Monday, September 7, 2026
Monday, September 7, 2026

ಸರಸ್ವತಿ ವಿದ್ಯಾಲಯದಲ್ಲಿ ಪ್ರಥಮ ಪಿಯುಸಿ ಆರಂಭೋತ್ಸವ

ಸರಸ್ವತಿ ವಿದ್ಯಾಲಯದಲ್ಲಿ ಪ್ರಥಮ ಪಿಯುಸಿ ಆರಂಭೋತ್ಸವ

Date:

ಕುಂದಾಪುರ: ಜ್ಞಾನಾರ್ಜನೆ ವಿದ್ಯಾರ್ಥಿಗಳ ಪ್ರಮುಖ ಗುರಿಯಾಗಬೇಕು. ಆ ನಿಟ್ಟಿನಲ್ಲಿ ಶ್ರದ್ಧೆ ಪ್ರಮಾಣಿಕತೆ ಛಲದೊಂದಿಗೆ ಸಾಗಿದಾಗ ಜೀವನದಲ್ಲಿ ಅದ್ಭುತ ಯಶಸ್ಸನ್ನು ಕಾಣಲು ಸಾಧ್ಯ ಎಂದು ಗಂಗೊಳ್ಳಿಯ ಜಿ.ಎಸ್.ವಿ.ಎಸ್ ಅಸೋಷಿಯೆಷನ್ ಕಾರ್ಯದರ್ಶಿ ಹೆಚ್. ಗಣೇಶ್ ಕಾಮತ್ ಅಭಿಪ್ರಾಯಪಟ್ಟರು.

ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಪ್ರಥಮ ಪಿಯುಸಿ ತರಗತಿಗಳ ಆರಂಭೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಕಾಲೇಜಿನ ಸಂಸ್ಕೃತ ಉಪನ್ಯಾಸಕ ವೆಂಕಟೇಶ ಮೂರ್ತಿ ಎನ್.ಸಿ. ಕಾಲೇಜಿನ ಶಿಸ್ತು ನೀತಿ ನಿಯಮಗಳ ಕುರಿತು ಮಾತನಾಡಿದರು.

ವಾಣಿಜ್ಯಶಾಸ್ತ್ರ ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ ಕಾಲೇಜಿನಲ್ಲಿ ದೊರೆಯುವ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು. ಕಾಲೇಜು ಕಛೇರಿಯ ದ್ವಿತೀಯ ದರ್ಜೆ ಸಹಾಯಕಿ ಪ್ರಮೋದ ಪೈ ಎಮ್. ಜಿ. ಕಛೇರಿ ಸೌಲಭ್ಯಗಳು ಮತ್ತು ವಿದ್ಯಾರ್ಥಿ ವೇತನದ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಕಳೆದ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಆರು ನೂರಕ್ಕು ಆಧಿಕ ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಮ್ ಸಿ ಅಧ್ಯಕ್ಷತೆ ವಹಿಸಿದ್ದರು.

ಆಂಗ್ಲ ಭಾಷಾ ಉಪನ್ಯಾಸಕ ಥಾಮಸ್ ಪಿ.ಎ ಸಿಬ್ಬಂದಿ ವರ್ಗದವರನ್ನು ಪರಿಚಯಿಸಿದರು. ವಾಣಿಜ್ಯಶಾಸ್ತ್ರ ಉಪನ್ಯಾಸಕ ರಾಘವೇಂದ್ರ ಭಟ್ ವಿದ್ಯಾರ್ಥಿಗಳ ಪಟ್ಟಿ ವಾಚಿಸಿದರು. ವಿದ್ಯಾರ್ಥಿ ಪ್ರತಿನಿಧಿಯಾಗಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ ಮೂರನೇ ರ್ಯಾಂಕ್ ಪಡೆದ ನೇಹಾ ಎಸ್ ಕೊಡೇರಿ ಉಪಸ್ಥಿತರಿದ್ದರು.

ಹಿಂದಿ ಉಪನ್ಯಾಸಕ ನಾರಾಯಣ ಈ ನಾಯ್ಕ್ ಸ್ವಾಗತಿಸಿ, ರಸಾಯನಶಾಸ್ತ್ರ ಉಪನ್ಯಾಸಕಿ ಪವಿತ್ರಾ ಕಾರ್ಯಕ್ರಮ ನಿರೂಪಿಸಿದರು. ಇತಿಹಾಸ ಉಪನ್ಯಾಸಕ ಭಾಸ್ಕರ್ ಶೆಟ್ಟಿ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಜ್ಞಾನದ ಕ್ತತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವವರೇ ಶಿಕ್ಷಕರು: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಸೆ.6: ಅಜ್ಞಾನದ ಕತ್ತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವ ವ್ಯಕ್ತಿಯೇ ಶಿಕ್ಷಕ....

ಸೆ. 9: ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ಸೆ.6: ನಗರದ ಕಲ್ಸಂಕ ಅಂಬಾಗಿಲು ರಸ್ತೆಯಲ್ಲಿರುವ ಸಾನ್ವಿ ಟ್ರೇರ‍್ಸ್ನಲ್ಲಿ ಸೆಪ್ಟೆಂಬರ್...

ಮಣಿಪಾಲ ಜ್ಞಾನಸುಧಾ: ಶಿಕ್ಷಕರ ದಿನಾಚರಣೆ; ನಿವೃತ್ತ ಶಿಕ್ಷಕರಿಗೆ ಸನ್ಮಾನ

ಮಣಿಪಾಲ, ಸೆ.6: ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದಲ್ಲಿ...

ಡಾ. ಪಾರ್ವತಿ ಜಿ. ಐತಾಳರ ಎರಡು ಕೃತಿಗಳ ಲೋಕಾರ್ಪಣೆ

ಕುಂದಾಪುರ, ಸೆ.3: ಸಣ್ಣ ಕಥೆಗಳು ಮನುಷ್ಯನ ಜೀವನದಲ್ಲಿ ಅವನನ್ನು ಗಾಢವಾಗಿ ತಟ್ಟುವ...
error: Content is protected !!