Sunday, October 18, 2026
Sunday, October 18, 2026

ತೆಂಕನಿಡಿಯೂರು ಕಾಲೇಜು: ರಕ್ತದಾನ ಶಿಬಿರ

ತೆಂಕನಿಡಿಯೂರು ಕಾಲೇಜು: ರಕ್ತದಾನ ಶಿಬಿರ

Date:

ತೆಂಕನಿಡಿಯೂರು, ಮಾ.18: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಲಯನ್ಸ್ ಕ್ಲಬ್ ಉಡುಪಿ , ರೆಡ್ ಕ್ರಾಸ್ ಸೊಸೈಟಿ ಉಡುಪಿ, ರೆಡ್ ಕ್ರಾಸ್ ಮತ್ತು ಬ್ಲಡ್ ಬ್ಯಾಂಕ್ ಕುಂದಾಪುರ, ಐಕ್ಯೂಎಸಿ, ಯೂತ್ ರೆಡ್ ಕ್ರಾಸ್, ಎನ್.ಎಸ್.ಎಸ್., ರೋವರ್ಸ್ ರೇಂಜರ್ಸ್ ಘಟಕ, ಸಾಂಸ್ಕೃತಿಕ ಸಮಿತಿ, ಹಳೆ ವಿದ್ಯಾರ್ಥಿ ಸಂಘ, ದೈಹಿಕ ಶಿಕ್ಷಣ ವಿಭಾಗ, ವಿದ್ಯಾರ್ಥಿ ಸಂಘದ ಸಂಯುಕ್ತ ಆಶ್ರಯದಲ್ಲಿ ಮಾರ್ಚ್ 18 ರಂದು ರಕ್ತದಾನ ಶಿಬಿರ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

ಉದ್ಘಾಟನೆ ನೆರವೇರಿಸಿ ಮಾತನಾಡಿದ ರೆಡ್ ಕ್ರಾಸ್ ಕುಂದಾಪುರ ಬ್ಲಡ್ ಬ್ಯಾಂಕ್ ಅಧ್ಯಕ್ಷರಾದ ಜಯಕರ ಶೆಟ್ಟಿ ಅವರು, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಕ್ತದ ಅತೀವ ಕೊರತೆ ಇದ್ದು, ಯುವಜನರು ಹೆಚ್ಚಿನ ಸಂಖ್ಯೆಯಲ್ಲಿ ಸಾಮಾಜಿಕ ಕಳಕಳಿಯಿಂದ ರಕ್ತದಾನ ಮಾಡಲು ಮುಂದೆ ಬರಬೇಕು ಎಂದರು. ರಕ್ತದಾನ ಮಾಡುವ ಮೂಲಕ ತಮ್ಮ ಆರೋಗ್ಯವನ್ನು ಕಾಪಾಡುವ ಜತೆಗೆ ಸಾಮಾಜಿಕ ಸ್ವಾಸ್ಥ್ಯ ಕಾಪಾಡಿದಂತಾಗುತ್ತದೆ. ಈ ಕಾರಣದಿಂದ ರಕ್ತದಾನ ಎಲ್ಲಾ ದಾನಕ್ಕಿಂತ ಶ್ರೇಷ್ಠ ದಾನವಾಗಿದೆ ಎಂದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಂಶುಪಾಲರಾದ ಪ್ರೊ. ನಿತ್ಯಾನಂದ ವಿ ಗಾಂವಕರ್ ಅವರು, ಶೈಕ್ಷಣಿಕ ಕಲಿಕೆಯ ಜತೆಗೆ ಸಾಮಾಜಿಕ ಸೇವಾ ಮನೋಭಾವನೆಯನ್ನು ಯುವಜನತೆ ಬೆಳೆಸಿಕೊಂಡಲ್ಲಿ ಸದೃಢ ರಾಷ್ಟ್ರ ನಿರ್ಮಾಣ ಸಾಧ್ಯ ಎಂದರು. ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಉಡುಪಿ ಕಾರ್ಯದರ್ಶಿ ಡಾ. ಗಣನಾಥ ಶೆಟ್ಟಿ ಎಕ್ಕಾರು ಪ್ರಾಸ್ತಾವಿಕವಾಗಿ ಮಾತನಾಡಿ ಕಾರ್ಯಕ್ರಮದ ಔಚಿತ್ಯವನ್ನು ವಿವರಿಸಿದರು. ಲಯನ್ಸ್ ಕ್ಲಬ್ ಉಡುಪಿ ಅಧ್ಯಕ್ಷರಾದ ದಿನೇಶ್ ಕಿಣಿ, ಹಳೆ ವಿದ್ಯಾರ್ಥಿ ಸಂಘ ಉಪಾಧ್ಯಕ್ಷರಾದ ಮುನಾವರ್ ಖಾಸಿ, ಐಕ್ಯೂಎಸಿ ಸಂಯೋಜಕ ಡಾ. ವಿಷ್ಣುಮೂರ್ತಿ ಪ್ರಭು, ಎನ್.ಎಸ್.ಎಸ್. ಯೋಜನಾಧಿಕಾರಿ ಪ್ರಸಾದ್ ಎಚ್. ಎಂ., ಕುಂದಾಪುರ ರೆಡ್ ಕ್ರಾಸ್ ಕಾರ್ಯದರ್ಶಿ ಶಿವರಾಮ್ ಶೆಟ್ಟಿ, ಬೋಧಕ ಬೋಧಕೇತರರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಯೂತ್ ರೆಡ್ ಕ್ರಾಸ್ ಸಂಯೋಜಕರಾದ ಪ್ರಶಾಂತ ನೀಲಾವರ ಸ್ವಾಗತಿಸಿ ರೋವರ್ಸ್ ರೇಂಜರ್ಸ್ ಸಂಯೋಜಕ ಮರ್ವಿನ್ ಡಿಸೋಜಾ ವಂದಿಸಿದರು. ರೆಡ್ ಕ್ರಾಸ್ ನಾಯಕಿ ದ್ವಿತೀಯ ಬಿಸಿಎ ವಿದ್ಯಾರ್ಥಿನಿ ಪ್ರಥ್ವಿ ಕಾರ್ಯಕ್ರಮ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!