Tuesday, October 6, 2026
Tuesday, October 6, 2026

ಹಾಲು ಉತ್ಪಾದಕರ ಒಕ್ಕೂಟ: ತರಬೇತಿ ಕಾರ್ಯಾಗಾರ

ಹಾಲು ಉತ್ಪಾದಕರ ಒಕ್ಕೂಟ: ತರಬೇತಿ ಕಾರ್ಯಾಗಾರ

Date:

ಕೋಟ, ಮಾ.31: ಹಾಲು ಉತ್ಪಾದಕರ ಸಂಘದ ಅಧ್ಯಕ್ಷರು ನಿರ್ದೇಶಕರುಗಳಿಗೆ ತರಬೇತಿ ಅತ್ಯಗತ್ಯ ಎಂದು ದ.ಕ. ಹಾಲು ಉತ್ಪಾದಕರ ಒಕ್ಕೂಟ ಮಂಗಳೂರು ಇದರ ಅಧ್ಯಕ್ಷ ಕೊಡವೂರು ರವಿರಾಜ ಹೆಗ್ಡೆ ಹೇಳಿದರು. ಕೋಟ ಸಹಕಾರಿ ವ್ಯವಸಾಯಕ ಸಂಘದ ಸಭಾಂಗಣದಲ್ಲಿ ಕರ್ನಾಟಕ ಹಾಲು ಮಹಾ ಮಂಡಳಿಯ ಮೈಸೂರು ತರಬೇತಿ ಕೇಂದ್ರ ಹಾಗೂ ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟ ಮಂಗಳೂರು ಇವರ ಸಹಯೋಗದೊಂದಿಗೆ ಉಡುಪಿ ಜಿಲ್ಲೆಯ ಆಯ್ದ ಸಂಘಗಳ ಆಡಳಿತ ಮಂಡಳಿ ಸದಸ್ಯರ ಮೂರು ದಿನದ ತರಬೇತಿ ಕಾರ್ಯಾಗಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮುಖ್ಯ ಅಭ್ಯಾಗತಾರಾಗಿ ದ.ಕ ಹಾಲು. ಉತ್ಪಾದಕರ ಒಕ್ಕೂಟ ನಿರ್ದೇಶಕ ಶಿವಮೂರ್ತಿ ಕೆ., ಕೋಟ ಸಿ.ಎ ಬ್ಯಾಂಕ್ ಉಪಾಧ್ಯಕ್ಷ ಎಚ್.ನಾಗರಾಜ್ ಹಂದೆ, ದ.ಕ. ಹಾ. ಉತ್ಪಾದಕರ ಒಕ್ಕೂಟ ವ್ಯವಸ್ಥಾಪಕ ರವಿರಾಜ್ ಉಡುಪ, ಉಪ ವ್ಯವಸ್ಥಾಪಕರಾದ ಮಾಧವ ಐತಾಳ್, ಶಂಕರ ನಾಯ್ಕ್, ಕೋಟ ಸಿಎ ಬ್ಯಾಂಕ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಶರತ್ ಕುಮಾರ್ ಶೆಟ್ಟಿ, ವಿಸ್ತರಣಾಧಿಕಾರಿ ಪ್ರತಿಭಾ ಉಪಸ್ಥಿತರಿದ್ದರು. ವಿವಿಧ ವ್ಯಾಪ್ತಿಯ ಸಂಘದ ಅಧ್ಯಕ್ಷರು, ಕಾರ್ಯದರ್ಶಿಗಳು ಈ ಕಾರ್ಯಾಗಾರದಲ್ಲಿ ಭಾಗಿಯಾದರು. ಒಕ್ಕೂಟದ ವಿಸ್ತರಣಾಧಿಕಾರಿ ಉಮೇಶ್ ಕುಂದರ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅ.8: ನೇರ ಸಂದರ್ಶನ

ಉಡುಪಿ, ಅ.5: ನಗರದ ಶಾಂತ ಎಲೆಕ್ಟ್ರಿಕಲ್ಸ್ ಪ್ರೈ ಲಿ., ಆಭರಣ ಜುವೆರ‍್ಸ್...

ಶ್ರೀ ಕಾಳಾವರ ವರದರಾಜ ಎಂ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು: ಅಭಿವಿನ್ಯಾಸ ಕಾರ್ಯಕ್ರಮ

ಕುಂದಾಪುರ, ಅ.5: ಶ್ರೀ ಕಾಳಾವರ ವರದರಾಜ ಎಂ ಶೆಟ್ಟಿ ಸರ್ಕಾರಿ ಪ್ರಥಮ...

ವಿಶ್ವ ಕೊಂಕಣಿ ಕೇಂದ್ರ: ಕನಕದಾಸರ ಸಾಹಿತ್ಯ ವಿಚಾರಸಂಕಿರಣ; ಗೀತ ಗಾಯನ

ಮಂಗಳೂರು, ಅ.5: ಕೊಂಕಣಿ ಭಾಷೆ ಮತ್ತು ಸಂಸ್ಕೃತಿ ಪ್ರತಿಷ್ಠಾನ ವಿಶ್ವ ಕೊಂಕಣಿ...

‘ಗಾಂಧೀ ಚಿಂತನೆ ಮತ್ತು ಪ್ರಸ್ತುತತೆ’ ಉಪನ್ಯಾಸ

ಬಸ್ರೂರು, ಅ.5: ಗಾಂಧೀ ಜಯಂತಿ ಪ್ರಯುಕ್ತ ಶ್ರೀ ಶಾರದಾ ಕಾಲೇಜು ಬಸ್ರೂರಿನಲ್ಲಿ...
error: Content is protected !!