Sunday, April 26, 2026
Sunday, April 26, 2026

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಕಾರ್ಯಾಧ್ಯಕ್ಷರಾಗಿ ಇಂದ್ರಾಳಿ ಜಯಕರ ಶೆಟ್ಟಿ ಆಯ್ಕೆ

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಕಾರ್ಯಾಧ್ಯಕ್ಷರಾಗಿ ಇಂದ್ರಾಳಿ ಜಯಕರ ಶೆಟ್ಟಿ ಆಯ್ಕೆ

Date:

ಉಡುಪಿ, ಮಾ.28: ಉಡುಪಿ ತಾಲೂಕು ​16ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಕಾರ್ಯಾಧ್ಯಕ್ಷರಾಗಿ ​ಜಯಕರ ಶೆಟ್ಟಿ ​ಇಂದ್ರಾಳಿ​, ಕಾರ್ಯದರ್ಶಿಯಾಗಿ ಸತೀಶ್ ಕೊಡವೂರು, ಜೊತೆ ಕಾರ್ಯದರ್ಶಿಯಾಗಿ ಪೂರ್ಣಿಮಾ ಜನಾರ್ದನ್ ​ರವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಅಧ್ಯಕ್ಷ ರವಿರಾಜ್ ಹೆಚ್. ಪಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಆಯ್ಕೆ ನಡೆಯಿತು. ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು 16ನೇ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ ಉಡುಪಿಯ ರಾಜಾಂಗಣದ ಮಥುರಾ ಕಂಫರ್ಟ್ಸ್ ಸಭಾಂಗಣದಲ್ಲಿ ನೆರವೇರಿತು.

ಹಿರಿಯರು, ಸಾಹಿತ್ಯಾಭಿಮಾನಿಗಳು, ಸಾಹಿತಿಗಳು, ಕಲಾವಿದರು, ಭಾಗವಹಿಸಿದ್ದ ಈ ಸಭೆಯಲ್ಲಿ ಸಮ್ಮೇಳನದ ಸ್ವಾಗತ ಸಮಿತಿಯನ್ನು ಹಾಗೂ ವಿವಿಧ ಸಮಿತಿಗಳನ್ನು ರಚಿಸಲಾಯಿತು. 

ಮೇ 3ರಂದು ​ಕನ್ನಡ ಸಾಹಿತ್ಯ ಸಮ್ಮೇಳನವನ್ನು ಉಡುಪಿಯ ಯಕ್ಷಗಾನ ಕಲಾರಂಗದ ಐವೈಸಿ ​ಹವಾನಿಯಂತ್ರಿತ ಸಭಾಂಗಣದಲ್ಲಿ​ ಅದ್ದೂರಿಯಾಗಿ ನಡೆಸಲಾಗುವುದು​. ಸಮ್ಮೇಳನ ಸರ್ವಾಧ್ಯಕ್ಷರಾಗಿ ಈಗಾಗಲೇ ಖ್ಯಾತ ವೈದ್ಯ, ಸಾಹಿತಿ, ಕಲಾವಿದ ಡಾ. ಭಾಸ್ಕರಾನಂದ ಕುಮಾರ್ ಇವರನ್ನು ಆಯ್ಕೆ ಮಾಡಲಾಗಿದೆ.

ವೇದಿಕೆಯಲ್ಲಿ ಉಡುಪಿ ವಿಶ್ವನಾಥ್ ಶೆಣೈ, ​ವಿಶ್ರಾಂತ ಬ್ಯಾಂಕ್ ಅಧಿಕಾರಿ ಸಿ .ಎಸ್.ರಾವ್, ತಾಲೂಕು ಗೌರವ ಕಾರ್ಯದರ್ಶಿಗಳಾದ ಜನಾರ್ದನ ಕೊಡವೂರು, ರಂಜಿನಿ ವಸಂತ್, ಕೋಶಾಧ್ಯಕ್ಷ ರಾಜೇಶ್ ಭಟ್ ಪಣಿಯಾಡಿ​ ​ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಟ್ರಂಪ್ ಭೋಜನಕೂಟದಲ್ಲಿ ಗುಂಡು ಹಾರಾಟ; ಅಮೆರಿಕ ಅಧ್ಯಕ್ಷ ಸ್ಥಳಾಂತರ

ಯು.ಬಿ.ಎನ್.ಡಿ., ಏ.26: ವಾಷಿಂಗ್ಟನ್ ಹಿಲ್ಟನ್‌ನ ಲಾಬಿಯಲ್ಲಿ ಶಂಕಿತ ಗುಂಡು ಹಾರಾಟದ ವರದಿಯಾದ...

ಪೇಟಿಎಂ ಪೇಮೆಂಟ್ಸ್ ಬ್ಯಾಂಕ್‌ನ ಬ್ಯಾಂಕಿಂಗ್ ಪರವಾನಗಿಯನ್ನು ದ್ದುಗೊಳಿಸಿದ ಆರ್.ಬಿ.ಐ

ನವದೆಹಲಿ, ಏ.26: ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್‌ಗೆ ನೀಡಲಾದ ಬ್ಯಾಂಕಿಂಗ್ ಪರವಾನಗಿಯನ್ನು...

ನೀತಿ ಆಯೋಗದ ಉಪಾಧ್ಯಕ್ಷರಾಗಿ ಅಶೋಕ್ ಕುಮಾರ್ ಲಾಹಿರಿ ನೇಮಕ

ನವದೆಹಲಿ, ಏ.26: ಸರ್ಕಾರವು ನೀತಿ ಆಯೋಗವನ್ನು ಪುನರ್ರಚಿಸಿದೆ. ಅರ್ಥಶಾಸ್ತ್ರಜ್ಞ ಅಶೋಕ್ ಕುಮಾರ್...
error: Content is protected !!