Monday, October 5, 2026
Monday, October 5, 2026

ಗುಡ್ ಫ್ರೈಡೆ ಸೇರಿದಂತೆ ಸಾಲು ಸಾಲು ರಜೆ; ಬೆಂಗಳೂರಿನಿಂದ ಕರಾವಳಿಗೆ ಬರುವ ಪ್ರಯಾಣಿಕರಿಗೆ ವಿಶೇಷ ರೈಲು ವ್ಯವಸ್ಥೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಗುಡ್ ಫ್ರೈಡೆ ಸೇರಿದಂತೆ ಸಾಲು ಸಾಲು ರಜೆ; ಬೆಂಗಳೂರಿನಿಂದ ಕರಾವಳಿಗೆ ಬರುವ ಪ್ರಯಾಣಿಕರಿಗೆ ವಿಶೇಷ ರೈಲು ವ್ಯವಸ್ಥೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ

Date:

ಉಡುಪಿ, ಮಾ.30: ಗುಡ್ ಫ್ರೈಡೆ ಸೇರಿದಂತೆ ಮುಂದಿನ ವಾರ ಸಾಲು ಸಾಲು ರಜೆಗಳಿರುವುದರಿಂದ ಬೆಂಗಳೂರಿನಿಂದ ಕರಾವಳಿಗೆ ಬರುವ ಪ್ರಯಾಣಿಕರಿಗೆ ವಿಶೇಷ ರೈಲು ವ್ಯವಸ್ಥೆ ಮಾಡಲಾಗಿದೆ ಎಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಈ ರೈಲು ಬೆಂಗಳೂರಿನಿಂದ ಗುರುವಾರ ರಾತ್ರಿ ಹೊರಟು ಮಂಗಳೂರಿನ ಪಡೀಲು ಬೈಪಾಸ್ ಮಾರ್ಗವಾಗಿ ಸುರತ್ಕಲ್ ಮೂಲಕ ಉಡುಪಿ ಹಾಗೂ ಕಾರವಾರ ತಲುಪಲಿದೆ. ಯುಗಾದಿ ಸಂದರ್ಭದಲ್ಲಿ ರೈಲು ಹೊರಡುವ ಸಮಯ ವ್ಯತ್ಯಾಸದಿಂದ ಪ್ರಯಾಣಿಕರಿಗೆ ಅನಾನುಕೂಲವಾಗಿದ್ದನ್ನು ಪರಾಮರ್ಶಿಸಿ ಈ ಬಾರಿ ಸೂಕ್ತ ಸಮಯಕ್ಕೆ ರೈಲು ಹೊರಡಿಸಲಾಗಿದೆ. ಈ ಯೋಜನೆಯನ್ನು ಪ್ರಯಾಣಿಕರು ಬಳಸಬಹುದಾಗಿದೆ.
ಈ ಯೋಜನೆಯನ್ನು ಒದಗಿಸಿದ ಕೇಂದ್ರ ಸಚಿವರಾದ ಅಶ್ವಿನಿ ವೈಷ್ಣವ್ ಹಾಗೂ ವಿ ಸೋಮಣ್ಣ ಅವರಿಗೆ ಮತ್ತು ರೈಲ್ವೆ ಇಲಾಖೆಯ ಅಧಿಕಾರಿಗಳಿಗೆ ಧನ್ಯವಾದಗಳನ್ನು ಸಂಸದರು ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ಜಾನಕಿ ನಮನ’

ಉಡುಪಿ, ಅ.4: ಉಡುಪಿಯ ಕೋಸ್ಟಲ್‌ ಸ್ಟಾರ್‌ ಮ್ಯೂಸಿಕ್‌ ಕ್ಲಬ್‌ ಆಶ್ರಯದಲ್ಲಿ ಕರ್ಣಾಟಕ...

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಡಾ. ನಿಖಿಲ್ ಗುಪ್ತ ಭೇಟಿ

ಕಾಪು, ಅ.4: ಮಹಾರಾಷ್ಟ್ರದ ಕಾನೂನು ಮತ್ತು ಸುವ್ಯವಸ್ಥೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ...

ಕುಪ್ಮಾ ಉತ್ತಮ ಉಪನ್ಯಾಸಕ ಪ್ರಶಸ್ತಿ ಪ್ರದಾನ

ಮಣಿಪಾಲ, ಅ.4: ಕರ್ನಾಟಕ ಅನುದಾನ ರಹಿತ ಪದವಿಪೂರ್ವ ಕಾಲೇಜು ಆಡಳಿತ ಮಂಡಳಿಗಳ...
error: Content is protected !!