Monday, September 7, 2026
Monday, September 7, 2026

ಪೆರ್ಡೂರು ಶ್ರೀ ಅನಂತ ಪದ್ಮನಾಭ ದೇವಸ್ಥಾನ ವಾರ್ಷಿಕ ಜಾತ್ರೆ: ಬದಲಿ ಮಾರ್ಗ

ಪೆರ್ಡೂರು ಶ್ರೀ ಅನಂತ ಪದ್ಮನಾಭ ದೇವಸ್ಥಾನ ವಾರ್ಷಿಕ ಜಾತ್ರೆ: ಬದಲಿ ಮಾರ್ಗ

Date:

ಉಡುಪಿ, ಮಾ.13: ಪೆರ್ಡೂರು ಶ್ರೀಅನಂತ ಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆಯ ಪ್ರಯುಕ್ತ ರಾ.ಹೆ 169(ಎ) ರ ಮಾರ್ಗದಲ್ಲಿ ಸಂಚರಿಸುವ ವಾಹನಗಳ ಸುಗಮ ಸಂಚಾರ ದೃಷ್ಟಿಯಿಂದ ಮಾರ್ಚ್ 16 ರಂದು ಸಂಜೆ 4.00 ಗಂಟೆಯಿಂದ ರಾತ್ರಿ 10.00 ಗಂಟೆವರೆಗೆ ವಾಹನಗಳಿಗೆ ಬದಲಿ ಮಾರ್ಗದಲ್ಲಿ ಸಂಚರಿಸಲು ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಆದೇಶಿಸಿರುತ್ತಾರೆ.

ಬದಲಿ ಮಾರ್ಗದ ವಿವರಗಳು: ರಾಷ್ಟ್ರೀಯ ಹೆದ್ದಾರಿ 169(ಎ) ರಲ್ಲಿ ಉಡುಪಿಯಿಂದ ಹೆಬ್ರಿ-ಆಗುಂಬೆ ಕಡೆಗೆ ಹೋಗುವ ವಾಹನಗಳು ಹಿರಿಯಡ್ಕ ಜಂಕ್ಷನ್ ನಲ್ಲಿ ಮಾರ್ಗ ಬದಲಾಯಿಸಿ-ಕೋಟ್ನಾಕಟ್ಟೆ-ಹರಿಖಂಡಿಗೆ-ಬೈರಂಪಳ್ಳಿ-ಪೆರ್ಡೂರು ಮೇಲ್ಪೆಟೆ ಮಾರ್ಗವಾಗಿ ಅಥವಾ ಹಿರಿಯಡ್ಕ ಬಜೆ, ಕುಕ್ಕೆಹಳ್ಳಿ, ಪೇತ್ರಿ ಮಾರ್ಗವಾಗಿ ಹೆಬ್ರಿ, ಆಗುಂಬೆಗೆ ಸಂಚರಿಸುವುದು. ರಾಷ್ಟ್ರೀಯ ಹೆದ್ದಾರಿ 169(ಎ) ರಲ್ಲಿ ಆಗುಂಬೆ-ಹೆಬ್ರಿಯಿಂದ-ಉಡುಪಿ ಕಡೆಗೆ ಬರುವ ವಾಹನಗಳು ಪೆರ್ಡೂರು ಮೇಲ್ಪೆಟೆ- ಬೈರಂಪಳ್ಳಿ-ಹರಿಖಂಡಿಗೆ-ಕೋಟ್ನಾಕಟ್ಟೆ-ಹಿರಿಯಡ್ಕ ಜಂಕ್ಷನ್ ಮಾರ್ಗವಾಗಿ ಉಡುಪಿಗೆ ಸಂಚರಿಸುವುದು. ರಾಷ್ಟ್ರೀಯ ಹೆದ್ದಾರಿ 169(ಎ) ರಲ್ಲಿ ಹೆಬ್ರಿಯಿಂದ ಪೆರ್ಡೂರು ಮಾರ್ಗವಾಗಿ ಪೇತ್ರಿ-ಬ್ರಹ್ಮಾವರ ಕಡೆ ಸಂಚರಿಸುವ ವಾಹನಗಳು ಪೆರ್ಡೂರು ಮೇಲ್ಪೆಟೆಯ ಆರ್‌ಎಸ್‌ಎಸ್ ಬ್ಯಾಂಕ್ ಬಳಿ ಇರುವ ಅಲಂಗಾರು ರಸ್ತೆ ಮಾರ್ಗವಾಗಿ ಕರ್ಜೆ-ಪೇತ್ರಿ- ಬ್ರಹ್ಮಾವರ ಕಡೆಗೆ ಸಂಚರಿಸುವುದು.

ಮಾರ್ಚ್16 ರಂದು ಸಂಜೆ 4.00 ಗಂಟೆಯಿಂದ ರಾತ್ರಿ 10.00 ಗಂಟೆವರೆಗೆ ಪೆರ್ಡೂರು ಕೆಳಪೇಟೆಯಿಂದ-ಮೇಲ್ಪೆಟೆಯ ಬಸ್ ನಿಲ್ದಾಣದವರೆಗೆ ವಾಹನ ಸಂಚಾರ ಮುಕ್ತಗೊಳಿಸಲಾಗಿದೆ ಎಂದು ಜಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಜ್ಞಾನದ ಕ್ತತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವವರೇ ಶಿಕ್ಷಕರು: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಸೆ.6: ಅಜ್ಞಾನದ ಕತ್ತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವ ವ್ಯಕ್ತಿಯೇ ಶಿಕ್ಷಕ....

ಸೆ. 9: ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ಸೆ.6: ನಗರದ ಕಲ್ಸಂಕ ಅಂಬಾಗಿಲು ರಸ್ತೆಯಲ್ಲಿರುವ ಸಾನ್ವಿ ಟ್ರೇರ‍್ಸ್ನಲ್ಲಿ ಸೆಪ್ಟೆಂಬರ್...

ಮಣಿಪಾಲ ಜ್ಞಾನಸುಧಾ: ಶಿಕ್ಷಕರ ದಿನಾಚರಣೆ; ನಿವೃತ್ತ ಶಿಕ್ಷಕರಿಗೆ ಸನ್ಮಾನ

ಮಣಿಪಾಲ, ಸೆ.6: ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದಲ್ಲಿ...

ಡಾ. ಪಾರ್ವತಿ ಜಿ. ಐತಾಳರ ಎರಡು ಕೃತಿಗಳ ಲೋಕಾರ್ಪಣೆ

ಕುಂದಾಪುರ, ಸೆ.3: ಸಣ್ಣ ಕಥೆಗಳು ಮನುಷ್ಯನ ಜೀವನದಲ್ಲಿ ಅವನನ್ನು ಗಾಢವಾಗಿ ತಟ್ಟುವ...
error: Content is protected !!