Tuesday, October 6, 2026
Tuesday, October 6, 2026

ಸರಕಾರಿ ಯೋಜನೆಗಳು ಫಲಾನುಭವಿಗಳ ಸ್ವಾವಲಂಬಿ ಬದುಕಿಗೆ ಆಧಾರವಾಗಲಿ: ಯಶ್ಪಾಲ್ ಸುವರ್ಣ

ಸರಕಾರಿ ಯೋಜನೆಗಳು ಫಲಾನುಭವಿಗಳ ಸ್ವಾವಲಂಬಿ ಬದುಕಿಗೆ ಆಧಾರವಾಗಲಿ: ಯಶ್ಪಾಲ್ ಸುವರ್ಣ

Date:

ಉಡುಪಿ, ಮಾ.21: 2025–26ನೇ ಸಾಲಿನ ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತ ಸುಧಾರಿತ ಉಪಕರಣ ಪೂರೈಕೆ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳಿಗೆ ಉಡುಪಿ ಶಾಸಕರಾದ ಯಶ್ಪಾಲ್ ಸುವರ್ಣ ತಮ್ಮ ಕಚೇರಿಯಲ್ಲಿ ಟೈಲರಿಂಗ್ ಮಿಷನ್, ಮರಗೆಲಸ, ಗಾರೆ ಕೆಲಸ, ಎಲೆಕ್ಟ್ರಿಷಿಯನ್, ಬ್ಯೂಟಿಪಾರ್ಲರ್ ಕಿಟ್ ಗಳನ್ನು 55 ಮಂದಿ ಫಲಾನುಭವಿಗಳಿಗೆ ಸಾಂಕೇತಿಕವಾಗಿ ವಿತರಿಸಿದರು.

ಕಿಟ್ ಗಳನ್ನು ವಿತರಿಸಿ ಮಾತನಾಡಿದ ಶಾಸಕ ಯಶ್ಪಾಲ್ ಸುವರ್ಣ, ಈ ಯೋಜನೆಗಳ ಮೂಲಕ ಆಯಾ ವೃತ್ತಿಯಲ್ಲಿ ತೊಡಗಿರುವವರಿಗೆ ಅಗತ್ಯವಾದ ಕಿಟ್ ಗಳನ್ನು ನೀಡಲಾಗಿದ್ದು, ಇದರಿಂದ ಜನರ ಉದ್ಯೋಗದಲ್ಲಿ ಸ್ಥಿರತೆ ಹಾಗೂ ಆದಾಯ ಹೆಚ್ಚಳಕ್ಕೆ ಸಹಾಯವಾಗಲಿದೆ. ಹಲವರು ತಮ್ಮ ಜೀವನೋಪಾಯವನ್ನು ಸುಧಾರಿಸಿಕೊಳ್ಳಲು ಈ ಯೋಜನೆಗಳ ನೆರವು ಪ್ರಮುಖವಾಗಲಿದೆ. ಸ್ವಯಂ ಉದ್ಯೋಗಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಇಂತಹ ಯೋಜನೆಗಳನ್ನು ಸರಕಾರ ಜಾರಿಗೆ ತಂದಿದ್ದು ಜನರು ಈ ಮೂಲಕ ಸ್ವಾವಲಂಬಿ ಜೀವನ ನಡೆಸಬೇಕು ಎಂದರು.

ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಮೂಲಕ ಕೃಷ್ಣ ಪೂಜಾರಿ ರವರಿಗೆ ಕೃತಕ ಕಾಲು ವಿತರಿಸಲಾಯಿತು.

ಗ್ರಾಮಾಂತರ ಕೈಗಾರಿಕಾ ಕೇಂದ್ರದ ಉಪ ನಿರ್ದೇಶಕರಾದ ಜಿ. ವಾಮನ ನಾಯಕ್, ಹಂದಾಡಿ ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷರಾದ ಶೋಭಾ, ಲಲಿತಾ ಬಾಯಿ ನಿವೃತ್ತ ಶಿಕ್ಷಕರು, ಕೆಂಜೂರು ಶಾಲೆಯ ಮುಖ್ಯ ಶಿಕ್ಷಕರಾದ ಕೆ. ಶಾಂತಾರಾಮ ಶೆಟ್ಟಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಫಲಾನುಭವಿಗಳು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅ.8: ನೇರ ಸಂದರ್ಶನ

ಉಡುಪಿ, ಅ.5: ನಗರದ ಶಾಂತ ಎಲೆಕ್ಟ್ರಿಕಲ್ಸ್ ಪ್ರೈ ಲಿ., ಆಭರಣ ಜುವೆರ‍್ಸ್...

ಶ್ರೀ ಕಾಳಾವರ ವರದರಾಜ ಎಂ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು: ಅಭಿವಿನ್ಯಾಸ ಕಾರ್ಯಕ್ರಮ

ಕುಂದಾಪುರ, ಅ.5: ಶ್ರೀ ಕಾಳಾವರ ವರದರಾಜ ಎಂ ಶೆಟ್ಟಿ ಸರ್ಕಾರಿ ಪ್ರಥಮ...

ವಿಶ್ವ ಕೊಂಕಣಿ ಕೇಂದ್ರ: ಕನಕದಾಸರ ಸಾಹಿತ್ಯ ವಿಚಾರಸಂಕಿರಣ; ಗೀತ ಗಾಯನ

ಮಂಗಳೂರು, ಅ.5: ಕೊಂಕಣಿ ಭಾಷೆ ಮತ್ತು ಸಂಸ್ಕೃತಿ ಪ್ರತಿಷ್ಠಾನ ವಿಶ್ವ ಕೊಂಕಣಿ...

‘ಗಾಂಧೀ ಚಿಂತನೆ ಮತ್ತು ಪ್ರಸ್ತುತತೆ’ ಉಪನ್ಯಾಸ

ಬಸ್ರೂರು, ಅ.5: ಗಾಂಧೀ ಜಯಂತಿ ಪ್ರಯುಕ್ತ ಶ್ರೀ ಶಾರದಾ ಕಾಲೇಜು ಬಸ್ರೂರಿನಲ್ಲಿ...
error: Content is protected !!