Sunday, October 18, 2026
Sunday, October 18, 2026

ಪರಿಸರದ ಸಮತೋಲನಕ್ಕೆ ನೀರು ಅತ್ಯಗತ್ಯ: ರಾಘವೇಂದ್ರ ಕರ್ವಾಲು

ಪರಿಸರದ ಸಮತೋಲನಕ್ಕೆ ನೀರು ಅತ್ಯಗತ್ಯ: ರಾಘವೇಂದ್ರ ಕರ್ವಾಲು

Date:

ಉಡುಪಿ, ಮಾ.29: ಗಿಡಮರಗಳು, ಪ್ರಾಣಿ-ಪಕ್ಷಿಗಳು ಮತ್ತು ಪರಿಸರದ ಸಮತೋಲನಕ್ಕೆ ನೀರು ಅತ್ಯಗತ್ಯ ಎಂದು ವ್ಯಕ್ತಿತ್ವ ವಿಕಸನ ತರಬೇತುದಾರ ರಾಘವೇಂದ್ರ ಪ್ರಭು ಕರ್ವಾಲು ಹೇಳಿದರು. ಅವರು ಮಿಷನ್ ಆಸ್ಪತ್ರೆ ಉಡುಪಿ ಇದರ ವತಿಯಿಂದ ಉದ್ಯಾವರ ಹಿಂದೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ವಿಶ್ವ ನೀರು ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು. ನಾವು ನೀರಿನ ಮಹತ್ವವನ್ನು ಅರಿಯದೆ ಬಹಳಷ್ಟು ನೀರನ್ನು ಪೋಲು ಮಾಡುತ್ತಿದ್ದೇವೆ ಇದು ಸಲ್ಲದು. ನೀರನ್ನು ಹಿತ ಮಿತವಾಗಿ ಬಳಕೆ ಮಾಡಿ ಆ ಮೂಲಕ ಅಮೂಲ್ಯವಾದ ಸಂಪತ್ತನ್ನು ಉಳಿಸಬೇಕಾಗಿದೆ ಎಂದರು. ವಿದ್ಯಾರ್ಥಿಗಳು ಈಗಿನಿಂದಲೇ ನೀರು ಉಳಿಸುವ ಅದೇ ರೀತಿ ಪ್ರಕೃತಿಯನ್ನು ಬೆಳೆಸುವ ಕಾರ್ಯ ಪ್ರಾರಂಭಿಸಬೇಕು ಎಂದು ಕರೆ ನೀಡಿದರು. ಮಿಷನ್ ಆಸ್ಪತ್ರೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ರೋಹಿ ರತ್ನಾಕರ್, ಶಾಲಾ ಮುಖ್ಯ ಶಿಕ್ಷಕಿ ಅನುರಾಧ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!