Friday, July 24, 2026
Friday, July 24, 2026

ಬಿ. ಬಿ. ಹೆಗ್ಡೆ ಕಾಲೇಜು: ವೃತ್ತಿ ಮಾರ್ಗದರ್ಶನ

ಬಿ. ಬಿ. ಹೆಗ್ಡೆ ಕಾಲೇಜು: ವೃತ್ತಿ ಮಾರ್ಗದರ್ಶನ

Date:

ಕುಂದಾಪುರ, ಏ.9: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವೃತ್ತಿ ಮಾರ್ಗದರ್ಶನ ಮತ್ತು ತರಬೇತಿ ಘಟಕದ ಆಶ್ರಯದಲ್ಲಿ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಪದವಿಯ ನಂತರ ಉನ್ನತ ಶಿಕ್ಷಣದ ಮಹತ್ವ ಮತ್ತು ಉದ್ಯೋಗ ಸಾಧ್ಯತೆಗಳ ಕುರಿತು ಉಪನ್ಯಾಸ ಮತ್ತು ಸಂವಾದ ನಡೆಸಲಾಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಎ.ಜೆ. ಇನ್ಸ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್, ಮಂಗಳೂರು ಇಲ್ಲಿನ ವೃತ್ತಿ ಮಾರ್ಗದರ್ಶಕರಾದ ಪ್ರಶಾಂತ ಶೆಟ್ಟಿ ಹಾಗೂ ಮ್ಯಾನೇಜ್ಮೆಂಟ್ ಸ್ಟಡೀಸ್ ವಿಭಾಗದ ಪ್ರಾಧ್ಯಾಪಕಿ ರೋಶನ್ ಡಿ ಕೋಸ್ಟಾ ಭಾಗವಹಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ವೃತ್ತಿ ಮಾರ್ಗದರ್ಶಕ ಮತ್ತು ತರಬೇತಿ ಘಟಕದ ಸಂಯೋಜಕ ತಿಮ್ಮಪ್ಪ ಡಿ.ಎಸ್. ಸ್ವಾಗತಿಸಿ, ಸಂಪನ್ಮೂಲ ವ್ಯಕ್ತಿಗಳನ್ನು ಪರಿಚಯಿಸಿ, ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತ್ರಿಶಾ ವಿದ್ಯಾ ಕಾಲೇಜು: ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಓರಿಯೆಂಟೇಷನ್ ಕಾರ್ಯಕ್ರಮ

ಕಟಪಾಡಿ, ಜು.23: ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜ್ ಆಫ್ ಕಾಮರ್ಸ್ ಅಂಡ್...

ಶೈಕ್ಷಣಿಕ ಬದುಕಿನ ಅರ್ಥವನ್ನು ಅರಿತುಕೊಳ್ಳಿ: ವಿದ್ಯಾರ್ಥಿಗಳಿಗೆ ಡಾ. ಕೆ. ಉಮೇಶ್ ಶೆಟ್ಟಿ ಕರೆ

ಕುಂದಾಪುರ, ಜು.23: ವಿದ್ಯಾರ್ಥಿಗಳು ಪಠ್ಯಪೂರಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಧನಾತ್ಮಕವಾಗಿ ಚಿಂತಿಸಿ,...

ಕಟ್ಟಡ ಕಾಮಗಾರಿ ಕೆಲಸ ನಿರ್ವಹಿಸುತ್ತಿದ್ದ ಬಾಲ ಕಾರ್ಮಿಕನ ರಕ್ಷಣೆ

ಉಡುಪಿ, ಜು.23: ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರ್ ಗ್ರಾಮದಲ್ಲಿ ನಡೆಯುತ್ತಿರುವ ಕಟ್ಟಡ...
error: Content is protected !!