Tuesday, September 29, 2026
Tuesday, September 29, 2026

ಇನ್ಸಿಡೆಂಟ್ 2026: ನಿಟ್ಟೆ ವಿದ್ಯಾರ್ಥಿಗಳಿಗೆ ಬಹುಮಾನ

ಇನ್ಸಿಡೆಂಟ್ 2026: ನಿಟ್ಟೆ ವಿದ್ಯಾರ್ಥಿಗಳಿಗೆ ಬಹುಮಾನ

Date:

ಕಾರ್ಕಳ, ಮಾ.24: ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ಆಯೋಜಿಸಿದ ವಾರ್ಷಿಕ ಸಾಂಸ್ಕೃತಿಕ ಉತ್ಸವವಾದ ‘ಇನ್ಸಿಡೆಂಟ್ 2026’ ರಲ್ಲಿ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಭಾಗವಹಿಸಿ ವಿವಿಧ ಬಹುಮಾನಗಳನ್ನು ತಮ್ಮದಾಗಿಸಿಕೊಂಡಿರುವರು. ಸಂಗೀತ ವಿಭಾಗದಲ್ಲಿ, ಸ್ಟೀರಿಯೊ ಕ್ಲಬ್ ನ ಆದಿತ್ಯ ಪಿ. ಭಟ್ ರಾಗ ರಾಪ್ಸೋಡಿ ಎಂಬ ಏಕವ್ಯಕ್ತಿ ಗಾಯನ ಸ್ಪರ್ಧೆಯಲ್ಲಿ ಎರಡನೇ ಬಹುಮಾನವನ್ನು ಪಡೆದರು. ಇವರಿಗೆ ಆಶ್ವಿತ್ ಪ್ರಭು ಹಿನ್ನಲೆ ಸಂಗೀತದಲ್ಲಿ ಸಾಥ್ ನೀಡಿದರು. ಕಲಾಂಜಲಿ ಕ್ಲಬ್ ನ ಟೀಮ್ ಆರ್ ಎಫ್ ಸಿ ‘ಪ್ರೊಮ್ನೇಡ್’ ವೆಸ್ಟರ್ನ್ ಗ್ರೂಪ್ ಡ್ಯಾನ್ಸ್ ಸ್ಪರ್ಧೆಯಲ್ಲಿ ಮೊದಲ ಸ್ಥಾನವನ್ನು ಗಳಿಸಿತು. ಟೀಮ್ ತಾಲೀಮ್ ಬೀದಿ ನಾಟಕ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನವನ್ನು ಗೆದ್ದುಕೊಂಡಿತು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಷ್ಟ್ರೀಯ ಲೋಕ್ ಅದಾಲತ್: ಒಂದೇ ದಿನದಲ್ಲಿ ಒಟ್ಟು 61,367 ಪ್ರಕರಣ ಇತ್ಯರ್ಥ

ಉಡುಪಿ, ಸೆ.28: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇವರ...

ಕೃಷಿ ಪ್ರವಾಸೋದ್ಯಮಕ್ಕೆ ಒತ್ತು ನೀಡಲು ಚಿಂತನೆ: ಸಿ.ಇ.ಓ ಪ್ರತೀಕ್ ಬಾಯಲ್

ಉಡುಪಿ, ಸೆ.28: ಜಿಲ್ಲೆಯ ನೈಸರ್ಗಿಕ ಸೌಂದರ್ಯ, ಧಾರ್ಮಿಕ ಕ್ಷೇತ್ರಗಳು ಹಾಗೂ ಕಡಲತೀರಗಳ...

ವಿದ್ಯಾಪೋಷಕ್ ವಿನಮ್ರ ಸಹಾಯ ವಿತರಣಾ ಸಮಾರಂಭ ಸಮಾರೋಪ

ಉಡುಪಿ, ಸೆ.28: ಯಕ್ಷಗಾನ ಕಲಾರಂಗ (ರಿ.), ಉಡುಪಿ ಇದರ ಅಂಗ ಸಂಸ್ಥೆಯಾದ...

ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ: ಜಯಂಟ್ಸ್ ಗ್ರೇಟ್ ಡೇ ಕಾರ್ಯಕ್ರಮ

ಬ್ರಹ್ಮಾವರ, ಸೆ.28: ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ ಜಯಂಟ್ಸ್ ಕೇರ್ ಫೌಂಡೇಶನ್...
error: Content is protected !!