Sunday, October 18, 2026
Sunday, October 18, 2026

ಕಾಪು ಸರಕಾರಿ ಕಾಲೇಜು: ಅಂತರಾಷ್ಟ್ರಿಯ ಮಹಿಳಾ ದಿನಾಚರಣೆ

ಕಾಪು ಸರಕಾರಿ ಕಾಲೇಜು: ಅಂತರಾಷ್ಟ್ರಿಯ ಮಹಿಳಾ ದಿನಾಚರಣೆ

Date:

ಕಾಪು, ಮಾ.31: ಸರಕಾರಿ ಪ್ರಥಮ ದರ್ಜೆ ಕಾಲೇಜು ಕಾಪು ಇಲ್ಲಿ ಮಹಿಳಾ ವೇದಿಕೆ ಹಾಗೂ ಕ್ರೀಡಾ ವಿಭಾಗದ ವತಿಯಿಂದ ಅಂತರಾಷ್ಟ್ರಿಯ ಮಹಿಳಾ ದಿನಾಚರಣೆ ಆಚರಿಸಲಾಯಿತು ಮುಖ್ಯ ಅತಿಥಿಯಾಗಿ ಸಾಮಾಜಿಕ ಉದ್ಯಮಿಯಾಗಿರುವ ರೇಣು ಜಯರಾಮ್‌ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಉಧ್ಘಾಟಿಸಿ, ಕೊಟ್ಟು ಗಳಿಸಿ: ಒಟ್ಟಿಗೆ ಬೆಳೆಯೋಣ ಎನ್ನುವ ವಿಷಯದ ಬಗ್ಗೆ ಮಾತನಾಡಿದರು. ಮಹಿಳೆಯರು ಅಬಲೆಯಲ್ಲ ಸಬಲೆ ಮಹಿಳೆಯರ ಸಾಧನೆಯ ಬಗ್ಗೆ ಮತ್ತು ಅವರಲ್ಲಿರುವ ಧ್ಯೆರ್ಯವನ್ನು ಈಗಿನ ವಿದ್ಯಾರ್ಥಿನಿಯರು ತಮ್ಮ ಜೀವನದಲ್ಲಿ ಹೇಗೆ ಆಳವಡಿಸಿಕೊಳ್ಳಬೇಕು ಹಾಗೂ ಕೊರೋನಾ ಸಮಯದಲ್ಲಿ ಕಟಪಾಡಿಯ ಮಹಿಳೆ ಮನೆಯಲ್ಲಿ ಮಾಸ್ಕ್‌ ತಯಾರಿಸಿ ತನ್ನ ಕುಟುಂಬದವರನ್ನು ಸಾಕಿದ್ದು ಹಾಗೆಯೇ ವಿದ್ಯಾರ್ಥಿಗಳು ಮೆನೆಯಲ್ಲಿ ಹೇಗೆ ಸ್ವಉದ್ಯಮ ಮಾಡಬೇಕು ಎನ್ನುವ ಬಗ್ಗೆ ಸವಿಸ್ತಾರವಾಗಿ ವಿವರಿಸಿದರು. ಮಹಿಳಾ ದಿನಾಚರಣೆ ಅಂಗವಾಗಿ ಕ್ರೀಡಾ ವಿಭಾಗದ ವತಿಯಿಂದ ಮಹಿಳಾ ಕ್ರಿಕೆಟ್‌ ಪಂದ್ಯಾಟ ನಡೆಯಿತು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಗೋಪಾಲಕ್ರಷ್ಣ ಗಾಂವಕರ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮ ಸಂಯೋಜಕರಾದ ಮಹಿಳಾ ವೇದಿಕಯ ಸಂಘಟಕರಾದ ಯಶೋಧ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ವೇದಿಕೆಯಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಯಾದ ಪ್ರೊ.ದೀಪಿಕಾ ಸುವರ್ಣ, ಐಕ್ಯೂಎಸಿ ಸಂಚಾಲಕರಾದ ಡಾ.ರೋಶನಿ ಯಶವಂತ್, ದೈಹಿಕ ಶಿಕ್ಷಣ ನಿರ್ದೇಶಕರಾದ ಸವಿತಾ ಉಪಸ್ಥಿತರಿದ್ದರು.

ಜಾನ್ವಿ ಪ್ರಾರ್ಥಿಸಿದರು. ರಿಶಿಕಾ ಕಾರ್ಯಕ್ರಮ ನಿರೂಪಿಸಿದರು. ಮಹಿಳಾ ವೇದಿಕೆಯ ಕಾರ್ಯದರ್ಶಿ ಅನುಷಾ ಅತಿಥಿಗಳನ್ನು ಪರಿಚಯಿಸಿದರು. ಸಹ ಕಾರ್ಯದರ್ಶಿ ಪ್ರೀತಿ ವಂದಿಸಿದರು. ಕಾಲೇಜಿನ ಪ್ರಾಧ್ಯಾಪಕರು, ಉಪನ್ಯಾಸಕರು, ಬೋಧಕೇತರ ಸಿಬ್ಬಂದಿಗಳು, ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!