ಕುಂದಾಪುರ, ಮಾ.23: ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕುಂದಾಪುರ ಕೋಟೇಶ್ವರ ಇಲ್ಲಿನ ಆಂತರಿಕ ಗುಣಮಟ್ಟ ಭರವಸಾ ಕೋಶ ಮತ್ತು ಮಹಿಳಾ ವೇದಿಕೆಯ ಜಂಟಿ ಸಹಯೋಗದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಸೈಂಟ್ ಮೇರಿಸ್ ಕಾಲೇಜು ಶಿರ್ವ ಇಲ್ಲಿಯ ಸಹಾಯಕ ಪ್ರಾಧ್ಯಾಪಕರಾದ ಡಾ. ಗುಲಾಬಿ ಪೂಜಾರಿ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಮಹಿಳಾ ದಿನಾಚರಣೆಯ ಮಹತ್ವವನ್ನು ತಿಳಿಸಿ, ಇಂದಿಗೂ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳ ಕುರಿತಾಗಿ ಮಾತನಾಡಿದರು. ವಿದ್ಯಾರ್ಥಿನಿಯರು ಆಧುನಿಕ ತಂತ್ರಜ್ಞಾನದ ಈ ಕಾಲದಲ್ಲಿ ಎಚ್ಚರಿಕೆಯಿಂದ ನಡೆದುಕೊಳ್ಳುವಂತೆ ಕಿವಿಮಾತು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ವಹಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ನಾಗರಾಜ ವೈದ್ಯ ಎಂ., ಆಂತರಿಕ ಗುಣಮಟ್ಟ ಭರವಸಾ ಕೋಶದ ಸಂಚಾಲಕರಾದ ನಾಗರಾಜ ಯು., ಮಹಿಳಾ ವೇದಿಕೆಯ ಸಂಚಾಲಕರಾದ ರೋಹಿಣಿ, ಕಾಲೇಜಿನ ಉಪನ್ಯಾಸಕರು, ಬೋಧಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಅಂತಿಮ ಬಿ.ಎ. ವಿದ್ಯಾರ್ಥಿನಿ ಕೃತಿಕಾ ಕಾರ್ಯಕ್ರಮ ನಿರೂಪಿಸಿದರು. ದ್ವಿತೀಯ ಎಂ.ಕಾಂನ ಪೂಜಾ ವಂದಿಸಿದರು.




By
ForthFocus™