Sunday, October 18, 2026
Sunday, October 18, 2026

ಸಾಸ್ತಾನ: ಆರೋಗ್ಯ ಶಿಬಿರ

ಸಾಸ್ತಾನ: ಆರೋಗ್ಯ ಶಿಬಿರ

Date:

ಕೋಟ, ಮಾ.22: ಆರೋಗ್ಯವಂತ ಸಮಾಜ ನಿರ್ಮಿಸುವಲ್ಲಿ ವೈದ್ಯರ ಸೇವೆ ಬಹುಮುಖ್ಯ. ಅದೇ ರೀತಿ ಆರೋಗ್ಯವಂತ ಸಮಾಜಕ್ಕೆ ಆರೋಗ್ಯ ಶಿಬಿರಗಳು ಅಡಿಗಲ್ಲು ಇದ್ದಂತೆ ಎಂದು ಸಾಸ್ತಾನದ ಸಾಮಾಜಿಕ ಕಾರ್ಯಕರ್ತ ಐರೋಡಿ ವಿಠ್ಠಲ್ ಪೂಜಾರಿ ಹೇಳಿದರು. ಭಾನುವಾರ ಪ್ರಾಥಮಿಕ ಆರೋಗ್ಯ ಕೇಂದ್ರ ಸಾಸ್ತಾನ ಇಲ್ಲಿ ಎ.ಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಮಂಗಳೂರು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಸಾಸ್ತಾನ, ರೋಟರಿ ಕ್ಲಬ್ ಸಾಸ್ತಾನ – ಹಂಗಾರಕಟ್ಟೆ ಇವರ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನ ಅಧ್ಯಕ್ಷೆ ಜ್ಯೋತಿ ಉದಯ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅಭ್ಯಾಗತರಾಗಿ ಎ.ಜೆ ಆಸ್ಪತ್ರೆ ಮಂಗಳೂರು ಇದರ ಹೃದ್ರೋಗ ತಜ್ಞ ಡಾ.ಅಶೋಕ್ ಉಪಾಧ್ಯಾಯ, ಎಜೆ ಆಸ್ಪತ್ರೆಯ ಪ್ರಮುಖ ವೈದ್ಯರಾದ ಆರತಿ ಎಸ್ ರಾಜ್, ನಿರೀಕ್ಷಾ, ನಿಖಿಲ್ ಉಪಸ್ಥಿತರಿದ್ದರು. ಸಾಸ್ತಾನ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ ರಾಘವೇಂದ್ರ ರಾವ್ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಫಾರ್ಮಸಿ ಅಧಿಕಾರಿ ಸೀಮಾ ಮ್ಯಾಥ್ಯು ಕಾರ್ಯಕ್ರಮ ನಿರೂಪಿಸಿದರು. ರೋಟರಿ ಕಾರ್ಯದರ್ಶಿ ಮುರುಳೀಧರ ನಾಯರಿ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!