಲೆಟಿಕ್ ಚಾಂಪಿಯನ್‌ಶಿಪ್–2026ಕ್ಕೆ ಭರ್ಜರಿ ಚಾಲನೆ

ನಿಟ್ಟೆ, ಮಾ.12: ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಅಂಗಸಂಸ್ಥೆಯಾದ ನಿಟ್ಟೆ ಮಹಾಲಿಂಗ ಅಡ್ಯಂತಾಯ...
error: Content is protected !!