Sunday, March 29, 2026
Sunday, March 29, 2026

ಮುದರಂಗಡಿ: ರಸ್ತೆ ಅಭಿವೃದ್ಧಿಗೆ ಗುದ್ದಲಿಪೂಜೆ

ಮುದರಂಗಡಿ: ರಸ್ತೆ ಅಭಿವೃದ್ಧಿಗೆ ಗುದ್ದಲಿಪೂಜೆ

Date:

ಕಾಪು, ಮಾ.23: ಕಾಪು ವಿಧಾನಸಭಾ ಕ್ಷೇತ್ರದ ಮುದರಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ರಸ್ತೆ ಅಭಿವೃದ್ಧಿಗೆ 30 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆ ಹಾಗೂ ಉದ್ಘಾಟನೆಯನ್ನು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ನೆರವೇರಿಸಿದರು.

ಮುದರಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಾಂತೂರು ಗ್ರಾಮದ ವಾದಿರಾಜ ಆಚಾರ್ಯ ಮನೆಯಿಂದ ಅಶ್ವತ್ಥಕಟ್ಟೆ ವರಗೆ ರಸ್ತೆ ಅಭಿವೃದ್ಧಿ – 10 ಲಕ್ಷ, ಪಿಲಾರು ಗ್ರಾಮ ತೆಂಕಿಲ ಜಾರುಬೊಟ್ಟು ರಸ್ತೆ ಕಾಂಕ್ರೀಟೀಕರಣ -10 ಲಕ್ಷ ಸೇರಿದಂತೆ ಒಟ್ಟು 20 ಲಕ್ಷ ರೂಪಾಯಿ ವೆಚ್ಚದ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಪಿಲಾರು ಗ್ರಾಮದ ತಂಬಿದಬೆಟ್ಟು ಜಾರಂದಾಯ ದೈವಸ್ಥಾನ ರಸ್ತೆ ಡಾಂಬರೀಕರಣ – 10 ಲಕ್ಷ ಇದರ ಉದ್ಘಾಟನೆಯನ್ನು ನೆರವೇರಿಸಲಾಯಿತು.

ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಮೋಹಿನಿ, ಮಾಜಿ ಸದಸ್ಯರಾದ ರವೀಂದ್ರ ಪ್ರಭು, ಶಿವರಾಮ್ ಭಂಡಾರಿ, ಯಶೋಧ, ಸ್ಥಳೀಯರಾದ ಸುಧೀರ್ ರಾವ್, ವಿಶ್ವನಾಥ ಶೆಟ್ಟಿ, ಜಯರಾಮ್ ಶೆಟ್ಟಿ, ಮಿಥೇಶ್, ಹರಿದಾಸ್ ಪ್ರಭು, ಶೈಲೇಂದ್ರ ಶೆಟ್ಟಿ, ಅಶೋಕ್ ನಾಯಕ್, ಸತೀಶ್ ಆಚಾರ್ಯ, ಗಂಗಾಧರ ಶೆಟ್ಟಿ, ಭೋಜು ಹೆಗ್ಡೆ, ದೇವಿಪ್ರಸಾದ್ ಶೆಟ್ಟಿ, ಹರಿಣಾಕ್ಷ ಶೆಟ್ಟಿ, ನಾಗೇಶ್ ನಾಯಕ್ ಮುಂತಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನೋಯ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ

ನವದೆಹಲಿ, ಮಾ.28: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ನೋಯ್ಡಾದ ಜೇವರ್‌ನಲ್ಲಿ...

ಮಲಬಾರ್ ವಿಶ್ವರಂಗ ಪುರಸ್ಕಾರ

ಉಡುಪಿ, ಮಾ.28: ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ)ಮತ್ತು ಮಲಬಾರ್ ಗೋಲ್ಡ್ ಅಂಡ್...

ಇಂಧನ ಬೆಲೆ ಏರಿಕೆ ಇಲ್ಲ; ಲಾಕ್‌ಡೌನ್ ವದಂತಿಗಳನ್ನು ತಳ್ಳಿ ಹಾಕಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

ನವದೆಹಲಿ, ಮಾ.27: ಪೆಟ್ರೋಲ್, ಡೀಸೆಲ್ ಮತ್ತು ವಿಮಾನಯಾನ ಟರ್ಬೈನ್ ಇಂಧನ (ಎಟಿಎಫ್)...
error: Content is protected !!