Sunday, October 18, 2026
Sunday, October 18, 2026

ಬಸ್ರೂರು: ಬೀಳ್ಕೊಡುಗೆ ಸಮಾರಂಭ

ಬಸ್ರೂರು: ಬೀಳ್ಕೊಡುಗೆ ಸಮಾರಂಭ

Date:

ಬಸ್ರೂರು, ಏ.1: ಶ್ರೀ ಶಾರದಾ ಕಾಲೇಜು ಬಸ್ರೂರಿನ ಬೋಧಕ ಮತ್ತು ಬೋಧಕೇತರ ಸಂಘದ ಆಶ್ರಯದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಚಂದ್ರಾವತಿ ಶೆಟ್ಟಿ ಇವರಿಗೆ ಬೀಳ್ಕೊಡುಗೆ ಸಮಾರಂಭ ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಕಾಲೇಜು ಟ್ರಸ್ಟ್ ಅಧ್ಯಕ್ಷರಾದ ಕೆ. ಜಯಕರ ಶೆಟ್ಟಿ ಕಾಲೇಜಿಗೆ ಪ್ರಾಂಶುಪಾಲರ ಸಹಕಾರ ಮತ್ತು ಪ್ರೋತ್ಸಾಹದ ಬಗ್ಗೆ ಮಾತನಾಡುತ್ತಾ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಟ್ರಸ್ಟಿ ಸಂಚಾಲಕರಾದ ಅನುಪಮ ಎಸ್. ಶೆಟ್ಟಿ ಮಾತನಾಡಿ, ನೀವು ನಮ್ಮ ಸಂಸ್ಥೆಯನ್ನು ಬಿಡುತ್ತಿದ್ದರೂ ನಮ್ಮ ಹೃದಯದಲ್ಲಿ ಸದಾ ಉಳಿಯುತ್ತೀರಿ. ನಿಮ್ಮ ಮುಂದಿನ ಜೀವನದ ಪ್ರತಿಯೊಂದು ಹೆಜ್ಜೆಯೂ ಯಶಸ್ಸಿನಿಂದ ತುಂಬಿರಲಿ. ನಿವೃತ್ತಿಯ ಜೀವನ ಸುಖಕರವಾಗಿರಲಿ ಎಂದರು.

ಕಾಲೇಜಿನ ಟ್ರಸ್ಟಿ ಸದಸ್ಯರಾದ ಸುಭಾಶ್‌ಚಂದ್ರ ಶೆಟ್ಟಿ, ಗಣೇಶ ಕಾಮತ್, ಅರುಣ್ ಕುಮಾರ್ ಶೆಟ್ಟಿ, ಗಣೇಶ ಶೆಟ್ಟಿ ಮೊಳಹಳ್ಳಿ, ಜಿ.ಎಂ. ಚೆರಿಯಬ್ಬ ಉಪಸ್ಥಿತರಿದ್ದರು. ಕಾಲೇಜಿನಿಂದ ಬೀಳ್ಕೊಡುತ್ತಿರುವ ೩೬ ವರ್ಷಗಳ ಸೇವೆ ಸಲ್ಲಿಸಿದ ಡಾ. ಚಂದ್ರಾವತಿ ಶೆಟ್ಟಿ, ಇವರನ್ನು ಸನ್ಮಾನಿಸಲಾಯಿತು. ಬೋಧಕ ಸಂಘದ ಅಧ್ಯಕ್ಷರಾದ ಕುಮಾರ ಪಿ., ಸ್ವಾಗತಿಸಿ, ಉಪನ್ಯಾಸಕಿ ಮಮತಾ ಕಾರ್ಯಕ್ರಮ ನಿರೂಪಿಸಿದರು. ಸೂರಜ್ ಕುಮಾರ್ ಶೆಟ್ಟಿ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!