Sunday, October 18, 2026
Sunday, October 18, 2026

ಕಲುಷಿತ ನೀರನ್ನು ಚರಂಡಿಗೆ ಬಿಡದಂತೆ ಉಡುಪಿ ನಗರಸಭೆ ಸೂಚನೆ

ಕಲುಷಿತ ನೀರನ್ನು ಚರಂಡಿಗೆ ಬಿಡದಂತೆ ಉಡುಪಿ ನಗರಸಭೆ ಸೂಚನೆ

Date:

ಉಡುಪಿ, ಏ.5: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಮನೆ, ಅಪಾರ್ಟ್ಮೆಂಟ್, ವಾಣಿಜ್ಯ ಕಟ್ಟಡಗಳ ಕಲುಷಿತ ನೀರನ್ನು ಮಳೆ ನೀರು ಹರಿಯಲು ನಿರ್ಮಿಸಿರುವ ಚರಂಡಿಗೆ ಬಿಡದಂತೆ ನಗರಸಭೆಯಿಂದ ಸೂಚಿಸಲಾಗಿರುತ್ತದೆ. ಸಾರ್ವಜನಿಕರು ತಮ್ಮಲ್ಲಿ ಉತ್ಪತ್ತಿಯಾದ ಕಲುಷಿತ ನೀರನ್ನು ತಮ್ಮ ಸ್ವಂತ ಜಾಗದಲ್ಲೇ ಇಂಗುಗುಂಡಿ ನಿರ್ಮಿಸಿ ನಿಯಮಾನುಸಾರ ವಿಲೇವಾರಿ ಮಾಡಬೇಕು. ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ನಿಯಮವನ್ನು ನಿರ್ಲಕ್ಷಿಸಿ ಚರಂಡಿಗೆ ಕಲುಷಿತ ನೀರು ಬಿಟ್ಟರೆ ಪುರಸಭೆ ಕಾಯಿದೆ ಅನ್ವಯ ಕ್ರಮ ಜರುಗಿಸಲಾಗುವುದು. ದಿನನಿತ್ಯ ಮನೆ, ಅಪಾರ್ಟ್ಮೆಂಟ್, ವಾಣಿಜ್ಯ ಕಟ್ಟಡಗಳಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು, ಗಿಡಗಂಟಿಗಳ ಗೆಲ್ಲುಗಳನ್ನು ಕಡಿದು ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ರಸ್ತೆ ಬದಿ ಎಸೆಯುತ್ತಿರುವುದು ಕಂಡು ಬಂದಿದ್ದು, ಇದರಿಂದ ನೈರ್ಮಲ್ಯ ಹಾಗೂ ನಗರ ಸ್ವಚ್ಛತೆಗೆ ತೊಡಕಾಗುತ್ತಿದೆ. ಆದ್ದರಿಂದ ಸಾರ್ವಜನಿಕರು ಮನೆ, ಅಪಾರ್ಟ್ ಮೆಂಟ್, ವಾಣಿಜ್ಯ ಕಟ್ಟಡಗಳಲ್ಲಿ ಉತ್ಪತ್ತಿಯಾಗುವ ಹಸಿ ತ್ಯಾಜ್ಯವನ್ನು ತಮ್ಮ ಮನೆಯ ವಠಾರದಲ್ಲಿ ಕಾಂಪೋಸ್ಟ್ ಮಾಡಿಕೊಳ್ಳಲು ಸೂಕ್ತವಾಗಿರುತ್ತದೆ. ಈ ಬಗ್ಗೆ ಸಮಸ್ಯೆಗಳಿದ್ದಲ್ಲಿ ತ್ಯಾಜ್ಯವನ್ನು ನಗರಸಭೆಯ ತ್ಯಾಜ್ಯ ಸಂಗ್ರಹಣೆಯ ವಾಹನಕ್ಕೆ ನೀಡಬೇಕು. ಹೊರತಾಗಿ ಯಾವುದೇ ತ್ಯಾಜ್ಯವನ್ನು ಸಾರ್ವಜನಿಕ ಸ್ಥಳಗಳಲ್ಲಿ ಎಸೆಯುತ್ತಿರುವುದು ಕಂಡುಬಂದರೆ ಅಂತಹವರ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟನೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!