Thursday, July 23, 2026
Thursday, July 23, 2026

ಮಣೂರು: ಸ್ವಚ್ಛತಾ ಅಭಿಯಾನ

ಮಣೂರು: ಸ್ವಚ್ಛತಾ ಅಭಿಯಾನ

Date:

ಕೋಟ, ಮಾ.22: ಮಣೂರು ಹೇರಂಬ ಮಹಾಗಣಪತಿ ಹಾಗೂ ಮಹಾಲಿಂಗೇಶ್ವರ ಸಾನಿಧ್ಯ ಕಾರಣಿಕ ಕ್ಷೇತ್ರವಾಗಿದ್ದು ಇಲ್ಲಿನ ವಾರ್ಷಿಕ ರಥೋತ್ಸವ ಅರ್ಥಪೂರ್ಣವಾಗಿಸಲು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರ ಭಾಗವಹಿಸುವಿಕೆ ಬಹುಮುಖ್ಯವಾಗಿದೆ ಎಂದು ಮಣೂರು ಮಹಾಲಿಂಗೇಶ್ವರ ದೇಗುಲದ ಅಧ್ಯಕ್ಷ ಸತೀಶ್ ಹೆಚ್ ಕುಂದರ್ ಹೇಳಿದರು.

ಭಾನುವಾರ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ 295 ನೇ ವಾರದ ಪರಿಸರ ಸ್ನೇಹಿ ಕಾರ್ಯಕ್ರಮದ ಸಲುವಾಗಿ ಮಣೂರು ದೇಗುಲ ಜಾತ್ರೆಯ ಪ್ರಯುಕ್ತ ಮಣೂರು ಫ್ರೆಂಡ್ಸ್ ಮಣೂರು ಇವರ ಸಂಯೋಜನೆಯೊಂದಿಗೆ ದೇಗುಲ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು. ದೇಗುಲ ಸ್ವಚ್ಛತೆಯಿಂದ ಮನಸ್ಸು ಭಕ್ತಿಭಾವಕ್ಕೆ ಸಾಕ್ಷಿಯಾಗಿದೆ. ಇದಕ್ಕೆ ಇಲ್ಲಿನ ಈ ಸಂಘಟನೆಗಳ ದೇಗುಲ ಸ್ವಚ್ಛತಾ ಕಾರ್ಯಕ್ರಮ ನಿದರ್ಶನವಾಗಿದೆ ಎಂದು ಹೇಳಿದರು.

ಪಂಚವರ್ಣದ ಅಧ್ಯಕ್ಷ ಮನೋಹರ್ ಪೂಜಾರಿ, ಮಣೂರು ಫ್ರೆಂಡ್ಸ್ ಅಧ್ಯಕ್ಷ ರಾಘವೇಂದ್ರ ಪೂಜಾರಿ, ಪಂಚವರ್ಣ ಮಹಿಳಾ ಅಧ್ಯಕ್ಷೆ ಲಲಿತಾ ಪೂಜಾರಿ, ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ, ಮಣೂರು ಫ್ರೆಂಡ್ಸ್ ಗೌರವಾಧ್ಯಕ್ಷ ಸುರೇಶ್ ಆಚಾರ್ ಮುಂತಾದವರು ಇದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬೊಮ್ಮರಬೆಟ್ಟು: ಗ್ರಾಮಸ್ಥರ ಅಹವಾಲು ಸ್ವೀಕಾರ

ಕಾಪು, ಜು.21: ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ...

ರಿಕ್ಷಾ ಚಾಲಕರ ಅಗತ್ಯ ಬೇಡಿಕೆಗಳ ಈಡೇರಿಕೆಗೆ ವಿಶೇಷ ಆದ್ಯತೆ: ಯಶ್ಪಾಲ್ ಸುವರ್ಣ

ಬ್ರಹ್ಮಾವರ, ಜು.21: ಸಾರ್ವಜನಿಕರ ಸಾರಿಗೆ ವ್ಯವಸ್ಥೆಯಲ್ಲಿ ವಿಶೇಷ ಪಾತ್ರವಹಿಸುವ ರಿಕ್ಷಾ ಚಾಲಕರ...

ಬಡಾ ಗ್ರಾಮ ಪಂಚಾಯತ್: ವಿವಿಧ ಸವಲತ್ತು ವಿತರಣೆ

ಕಾಪು, ಜು.21: ಬಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ...

ಕ್ರೀಡಾ ದಾಖಲೆಗಳ ಮಾಹಿತಿ ಹಾಗೂ ತರಬೇತಿ ಸಾಧನೆಗೆ ಸ್ಪೂರ್ತಿ: ಡಾ.ಸುಧಾಕರ ಶೆಟ್ಟಿ

ಮಣಿಪಾಲ, ಜು.21: ಕ್ರೀಡಾ ದಾಖಲೆಗಳ ಮಾಹಿತಿ ಹಾಗೂ ತರಬೇತಿ ವಿದ್ಯಾರ್ಥಿಗಳ ಸಾಧನೆಗೆ...
error: Content is protected !!