Friday, July 24, 2026
Friday, July 24, 2026

ಮಕ್ಕಳು ಅಂಕ ಪಡೆಯುವುದರ ಜೊತೆಗೆ ವ್ಯಕ್ತಿತ್ವ ಅಭಿವೃದ್ಧಿಗೆ ಹೆಚ್ಚು ಪ್ರಾಮುಖ್ಯತೆ ಕೊಡಬೇಕು: ಜೇಷ್ಠಲಕ್ಷ್ಮಿ

ಮಕ್ಕಳು ಅಂಕ ಪಡೆಯುವುದರ ಜೊತೆಗೆ ವ್ಯಕ್ತಿತ್ವ ಅಭಿವೃದ್ಧಿಗೆ ಹೆಚ್ಚು ಪ್ರಾಮುಖ್ಯತೆ ಕೊಡಬೇಕು: ಜೇಷ್ಠಲಕ್ಷ್ಮಿ

Date:

ಕಾಪು, ಏ.9: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಾಪು ಇಲ್ಲಿನ 2025-26 ನೇ ಶೈಕ್ಷಣಿಕ ಸಾಲಿನ ಶಿಕ್ಷಕ- ರಕ್ಷಕ ಸಮಿತಿಯ ವಾರ್ಷಿಕ ಸಭೆ ಕಾಲೇಜು ಸಭಾಂಗಣದಲ್ಲಿ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಮಂಗಳೂರಿನ ಆಳ್ವಾಸ್ ಆಯುಕ್ಯಾರಿನ ಮನಶಾಸ್ತ್ರಜ್ಞರಾದ ಜೇಷ್ಠಲಕ್ಷ್ಮಿ ಅವರು ಮಾತನಾಡುತ್ತಾ, ಈ ದಿನ ನಾವು ವಿದ್ಯಾರ್ಥಿಗಳ ತರಗತಿ ಹಾಜರಾತಿ, ಅಂಕ, ಮುಂತಾದ ವಿಷಯದಲ್ಲಿ ಸಿಲುಕಿಕೊಂಡಿದ್ದೇವೆ. ತಮ್ಮ ಮಕ್ಕಳು ಅಧ್ಯಯನ ಮಾಡುತ್ತಿರುವ ವಿಷಯದಲ್ಲಿ ಎಷ್ಟು ಪ್ರೌಢಿಮೆ ಹೊಂದಿದ್ದಾರೆ ಮತ್ತು ಅವರ ವ್ಯಕ್ತಿತ್ವ ಹೇಗೆ ರೂಪುಗೊಳ್ಳುತ್ತಿದೆ ಎನ್ನುವುದನ್ನು ಪರೀಕ್ಷಿಸುವ ಮನೋಭಾವವನ್ನು ಮರೆತಿದ್ದೇವೆ. ವಿದ್ಯಾರ್ಥಿಗಳ ವ್ಯಕ್ತಿತ್ವವನ್ನು ಸಮಗ್ರವಾಗಿ ರೂಪಿಸುವಲ್ಲಿ ಕೇವಲ ಶಿಕ್ಷಕರಷ್ಟೇ ಅಲ್ಲ ಪೋಷಕರ ಪಾತ್ರವು ದೊಡ್ಡದು ಎಂದರು.

ಸಭೆಯ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಗೋಪಾಲಕೃಷ್ಣ ಎಂ ಗಾಂವ್ಕರ್ ವಹಿಸಿ ಪೋಷಕರ ಸಕ್ರಿಯ ಭಾಗವಹಿಸುವಿಕೆ ಇಲ್ಲದೆ ಹೋದಲ್ಲಿ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆ ಕಷ್ಟ ಎಂದರು. ಅಂತೆಯೇ ಈ ಶೈಕ್ಷಣಿಕ ಸಾಲಿನ ಶಿಕ್ಷಕ-ರಕ್ಷಕ ಸಮಿತಿಯ ಅಧ್ಯಕ್ಷರಾದ ಸವಿತಾ ಸನಿಲ್ ಅವರು ಮಾತನಾಡುತ್ತಾ, ನಾವು ಸರ್ಕಾರಿ ಕಾಲೇಜು ಅಂದಾಗ ಒಂದಷ್ಟು ತಪ್ಪು ಕಲ್ಪನೆಗಳನ್ನು ಈಗಲೂ ಇಟ್ಟುಕೊಂಡಿದ್ದೇವೆ. ಆದರೆ ಸಮಯ ಬದಲಾಗಿದೆ, ನಾವೆಲ್ಲ ಪೋಷಕರಾಗಿ ಈ ಕಾಲೇಜಿಗೆ ನಮ್ಮ ಮಕ್ಕಳಿಗೆ ಪ್ರವೇಶಾತಿ ದೊರಕಿದ್ದು, ಮತ್ತು ಇಲ್ಲಿ ಅಧ್ಯಯನಕ್ಕೆ ಅವಕಾಶ ಒದಗಿದ್ದು ನಮ್ಮೆಲ್ಲರ ಅದೃಷ್ಟ ಮತ್ತು ಸಂತೋಷದ ವಿಷಯ ಎಂದುಕೊಳ್ಳಬೇಕು. ಇಲ್ಲಿ ಶೈಕ್ಷಣಿಕವಾಗಿ ತುಂಬಾ ಉತ್ತಮವಾಗಿರುವ ವಾತಾವರಣವಿದ್ದು ಎಲ್ಲಾ ರೀತಿಯ ಸೌಲಭ್ಯಗಳನ್ನು ಈ ಕಾಲೇಜು ಹೊಂದಿದೆ. ವಿದ್ಯಾರ್ಥಿಗಳಿಗೆ ಈ ದಿನದ ಶೈಕ್ಷಣಿಕ ಅವಶ್ಯಕತೆಗಳನ್ನು ಈ ಸಂಸ್ಥೆ ಒದಗಿಸುತ್ತಿದೆ. ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಈ ಕಾಲೇಜಿಗೆ ನಮ್ಮ ಸುತ್ತಮುತ್ತಲಿನ ಪೋಷಕರು ತಮ್ಮ ಮಕ್ಕಳನ್ನು ಕಳುಹಿಸಿಕೊಡಲು ಖುಷಿಪಡಬೇಕು ಎಂದರು.

ಕಾಲೇಜಿನ ರಕ್ಷಕ -ಶಿಕ್ಷಕ ಸಮಿತಿಯ ಸಂಯೋಜಕರಾದ ಡಾ. ನಯನ ಎಲ್ಎಂ., ಐಕ್ಯೂಎಸಿ ಸಂಯೋಜಕರಾದ ಡಾ. ರೋಷಿನಿ ಯಶ್ವಂತ್, ವಿದ್ಯಾರ್ಥಿ ಸಮಿತಿಯ ಸಲಹೆಗಾರರಾದ ದೀಪಿಕಾ ಸುವರ್ಣ, ಕಾಲೇಜಿನ ಬೋಧಕ ಬೋಧಕೇತರ ಸಿಬ್ಬಂದಿಗಳು, ಶಿಕ್ಷಕ- ರಕ್ಷಕ ಸಮಿತಿಯ ಪದಾಧಿಕಾರಿಗಳು ಮತ್ತು ಪೋಷಕರು ಉಪಸ್ಥಿತರಿದ್ದರು.
ಆಯ್ಕೆ ಶ್ರೇಣಿ ಗ್ರಂಥಪಾಲಕರಾದ ಯಶೋಧ ವಂದಿಸಿದರು. ಪ್ರಶಾಂತ್ ಕಾರ್ಯಕ್ರಮ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತ್ರಿಶಾ ವಿದ್ಯಾ ಕಾಲೇಜು: ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಓರಿಯೆಂಟೇಷನ್ ಕಾರ್ಯಕ್ರಮ

ಕಟಪಾಡಿ, ಜು.23: ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜ್ ಆಫ್ ಕಾಮರ್ಸ್ ಅಂಡ್...

ಶೈಕ್ಷಣಿಕ ಬದುಕಿನ ಅರ್ಥವನ್ನು ಅರಿತುಕೊಳ್ಳಿ: ವಿದ್ಯಾರ್ಥಿಗಳಿಗೆ ಡಾ. ಕೆ. ಉಮೇಶ್ ಶೆಟ್ಟಿ ಕರೆ

ಕುಂದಾಪುರ, ಜು.23: ವಿದ್ಯಾರ್ಥಿಗಳು ಪಠ್ಯಪೂರಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಧನಾತ್ಮಕವಾಗಿ ಚಿಂತಿಸಿ,...

ಕಟ್ಟಡ ಕಾಮಗಾರಿ ಕೆಲಸ ನಿರ್ವಹಿಸುತ್ತಿದ್ದ ಬಾಲ ಕಾರ್ಮಿಕನ ರಕ್ಷಣೆ

ಉಡುಪಿ, ಜು.23: ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರ್ ಗ್ರಾಮದಲ್ಲಿ ನಡೆಯುತ್ತಿರುವ ಕಟ್ಟಡ...
error: Content is protected !!