Sunday, October 18, 2026
Sunday, October 18, 2026

ಇಂದ್ರಾಣಿ ನದಿದಂಡೆ ಸಂರಕ್ಷಣಾ ಕಾಮಗಾರಿಗೆ ಗುದ್ದಲಿ ಪೂಜೆ

ಇಂದ್ರಾಣಿ ನದಿದಂಡೆ ಸಂರಕ್ಷಣಾ ಕಾಮಗಾರಿಗೆ ಗುದ್ದಲಿ ಪೂಜೆ

Date:

ಕೊಡವೂರು, ಮಾ.29: ಉಡುಪಿ ನಗರಸಭೆ ಕೊಡವೂರು ವಾರ್ಡಿನ ವಿಪ್ರ ಭವನದ ಬಳಿ ಸಣ್ಣ ನೀರಾವರಿ ಇಲಾಖೆಯ ಮೂಲಕ ಸುಮಾರು 4 ಕೋಟಿ ವೆಚ್ಚದಲ್ಲಿ 1.5 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಇಂದ್ರಾಣಿ ನದಿದಂಡೆ ಸಂರಕ್ಷಣಾ ಕಾಮಗಾರಿಗೆ ಶಾಸಕ ಯಶ್ಪಾಲ್ ಸುವರ್ಣ ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ಕೊಡವೂರು ಭಾಗದ ಜನತೆಯ ಬಹುದಿನದ ಬೇಡಿಕೆಯಾಗಿರುವ ನದಿದಂಡೆ ಸಂರಕ್ಷಣಾ ಕಾಮಗಾರಿಗೆ ವಿಶೇಷ ಆದ್ಯತೆ ನೀಡಿ ಸಣ್ಣ ನೀರಾವರಿ ಇಲಾಖೆಯ ಮೂಲಕ 4 ಕೋಟಿ ಅನುದಾನ ಒದಗಿಸಿ ಕಾಮಗಾರಿ ಆರಂಭಗೊಂಡಿದ್ದು, ಇಂದ್ರಾಣಿ ನದಿ ತ್ಯಾಜ್ಯ ನೀರಿನಿಂದ ಮಲಿನಗೊಂಡು ಸ್ಥಳೀಯ ಜನರು ಗಂಭೀರ ಸಮಸ್ಯೆ ಎದುರಿಸುತ್ತಿದ್ದು ಈಗಾಗಲೇ 30 ಕೋಟಿ ವೆಚ್ಚದಲ್ಲಿ ತ್ಯಾಜ್ಯ ಸಂಸ್ಕರಣಾ ಘಟಕವನ್ನು ಉನ್ನತೀಕರಣ ಕಾಮಗಾರಿ ಪ್ರಗತಿಯಲ್ಲಿದ್ದು ಶೀಘ್ರದಲ್ಲಿಯೇ ಈ ಸಮಸ್ಯೆಗೆ ಪರಿಹಾರ ಒದಗಿಸುವ ಭರವಸೆ ನೀಡಿದರು.

ನಿಕಟಪೂರ್ವ ನಗರಸಭಾ ಸದಸ್ಯರಾದ ವಿಜಯ ಕೊಡವೂರು ಮಾತನಾಡಿ, ಶಾಸಕ ಯಶ್ಪಾಲ್ ಸುವರ್ಣ ಕೊಡವೂರು ವಾರ್ಡಿನ 3 ಕೆರೆಗಳ ಅಭಿವೃದ್ಧಿಗೆ ಸುಮಾರು 2.25 ಕೋಟಿ ಅನುದಾನ ಒದಗಿಸಿದ್ದು, ಹಲವು ರಸ್ತೆಗಳ ಅಭಿವೃದ್ಧಿ, ದಾರಿ ದೀಪ ವ್ಯವಸ್ಥೆ, ನಮ್ಮ ಕ್ಲಿನಿಕ್ ಸಹಿತ ವಿವಿಧ ಯೋಜನೆಗಳಿಗೆ ವಿಶೇಷ ಸಹಕಾರ ನೀಡಿದ್ದು, ಇಂದ್ರಾಣಿ ನದಿದಂಡೆ ಸಂರಕ್ಷಣಾ ಕಾಮಗಾರಿಗೆ 4 ಕೋಟಿ ಅನುದಾನ ಮಂಜೂರು ಮಾಡಿರುವ ಶಾಸಕರಿಗೆ ವಾರ್ಡಿನ ಜನತೆಯ ಪರವಾಗಿ ಅಭಿನಂದನೆ ಸಲ್ಲಿಸುವುದಾಗಿ ಹೇಳಿದರು.

ಉಡುಪಿ ನಗರಸಭೆ ನಿಕಟಪೂರ್ವ ಅಧ್ಯಕ್ಷರಾದ ಪ್ರಭಾಕರ ಪೂಜಾರಿ, ಸ್ಥಳೀಯ ಮುಖಂಡರಾದ ರವಿರಾಜ್ ಹೆಗ್ಡೆ, ಕಾಳು ಸೇರಿಗಾರ, ರಾಘವೇಂದ್ರ ರಾವ್, ಹರೀಶ್ ಕೆ. ಕೋಟ್ಯಾನ್, ನಾರಾಯಣ ಬಲ್ಲಾಳ್, ವಿನಯ ಪಡುಕರೆ, ಹರೀಶ್ ಪಾಳೆಕಟ್ಟೆ, ಅಮಿತ್ ಗರ್ಡೆ, ವಿನಯ ಗರ್ಡೆ ಉಪಸ್ಥಿತರಿದ್ದರು. ಪ್ರಭಾತ್ ಕೊಡವೂರು ಸ್ವಾಗತಿಸಿ, ರವಿ ಸಾಲ್ಯಾನ್ ಪಾಳೆಕಟ್ಟೆ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!