Sunday, July 26, 2026
Sunday, July 26, 2026

ಕ್ರಿಯೇಟಿವ್: ಪ್ರಥಮ ಪಿಯು ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅವಕಾಶ

ಕ್ರಿಯೇಟಿವ್: ಪ್ರಥಮ ಪಿಯು ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅವಕಾಶ

Date:

ಕಾರ್ಕಳ, ಏ.5: 2026 -27ನೇ ಶೈಕ್ಷಣಿಕ ಸಾಲಿನ ಹತ್ತನೇ ತರಗತಿ ಪರೀಕ್ಷೆಯಲ್ಲಿ 90%ಕ್ಕಿಂತ ಅಧಿಕ ಅಂಕ ಗಳಿಸಿದ ಕಾರ್ಕಳದ ಸ್ಥಳೀಯ ವಿದ್ಯಾರ್ಥಿಗಳು ವಾಣಿಜ್ಯ ವಿಭಾಗವನ್ನು ಸೇರಬಯಸುವುದಾದರೆ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ಹೊಂಗಿರಣ ಯೋಜನೆಯಡಿಯಲ್ಲಿ ವಿಶೇಷ ರಿಯಾಯಿತಿಯನ್ನು ಪಡೆದುಕೊಳ್ಳಬಹುದಾಗಿದೆ. ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೂ ಅವಕಾಶ ಕಲ್ಪಿಸಲಾಗಿದೆ.

ವಾಣಿಜ್ಯ ವಿಭಾಗದಲ್ಲಿ ಸಾನ್ವಿರಾವ್ ಎಂಬ ವಿದ್ಯಾರ್ಥಿನಿ 598 ಅಂಕಗಳನ್ನು ಗಳಿಸುವುದರ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿ ಗುರುತಿಸಿಕೊಂಡಿರುವುದು ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ಹೆಗ್ಗಳಿಕೆಯಾಗಿದೆ.

ಸಿಎ ಫೌಂಡೇಶನ್ ನಲ್ಲಿ 58 ವಿದ್ಯಾರ್ಥಿಗಳಲ್ಲಿ 30 ವಿದ್ಯಾರ್ಥಿಗಳು ಅರ್ಹತೆಯನ್ನು ಗಳಿಸಿರುವುದಲ್ಲದೆ, CSEET ಪರೀಕ್ಷೆಯಲ್ಲಿ 98 ವಿದ್ಯಾರ್ಥಿಗಳಲ್ಲಿ 75 ವಿದ್ಯಾರ್ಥಿಗಳು ಪ್ರಥಮ ಪ್ರಯತ್ನದಲ್ಲೇ ಅರ್ಹತೆಯನ್ನು ಪಡೆದುಕೊಂಡಿರುವುದು ವಾಣಿಜ್ಯ ವಿಭಾಗದ ಗುಣಾತ್ಮಕ ಶಿಕ್ಷಣಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ನೀಡುವ ಈ ಉಚಿತ ಶಿಕ್ಷಣ ಸೌಲಭ್ಯವನ್ನು ಅರ್ಹ ಫಲಾನುಭವಿಗಳು ಪಡೆದುಕೊಳ್ಳುವಂತೆ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಪ್ರಕಟನೆಯಲ್ಲಿ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!