Monday, September 23, 2024
Monday, September 23, 2024

ಕೊಕ್ಕರ್ಣೆಯಲ್ಲಿ ರಸ್ತೆ ಅಪಘಾತ- ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

ಕೊಕ್ಕರ್ಣೆಯಲ್ಲಿ ರಸ್ತೆ ಅಪಘಾತ- ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

Date:

ಮಣಿಪಾಲ: 38 ವರ್ಷದ ನವೀನರವರಿಗೆ ಬ್ರಹ್ಮಾವರ ತಾಲೂಕಿನ ಕೊಕ್ಕರ್ಣೆ ಬಳಿ 08.06.2022ರಂದು ರಾತ್ರಿ 10.00 ಗಂಟೆಗೆ ರಸ್ತೆ ಅಪಘಾತ ಸಂಭವಿಸಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ದಿನಾಂಕ 9.06.2022ರಂದು ಬೆಳಿಗ್ಗೆ 9.50. ಕ್ಕೆ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಮಲ್ಲಿಕಾ ಇವರ ಪತಿಯಾದ ನವೀನ ಅವರು ಅಪಘಾತದ ಪರಿಣಾಮದಿಂದ ತೀವ್ರತರವಾದ ಗಾಯವನ್ನು ಹೊಂದಿದ್ದರು.

ಕೆ.ಎಂ.ಸಿ ವೈದ್ಯರು ನವೀನ ಅವರನ್ನು ರಕ್ಷಿಸಲು ಪ್ರಯತ್ನಿಸಿದರೂ, ಅವರು ಚೇತರಿಸಿಕೊಳ್ಳುವ ಯಾವುದೇ ಲಕ್ಷಣಗಳು ಕಂಡುಬರಲಿಲ್ಲ. ಮಾನವ ಅಂಗಾಂಗ ಕಸಿ ಕಾಯ್ದೆ 1994 ರ ಅನುಸಾರ ನವೀನ್ ಅವರನ್ನು 6 ಗಂಟೆಗಳ ಅಂತರದಲ್ಲಿ ಎರಡು ಬಾರಿ ಪರಿಶೀಲಿಸಿ, ಅಧಿಕೃತವಾಗಿ ಪರಿಣಿತ ವೈದ್ಯರ ತಂಡವು ರೋಗಿಯ ಮೆದುಳು ನಿಷ್ಕ್ರೀಯಗೊಂಡಿದೆ ಎಂದು ಘೋಷಿಸಿದರು. ಮೊದಲನೆಯದು 10.06.2022 ರಂದು ಸಂಜೆ 5.00ಕ್ಕೆ ಮತ್ತು ಎರಡನೆಯದು 10.06.2022 ರಂದು ರಾತ್ರಿ 11.35ಕ್ಕೆ.

ತರುವಾಯ, ನವೀನ್ ಅವರ ಪತ್ನಿ ಮಲ್ಲಿಕಾ ಮತ್ತು ಅವರ ಕುಟುಂಬ ಸದಸ್ಯರು ಇತರ ರೋಗಿಗಳ ಜೀವ ಉಳಿಸಲು ಕಾರ್ಯಸಾಧ್ಯವಾದ ಅಂಗಗಳನ್ನು ದಾನ ಮಾಡಲು ತಮ್ಮ ಇಚ್ಛೆಯನ್ನು ವ್ಯಕ್ತಪಡಿಸಿದರು. ಎರಡು ಮೂತ್ರಪಿಂಡಗಳು, ಯಕೃತ್ತು, ಚರ್ಮ ಮತ್ತು ಎರಡು ಕಾರ್ನಿಯಾಗಳು/ಕಣ್ಣುಗುಡ್ಡೆಗಳನ್ನು ತೆಗೆದು 6 ಜನರ ಜೀವ ಉಳಿಸಲು ಸಹಾಯವಾಗಿದೆ.

ಜೀವನಸಾರ್ಥಕತೆ ಪ್ರೋಟೋಕಾಲ್ಗಳು ಮತ್ತು ನಿರ್ಧಾರಗಳ ಪ್ರಕಾರ, ನೋಂದಾಯಿತ ರೋಗಿಗಳಿಗೆ ಎರಡು ಕಾರ್ನಿಯಾಗಳು ಮತ್ತು ಒಂದು ಮೂತ್ರಪಿಂಡ ಮತ್ತು ಚರ್ಮ ವನ್ನು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ರೋಗಿಗಳಿಗೆ ಬಳಸಲಾಯಿತು. ಯಕೃತ್ತು ಮತ್ತು ಒಂದು ಕಿಡ್ನಿ ಯನ್ನು ಕೆಎಂಸಿ ಆಸ್ಪತ್ರೆ ಅಂಬೇಡ್ಕರ್ ಸರ್ಕಲ್ ಮಂಗಳೂರಿಗೆ ಕಳುಹಿಸಿಕೊಡಲಾಯಿತು.

ನವೀನ್ ಅವರ ಪತ್ನಿ ಮತ್ತು ಕುಟುಂಬ ಸದಸ್ಯರು “ಅಂಗದಾನ ಒಂದು ಪುಣ್ಯದ ಕೆಲಸ. ನವೀನ್ ಅಂಗದಾನ ಮಾಡಿ ತನ್ನ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾನೆ ಎಂದು ತಿಳಿಸಿದ್ದಾರೆ.

ವೈದ್ಯಕೀಯ ಅಧೀಕ್ಷಕರಾದ ಡಾ. ಅವಿನಾಶ ಶೆಟ್ಟಿ, ಜೀವ ಉಳಿಸುವ ನಿಟ್ಟಿನಲ್ಲಿ ಅಂಗದಾನ ಶ್ರೇಷ್ಟವಾದ ಕೆಲಸವಾಗಿದ್ದು, ಅತ್ಯಂತ ಮಹತ್ವವನ್ನು ಪಡೆದಿದೆ. ಜನರು ಈ ರೀತಿಯ ಉತ್ತಮ ಕಾರ್ಯಗಳಿಗೆ ಪ್ರೋತ್ಸಾಹಿಸಬೇಕು ಎಂದು ತಿಳಿಸಿ ಅಂಗದಾನ ಮಾಡಲು ನಿರ್ಧರಿಸಿದ ಕುಟುಂಬಕ್ಕೆ ಕ್ರತಜ್ಞತೆ ಸಲ್ಲಿಸಿದರು. ಅಂಗಾಂಗ ದಾನದ ಬಗ್ಗೆ ಸಾರ್ವಜನಿಕರಲ್ಲಿ ದಿನದಿಂದ ದಿನಕ್ಕೆ ಜಾಗೃತಿ ಹೆಚ್ಚಾಗುತ್ತಿರುವುದು ಒಳ್ಳೆಯ ಸಂಗತಿ ಎಂದು ಅಭಿಪ್ರಾಯಪಟ್ಟರು.

ದಾನ ಮಾಡಿದ ಅಂಗಗಳನ್ನು ಉಡುಪಿ ಮತ್ತು ದಕ್ಷಿಣ ಕನ್ನಡ ಪೊಲೀಸ್ ಇಲಾಖೆಯ ಬೆಂಬಲದೊಂದಿಗೆ ಮಣಿಪಾಲದಿಂದ ಮಂಗಳೂರಿಗೆ ಗ್ರೀನ್ ಕಾರಿಡಾರ್ ಮೂಲಕ ಸ್ವೀಕರಿಸುವ ಆಸ್ಪತ್ರೆಗೆ ವರ್ಗಾಯಿಸಲಾಯಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಭಾಷಣ ಸ್ಪರ್ಧೆ

ನಿಟ್ಟೆ, ಸೆ.23: ರೋಟರಿ ಕ್ಲಬ್ ನಿಟ್ಟೆ ವತಿಯಿಂದ ಸಾಕ್ಷರತಾ ಸಪ್ತಾಹದ ಅಂಗವಾಗಿ...

ಸಮ್ಮೇಳನದ ಪೂರ್ವಭಾವಿ ಸಭೆ

ಕಾಪು, ಸೆ.23: ಬಿಜೆಪಿ ಒಬಿಸಿ ಮೋರ್ಚಾ ಉಡುಪಿ ಜಿಲ್ಲೆ ವತಿಯಿಂದ ಸೆಪ್ಟೆಂಬರ್...

ದಸರಾ ಪ್ರದರ್ಶನಕ್ಕೆ ಕಲಾಕೃತಿ ಆಹ್ವಾನ

ಬೆಂಗಳೂರು, ಸೆ.21: ನಾಡಹಬ್ಬ ಮೈಸೂರು ದಸರಾ ಮಹೋತ್ಸವ - 2024ರಲ್ಲಿ ಲಲಿತಕಲೆ...

ಮ್ಯಾಕ್ಸಿಕ್ಯಾಬ್ ನ ಜಿಪಿಎಸ್ ಹಾಗೂ ಪ್ಯಾನಿಕ್ ಬಟನ್ ಕಡ್ಡಾಯ ನಿಯಮ ಸಡಿಲಿಕೆಗೆ ಮನವಿ

ಬೆಂಗಳೂರು, ಸೆ.22: ಉಡುಪಿ ಜಿಲ್ಲಾ ಟ್ಯಾಕ್ಸಿ ಮೆನ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್...
error: Content is protected !!