ಶಂಕರನಾರಾಯಣ, ಏ.2: ಕ್ರೀಡೆಗಳು ಕೇವಲ ದೈಹಿಕ ಆರೋಗ್ಯವಷ್ಟೇ ಅಲ್ಲದೆ ಶಿಸ್ತಿನ, ಸಹಕಾರದ ಹಾಗೂ ನಾಯಕತ್ವದ ಗುಣಗಳನ್ನು ಬೆಳೆಸಲು ಸಹಕಾರಿಯಾಗುತ್ತವೆ. ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಕ್ರೀಡಾ ಕ್ಷೇತ್ರದಲ್ಲಿಯೂ ತೊಡಗಿಸಿಕೊಳ್ಳಬೇಕು. ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ದೈಹಿಕ ಮತ್ತು ಮಾನಸಿಕ ಸಾಮರ್ಥ್ಯ ಮತ್ತು ಸದೃಢತೆ ಬೆಳೆದು ಅಭಿವೃದ್ದಿ ಉಂಟಾಗುತ್ತದೆ ಎಂದು ಉಡುಪಿಯ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ. ರಾಮಚಂದ್ರ ಪಾಟ್ಕರ್ ಹೇಳಿದರು.
ಅವರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ, ಶಂಕರನಾರಾಯಣದ ಶೈಕ್ಷಣಿಕ ಸಾಲಿನ ವಾರ್ಷಿಕ ಕ್ರೀಡಾಕೂಟದ ಉದ್ಘಾಟನೆ ನೆರವೇರಿಸಿ ಮಾತನಾಡುತ್ತಿದ್ದರು. ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲ ಡಾ. ವೆಂಕಟರಾಮ್ ಭಟ್ ಮಾತನಾಡಿ, ವಿದ್ಯಾರ್ಥಿಗಳ ಸಮಗ್ರ ವ್ಯಕ್ತಿತ್ವ ವಿಕಾಸಕ್ಕೆ ಕ್ರೀಡೆಗಳು ಪ್ರಮುಖ ಪಾತ್ರವಹಿಸುತ್ತವೆ ಎಂದು ತಿಳಿಸಿದರು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಮಹಾಂತೇಶ್ ಉಪಸ್ಥಿತರಿದ್ದರು. ಕ್ರೀಡಾ ಸಂಯೋಜಕ ಪ್ರಸ್ತುತ ವೈ ಎನ್ ಅವರು ಸ್ವಾಗತಿಸಿದರು. ಪ್ರಥಮ ಬಿಎ ವಿದ್ಯಾರ್ಥಿನಿ ಭಾವನಾ ಪ್ರಾರ್ಥಿಸಿದರು. ಉಪನ್ಯಾಸಕ ಪಾಂಡುರಂಗ ನಿರೂಪಿಸಿದರು.




By
ForthFocus™