Monday, November 16, 2026
Monday, November 16, 2026

ಉಡುಪಿ ಜಿಲ್ಲೆಗೆ ಸರಕಾರಿ ಮೆಡಿಕಲ್ ಕಾಲೇಜು ಮಂಜೂರಾತಿ ಮಾಡಿ; ವಿಧಾನಸಭೆಯಲ್ಲಿ ಶಾಸಕ ಯಶ್ಪಾಲ್ ಸುವರ್ಣ ಗಟ್ಟಿ ಧ್ವನಿ; ಉಪ್ಪೂರು ಗ್ರಾಮದಲ್ಲಿ ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಜಾಗ ಗುರುತು

ಉಡುಪಿ ಜಿಲ್ಲೆಗೆ ಸರಕಾರಿ ಮೆಡಿಕಲ್ ಕಾಲೇಜು ಮಂಜೂರಾತಿ ಮಾಡಿ; ವಿಧಾನಸಭೆಯಲ್ಲಿ ಶಾಸಕ ಯಶ್ಪಾಲ್ ಸುವರ್ಣ ಗಟ್ಟಿ ಧ್ವನಿ; ಉಪ್ಪೂರು ಗ್ರಾಮದಲ್ಲಿ ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಜಾಗ ಗುರುತು

Date:

ಉಡುಪಿ, ಮಾ.14: ಉಡುಪಿ ಜಿಲ್ಲೆಗೆ ಸರಕಾರಿ ಮೆಡಿಕಲ್ ಕಾಲೇಜು ಮಂಜೂರು ಮಾಡುವಂತೆ
ವಿಧಾನಸಭಾ ಅಧಿವೇಶನದಲ್ಲಿ ಉಡುಪಿ ಶಾಸಕರಾದ ಯಶ್ಪಾಲ್ ಸುವರ್ಣ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದರು.

ರಾಜ್ಯ ಸರ್ಕಾರವು ಘೋಷಿಸಿರುವ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರತಿ ಜಿಲ್ಲೆಗೆ ಒಂದು ಸರಕಾರಿ ಮೆಡಿಕಲ್ ಕಾಲೇಜು ನಿರ್ಮಾಣ ಮಾಡುವ ಉದ್ದೇಶವು ರಾಜ್ಯದ ಜನತೆಗೆ ವೈದ್ಯಕೀಯ ಶಿಕ್ಷಣ ಹಾಗೂ ಉತ್ತಮ ಆರೋಗ್ಯ ಸೇವೆಗೆ ಅವಶ್ಯಕವಾಗಿದ್ದು, ಹೆಚ್ಚಿನ ಜಿಲ್ಲೆಗಳು ಸರಕಾರಿ ಮೆಡಿಕಲ್ ಕಾಲೇಜು ಹೊಂದಿದ್ದು, ಕಳೆದ ಬಜೆಟ್‌ನಲ್ಲಿ ನೆರೆಯ ಜಿಲ್ಲೆಯಾದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೂತನ ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪನೆ ಘೋಷಿಸಲಾಗಿರುತ್ತದೆ.

ಪ್ರಸ್ತುತ ಉಡುಪಿ ಜಿಲ್ಲೆಯಲ್ಲಿ ಸರಕಾರಿ ವೈದ್ಯಕೀಯ ಶಿಕ್ಷಣ ಸಂಸ್ಥೆಯ ಅಗತ್ಯವಿದ್ದು, ಜಿಲ್ಲೆಯ ಜನರ ಹಲವು ದಶಕಗಳ ಕನಸಾಗಿರುತ್ತದೆ. ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ನಿರ್ಮಾಣವಾದರೆ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಬೆಂಬಲ ಸಿಕ್ಕಿದಂತಾಗುತ್ತದೆ ಮತ್ತು ಸಾರ್ವಜನಿಕರಿಗೆ ಸಮೀಪದಲ್ಲೇ ಗುಣಮಟ್ಟದ ಆರೋಗ್ಯ ಸೇವೆಗಳು ಲಭ್ಯವಾಗುವುದರ ಜೊತೆಗೆ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣ ಪಡೆಯಲು ಉತ್ತಮ ಅವಕಾಶವೂ ಸಿಗಲಿದೆ.

ಬ್ರಹ್ಮಾವರ ತಾಲೂಕಿನ ಉಪ್ಪೂರು ಗ್ರಾಮದಲ್ಲಿ ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಅನುಕೂಲವಾಗುವಂತೆ ಈಗಾಗಲೇ ಸರಕಾರಿ ಜಾಗವನ್ನು ಗುರುತಿಸಲಾಗಿದೆ. ಉಪ್ಪೂರು ಗ್ರಾಮದ ಸರ್ವೆ ನಂಬರ್ 293/1ಎ1 ರಲ್ಲಿ 18.80 ಎಕ್ರೆ ಮತ್ತು 232ರಲ್ಲಿ 12.00 ಎಕ್ರೆ ಸರಕಾರಿ ಜಾಗವನ್ನು ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಈಗಾಗಲೇ ಕಾಯ್ದಿರಿಸಲಾಗಿದ್ದು, ಅಗತ್ಯ ಮೂಲಸೌಕರ್ಯಗಳೊಂದಿಗೆ ಈ ಜಾಗದಲ್ಲಿ ಮೆಡಿಕಲ್ ಕಾಲೇಜು ನಿರ್ಮಿಸಲು ಅತ್ಯಂತ ಅನುಕೂಲಕರ ಪರಿಸ್ಥಿತಿಯಿದೆ. ರಾಜ್ಯ ಸರ್ಕಾರವು ಈ ವಿಷಯಕ್ಕೆ ವಿಶೇಷ ಆದ್ಯತೆ ನೀಡಿ ಉಡುಪಿ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆ ಘೋಷಿಸಿ, ತ್ವರಿತವಾಗಿ ಆಡಳಿತಾತ್ಮಕ ಅನುಮತಿ ನೀಡುವಂತೆ ಮತ್ತು ಅಗತ್ಯ ಅನುದಾನವನ್ನು ಮೀಸಲಿಡುವಂತೆ ಶಾಸಕ ಯಶ್ಪಾಲ್ ಸುವರ್ಣ ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವರಿಗೆ ಮನವಿ ಮಾಡಿದರು.

ಶಾಸಕರ ಪ್ರಶ್ನೆಗೆ ಉತ್ತರಿಸಿದ ಸಚಿವ ಶರಣ ಪ್ರಕಾಶ್ ಪಾಟೀಲ್ ಈಗಾಗಲೇ ಪ್ರತಿ ಜಿಲ್ಲೆಗೆ ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಬದ್ಧವಾಗಿದ್ದು, ಉಡುಪಿ ಜಿಲ್ಲೆಯಲ್ಲಿ ಸರಕಾರಿ ಮೆಡಿಕಲ್ ಕಾಲೇಜು ಮಂಜೂರಾತಿ ಮುಂದಿನ ದಿನಗಳಲ್ಲಿ ಆದ್ಯತೆಯ ಮೇರೆಗೆ ಪರಿಗಣಿಸುವ ಭರವಸೆ ನೀಡಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ಖೇಲೋ ಇಂಡಿಯಾ ಯೂತ್ ಗೇಮ್ಸ್’ನ 8ನೇ ಆವೃತ್ತಿಯ ಲೋಗೋ ಮತ್ತು ಮ್ಯಾಸ್ಕಾಟ್ ಅನಾವರಣ

ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವ ಡಾ. ಮನ್ಸುಖ್ ಮಾಂಡವಿಯಾ ಮತ್ತು...

ಬಂಗಾಲ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಮತ್ತೊಮ್ಮೆ ಚಂಡಮಾರುತ ಸಾಧ್ಯತೆ

ನವದೆಹಲಿ, ನ.15: ಆಗ್ನೇಯ ಮತ್ತು ಅದನ್ನು ಹೊಂದಿಕೊಂಡಿರುವ ನೈರುತ್ಯ ಬಂಗಾಲ ಕೊಲ್ಲಿಯಲ್ಲಿ...

ಉಡುಪಿ ಸಂಪೂರ್ಣ ಸಾಕ್ಷರತಾ ಜಿಲ್ಲೆ ಗೌರವಕ್ಕೆ ಜಿಲ್ಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಕೊಡುಗೆ ಅಪಾರ: ಯಶ್ಪಾಲ್ ಸುವರ್ಣ

ಉಡುಪಿ, ನ. 15: ವಿಶ್ವದಲ್ಲಿಯೇ ಗರಿಷ್ಠ ಸಂಖ್ಯೆಯ ವಿದ್ಯಾರ್ಥಿಗಳನ್ನು ಹೊಂದಿರುವ ರಾಷ್ಟ್ರ...
error: Content is protected !!