Friday, July 24, 2026
Friday, July 24, 2026

ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನಕ್ಕೆ ಸಂಸದ ಬಿ ವೈ ರಾಘವೇಂದ್ರ ಭೇಟಿ

ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನಕ್ಕೆ ಸಂಸದ ಬಿ ವೈ ರಾಘವೇಂದ್ರ ಭೇಟಿ

Date:

ಕಾಪು, ಮಾ.29: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ ವೈ ರಾಘವೇಂದ್ರ ಅವರು ಭಾನುವಾರ ಕುಟುಂಬ ಸಮೇತರಾಗಿ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಉಚ್ಚಂಗಿ ಸಹಿತ ಮಾರಿಯಮ್ಮ ದೇವಿಯ ದರ್ಶನ ಪಡೆದರು.

ಕಾಪು ಶಾಸಕ ಮತ್ತು ದೇವಳದ ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಗುರ್ಮೆ ಸುರೇಶ್ ಶೆಟ್ಟಿ, ಅಧ್ಯಕ್ಷ ರಾಜರ್ಷಿ ಕೆ. ವಾಸುದೇವ ಶೆಟ್ಟಿ ಸಂಸದರನ್ನು ಆತ್ಮೀಯವಾಗಿ ಬರಮಾಡಿಕೊಂಡರು.

ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಅವರು ವ್ಯವಸ್ಥಾಪನಾ ಸಮಿತಿ ಅಭಿವೃದ್ಧಿ ಸಮಿತಿಯ ಸಮ್ಮುಖದಲ್ಲಿ ಪ್ರಾರ್ಥಿಸಿ ಅಮ್ಮನ ಅನುಗ್ರಹ ಪ್ರಸಾದವನ್ನು ನೀಡಿ ಗೌರವಿಸಿದರು.

ಅಭಿವೃದ್ಧಿ ಸಮಿತಿ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ದೇವಳದ ಪ್ರಬಂಧಕ ಗೋವರ್ಧನ್ ಸೇರಿಗಾರ್ ಮತ್ತು ಸಿಬ್ಬಂದಿ ಲಕ್ಷ್ಮಣ್ ಶೆಟ್ಟಿ ಮಂಡೇಡಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತ್ರಿಶಾ ವಿದ್ಯಾ ಕಾಲೇಜು: ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಓರಿಯೆಂಟೇಷನ್ ಕಾರ್ಯಕ್ರಮ

ಕಟಪಾಡಿ, ಜು.23: ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜ್ ಆಫ್ ಕಾಮರ್ಸ್ ಅಂಡ್...

ಶೈಕ್ಷಣಿಕ ಬದುಕಿನ ಅರ್ಥವನ್ನು ಅರಿತುಕೊಳ್ಳಿ: ವಿದ್ಯಾರ್ಥಿಗಳಿಗೆ ಡಾ. ಕೆ. ಉಮೇಶ್ ಶೆಟ್ಟಿ ಕರೆ

ಕುಂದಾಪುರ, ಜು.23: ವಿದ್ಯಾರ್ಥಿಗಳು ಪಠ್ಯಪೂರಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಧನಾತ್ಮಕವಾಗಿ ಚಿಂತಿಸಿ,...

ಕಟ್ಟಡ ಕಾಮಗಾರಿ ಕೆಲಸ ನಿರ್ವಹಿಸುತ್ತಿದ್ದ ಬಾಲ ಕಾರ್ಮಿಕನ ರಕ್ಷಣೆ

ಉಡುಪಿ, ಜು.23: ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರ್ ಗ್ರಾಮದಲ್ಲಿ ನಡೆಯುತ್ತಿರುವ ಕಟ್ಟಡ...
error: Content is protected !!