Wednesday, July 29, 2026
Wednesday, July 29, 2026

ಬಿ. ಬಿ. ಹೆಗ್ಡೆ ಕಾಲೇಜು: ತೆಕ್ಕಟ್ಟೆ ಕಾಮಾಕ್ಷಿ ಫಾರ್ಮ್ ಅಧ್ಯಯನ ಭೇಟಿ

ಬಿ. ಬಿ. ಹೆಗ್ಡೆ ಕಾಲೇಜು: ತೆಕ್ಕಟ್ಟೆ ಕಾಮಾಕ್ಷಿ ಫಾರ್ಮ್ ಅಧ್ಯಯನ ಭೇಟಿ

Date:

ಕುಂದಾಪುರ, ಮಾ.31: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವತಿಯಿಂದ ಅಧ್ಯಯನ ಭೇಟಿಯ ಅಂಗವಾಗಿ ವಿದ್ಯಾರ್ಥಿಗಳಿಗೆ ಕೃಷಿ ಮತ್ತು ಕೃಷಿ ಆಧಾರಿತ ಉದ್ಯಮಗಳ ಕುರಿತು ಪ್ರಾಯೋಗಿಕ ಜ್ಞಾನ ನೀಡುವ ಉದ್ದೇಶದಿಂದ ಕೆದೂರು ತೆಕ್ಕಟ್ಟೆಯ ಕಾಮಾಕ್ಷಿ ಫಾರ್ಮ್ಗೆ ಅಧ್ಯಯನ ಭೇಟಿ ಆಯೋಜಿಸಲಾಯಿತು. ತೆಕ್ಕಟ್ಟೆ ಕಾಮಾಕ್ಷಿ ಫಾರ್ಮ್ನ ಪ್ರವರ್ತಕರಾದ ಮಹಿಳಾ ಉದ್ಯಮಿ ದಿವ್ಯ ನಾಯಕ್ ಅವರು ವಿದ್ಯಾರ್ಥಿಗಳಿಗೆ ವಿವಿಧ ಜಾತಿಯ ಹಲಸಿನ ಹಣ್ಣುಗಳ ಬಗ್ಗೆ ವಿವರವಾದ ಮಾಹಿತಿ ನೀಡಿದರು. ಹಲಸಿನ ಹಣ್ಣಿನ ವಿವಿಧ ಖಾದ್ಯಗಳು, ಅವುಗಳ ವೈಶಿಷ್ಟ್ಯತೆ, ಬೆಳವಣಿಗೆ ವಿಧಾನಗಳು ಹಾಗೂ ಮಾರುಕಟ್ಟೆ ಸಾಧ್ಯತೆಗಳ ಕುರಿತು ಮಾಹಿತಿ ನೀಡಿದರು. ಕೃಷಿಯನ್ನು ಆಧರಿಸಿ ಉದ್ಯಮ ಆರಂಭಿಸುವ ಅವಕಾಶಗಳ ಬಗ್ಗೆ ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕ ಮಾರ್ಗದರ್ಶನ ನೀಡಿದರು.

ವಿದ್ಯಾರ್ಥಿಗಳು ಕೃಷಿ ಕ್ಷೇತ್ರದ ಸಾಧಕ – ಬಾಧಕಗಳ ಬಗ್ಗೆ ಸಂವಾದ ನಡೆಸಿ, ಪ್ರಾಯೋಗಿಕ ಜ್ಞಾನವನ್ನು ಪಡೆದುಕೊಂಡರು. ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ವೀಣಾ ವಾಸುದೇವ ಭಟ್, ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ದೀಪಾ ಪೂಜಾರಿ ಹಾಗೂ ಅಕ್ಷಯ್ ಕುಮಾರ್ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಿವೃತ್ತ ಶಿಕ್ಷಕ ಮಲ್ಪೆ ರಾಘವೇಂದ್ರರಿಗೆ ಸೇವಾ ಪ್ರಶಸ್ತಿ

ಕಟಪಾಡಿ, ಜು.28: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದಲ್ಲಿ...

ಹೆಜಮಾಡಿ ಟೋಲ್ ಸಮಸ್ಯೆ: ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಶಾಸಕರ ಸಭೆ

ಹೆಜಮಾಡಿ, ಜು.28: ಹೆಜಮಾಡಿ ಟೋಲ್ ಸಮಸ್ಯೆಗೆ ಸಂಬಂಧಿಸಿದಂತೆ ಶಾಸಕರಾದ ಗುರ್ಮೆ ಸುರೇಶ್...

ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ: ಸಮಿತಿ ಸದಸ್ಯರಿಂದ ಧರ್ಮಸ್ಥಳ ಭೇಟಿ

ಬ್ರಹ್ಮಾವರ, ಜು.28: ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ ಇದರ ಅಭಿವೃದ್ಧಿ ಮತ್ತು...
error: Content is protected !!