Saturday, September 12, 2026
Saturday, September 12, 2026

ಅಂಗನವಾಡಿಗೆ ಸೋಲಾರ್ ದಾರಿದೀಪ; ವಾಟರ್ ಫಿಲ್ಟರ್ ಕೊಡುಗೆ

ಅಂಗನವಾಡಿಗೆ ಸೋಲಾರ್ ದಾರಿದೀಪ; ವಾಟರ್ ಫಿಲ್ಟರ್ ಕೊಡುಗೆ

Date:

ಕೋಟ, ಏ.4: ಭಾರತೀಯ ಜೀವ ವಿಮಾ ನಿಗಮ ಮೈಕ್ರೋ ಇನ್ಸೂರೆನ್ಸ್ ವಿಭಾಗ ಉಡುಪಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಬ್ರಹ್ಮಾವರ ತಾಲೂಕು ಇವರ ಆಶ್ರಯದಲ್ಲಿ ವಿಮಾ ಗ್ರಾಮ ೨೦೨೪-೨೫ ಅಂಗವಾಗಿ ಕೋಟದ ಕಾಸನಗುಂದು ಅಂಗನವಾಡಿಗೆ ಸೋಲಾರ್ ದಾರಿದೀಪ ಹಾಗೂ ವಾಟರ್ ಫಿಲ್ಟರ್‌ನ್ನು ಕೊಡುಗೆಯಾಗಿ ನೀಡಿದ್ದು ಅದನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಮಾ ವಿಭಾಗದ ಪ್ರಾದೇಶಿಕ ನಿರ್ದೇಶಕ ಗಣೇಶಬಿ ಲೋಕಾರ್ಪಣೆಗೊಳಿಸಿದರು. ಭಾರತೀಯ ಜೀವವಿಮಾ ಸಂಸ್ಥೆಯ ದಿನೇಶ್ ಪ್ರಭು ಸೋಲಾರ್ ದೀಪವನ್ನು ಉದ್ಘಾಟಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಮಾ ವಿಭಾಗದ ಯೋಜನಾಧಿಕಾರಿ ಸತೀಶ್, ಕೋಟ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಚಂದ್ರ ಪೂಜಾರಿ, ಲೆಕ್ಕಪರಿಶೋಧಕ ಶೇಖರ್, ಸ್ಥಳೀಯ ಕೃಷಿಕ ರಾಘವೇಂದ್ರ ಮಡಿವಾಳ, ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆಯ ಸೇವಾಪ್ರತಿನಿಧಿ ಸರೋಜ ಪೂಜಾರಿ, ಒಕ್ಕೂಟದ ಉಪಾಧ್ಯಕ್ಷೆ ಸ್ಮಿತಾ ರಾಘವೇಂದ್ರ, ಅಂಗನವಾಡಿ ಕಾರ್ಯಕರ್ತೆ ನೇತ್ರಾ, ಸಹಾಯಕಿ ಜಲಜ ಮುಂತಾದವರು ಉಪಸ್ಥಿತರಿದ್ದರು. ಯೋಜನೆಯ ಮೇಲ್ವಿಚಾರಕ ನಾಗೇಶ್ ಸ್ವಾಗತಿಸಿ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸೆ. 16: ಡಿ ಮಾರ್ಟ್ ನಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಉಡುಪಿ, ಸೆ.11: ನಗರದ ಕಲ್ಸಂಕ ಜಂಕ್ಷನ್ ಬಳಿಯ ಭಾರತ್ ಪ್ರೆಸ್ ಎದುರುಗಡೆಯ...

ಉಡುಪಿ ರೆಡ್ ಕ್ರಾಸಿಗೆ ರಾಷ್ಟ್ರೀಯ ಸಮಿತಿ ಸದಸ್ಯರ ಭೇಟಿ

ಉಡುಪಿ, ಸೆ.11: ಭಾರತೀಯ ರೆಡ್ ಕ್ರಾಸ್ ಸೊಸೈಟಿ ನವದೆಹಲಿ ಇಲ್ಲಿನ ಆಡಳಿತ...
error: Content is protected !!