Friday, July 24, 2026
Friday, July 24, 2026

ಏ.8: ವಿಚಾರಗೋಷ್ಠಿ ಮತ್ತು ಪುಸ್ತಕ ಬಿಡುಗಡೆ ಕಾರ್ಯಕ್ರಮ

ಏ.8: ವಿಚಾರಗೋಷ್ಠಿ ಮತ್ತು ಪುಸ್ತಕ ಬಿಡುಗಡೆ ಕಾರ್ಯಕ್ರಮ

Date:

ಉಡುಪಿ, ಏ.6: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಜಿಲ್ಲೆ ವತಿಯಿಂದ ಯಕ್ಷಗಾನ ಕೇಂದ್ರ ಹಾಗೂ ಎಂಜಿಎಂ ಸಂಧ್ಯಾ ಕಾಲೇಜು ಮಣಿಪಾಲ ಇವರ ಸಹಯೋಗದಲ್ಲಿ ಏಪ್ರಿಲ್ 8 ರಂದು ಬೆಳಿಗ್ಗೆ 10 ಗಂಟೆಗೆ ಕಾಲೇಜಿನ ಸಭಾಂಗಣದಲ್ಲಿ ಯಕ್ಷಗಾನ ಮತ್ತು ಕಾರಂತರು ವಿಚಾರ ಗೋಷ್ಠಿ ಹಾಗೂ ಅಳವು ಅರಿಯದ ಭಾಷೆ ಪುಸ್ತಕ ಬಿಡುಗಡೆ ಕಾರ್ಯಕ್ರಮವು ನಡೆಯಲಿದೆ. ಕಾರ್ಯಕ್ರಮವನ್ನು ಕರ್ನಾಟಕ ಯಕ್ಷಗಾನ ಅಕಾಡೆಮಿಯ ಮಾಜಿ ಅಧ್ಯಕ್ಷ ಪ್ರೊ ಎಂ ಎಲ್ ಸಾಮಗ ಉದ್ಘಾಟಿಸಲಿದ್ದು, ಡಾ.ಶಿವರಾಮ ಕಾರಂತ ಟ್ರಸ್ಟಿನ ಅಧ್ಯಕ್ಷ ಗಣನಾಥ ಎಕ್ಕಾರು ಅಧ್ಯಕ್ಷತೆ ವಹಿಸಲಿದ್ದಾರೆ. ಉದ್ಯಮಿ ಶಿಕ್ಷಣ ತಜ್ಞ ಹರಿಪ್ರಸಾದ್ ರೈ ಪುಸ್ತಕವನ್ನು ಬಿಡುಗಡೆಗೊಳಿಸಲಿದ್ದಾರೆ.

ತುಮಕೂರು ವಿಶ್ವವಿದ್ಯಾನಿಲಯದ ಕನ್ನಡ ವಿಭಾಗದ ಮುಖ್ಯಸ್ಥ ಪ್ರೊ. ನಿತ್ಯಾನಂದ ಬಿ ಶೆಟ್ಟಿ ಯಕ್ಷಗಾನ ಕಲಾಮೀಮಾಂಸೆ ಮತ್ತು ಅಧ್ಯಯನ: ಕಾರಂತರ ದೃಷ್ಟಿಕೋನ ಎಂಬ ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ. ಮಂಗಳೂರು ವಿಶ್ವ ವಿದ್ಯಾನಿಲಯ ನಿವೃತ್ತ ಪ್ರಾಧ್ಯಾಪಕ ಪ್ರೊ. ರಾಜಾರಾಮ ತೋಳ್ಪಾಡಿ, ಮಣಿಪಾಲ ಮಾಹೆಯ ನಿವೃತ್ತ ಪ್ರಾಧ್ಯಾಪಕ ಮತ್ತು ಚಿಂತಕ ಪ್ರೊ.ಕೆ. ಫಣಿರಾಜ್ ಹಾಗೂ ಮಂಗಳೂರಿನ ಬಲ್ಮಠ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಪ್ರೊ.ರಾಮದಾಸ ಪ್ರಭು ಪುಸ್ತಕ ಜೊತೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಡಾ.ಶಿವರಾಮ ಕಾರಂತ ಟ್ರಸ್ಟಿನ ಸದಸ್ಯ ಕಾರ್ಯದರ್ಶಿಗಳ ಪ್ರಕಟನೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತ್ರಿಶಾ ವಿದ್ಯಾ ಕಾಲೇಜು: ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಓರಿಯೆಂಟೇಷನ್ ಕಾರ್ಯಕ್ರಮ

ಕಟಪಾಡಿ, ಜು.23: ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜ್ ಆಫ್ ಕಾಮರ್ಸ್ ಅಂಡ್...

ಶೈಕ್ಷಣಿಕ ಬದುಕಿನ ಅರ್ಥವನ್ನು ಅರಿತುಕೊಳ್ಳಿ: ವಿದ್ಯಾರ್ಥಿಗಳಿಗೆ ಡಾ. ಕೆ. ಉಮೇಶ್ ಶೆಟ್ಟಿ ಕರೆ

ಕುಂದಾಪುರ, ಜು.23: ವಿದ್ಯಾರ್ಥಿಗಳು ಪಠ್ಯಪೂರಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಧನಾತ್ಮಕವಾಗಿ ಚಿಂತಿಸಿ,...

ಕಟ್ಟಡ ಕಾಮಗಾರಿ ಕೆಲಸ ನಿರ್ವಹಿಸುತ್ತಿದ್ದ ಬಾಲ ಕಾರ್ಮಿಕನ ರಕ್ಷಣೆ

ಉಡುಪಿ, ಜು.23: ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರ್ ಗ್ರಾಮದಲ್ಲಿ ನಡೆಯುತ್ತಿರುವ ಕಟ್ಟಡ...
error: Content is protected !!