Sunday, October 18, 2026
Sunday, October 18, 2026

ನಿಟ್ಟೆ ತಾಂತ್ರಿಕ ಕಾಲೇಜಿನ ವಾರ್ಷಿಕೋತ್ಸವ

ನಿಟ್ಟೆ ತಾಂತ್ರಿಕ ಕಾಲೇಜಿನ ವಾರ್ಷಿಕೋತ್ಸವ

Date:

ಕಾರ್ಕಳ, ಏ.14: ನಿಟ್ಟೆ (ಡೀಮ್ಡ್ ಟು ಬಿ ಯೂನಿವರ್ಸಿಟಿ) ಯ ಅಂಗಸಂಸ್ಥೆಯಾದ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯವು ತನ್ನ ವಾರ್ಷಿಕೋತ್ಸವವ ಏಪ್ರಿಲ್ ೧೧ ರಂದು ನಿಟ್ಟೆಯ ಬಿ ಸಿ ಆಳ್ವಾ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ನಡೆಯಿತು. ಟೊಯೊಟಾ ಇಂಡಸ್ಟ್ರೀಸ್ ಇಂಜಿನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ನ ಮಾನವ ಸಂಪನ್ಮೂಲ ಉಪಾಧ್ಯಕ್ಷ ಸಂತೋಷ್ ರಾವ್ ಕೆ ಅವರು ಮುಖ್ಯ ಅತಿಥಿಯಾಗಿ ಮಾತನಾಡುತ್ತಾ, ಕಾರ್ಪೊರೇಟ್ ಪ್ರಪಂಚದಲ್ಲಿ ಉದಯಿಸುತ್ತಿರುವ ಬೇಡಿಕೆಗಳನ್ನು ಪೂರೈಸಲು ವಿದ್ಯಾರ್ಥಿಗಳಲ್ಲಿ ಉದ್ಯಮದ ಸಿದ್ಧತೆ, ಕೌಶಲ್ಯ ಅಭಿವೃದ್ಧಿಯ ಮಹತ್ವವನ್ನು ತಿಳಿಹೇಳಿದರು. ಅತ್ಯುತ್ತಮ ಶೈಕ್ಷಣಿಕ ಸಾಧನೆಯನ್ನು ಮಾಡಿದ ವಿದ್ಯಾರ್ಥಿಗಳನ್ನು ಗುರುತಿಸಲಾಯಿತು. ವಿದ್ಯಾರ್ಥಿ ಪಟ್ಟಿಯನ್ನು ಡಾ.ಶ್ರೀನಿವಾಸ ಪೈ ಪಿ, ಡೆಪ್ಯೂಟಿ ಡೀನ್ ಎಕಾಡೆಮಿಕ್ಸ್ ವಾಚಿಸಿದರು. ಪ್ರತಿಷ್ಠಿತ ಶ್ರೀ ಸಂಜೀತ್ ಶೆಟ್ಟಿ ಪ್ರಶಸ್ತಿ ವಿಜೇತರ ಪಟ್ಟಿಯನ್ನು ವಿವೇಕ್ ವಿಶ್ವನಾಥನ್ ವಾಚಿಸಿದರು.

ಗೌರವ ಅತಿಥಿ ಡಾ. ಗೋಪಾಲ್ ಮುಗೇರಾಯ ಅವರು ಸಭಿಕರನ್ನುದ್ದೇಶಿಸಿ ಮಾತನಾಡಿ ಶೈಕ್ಷಣಿಕ ಬೆಳವಣಿಗೆ ಮತ್ತು ವೃತ್ತಿಪರ ಅಭಿವೃದ್ಧಿಯ ಬಗ್ಗೆ ಒಳನೋಟಗಳನ್ನು ಹಂಚಿಕೊಂಡರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ನಿಟ್ಟೆ (ಡೀಮ್ಡ್ ಟು ಬಿ ಯೂನಿವರ್ಸಿಟಿ) ಕುಲಪತಿ ಡಾ.ಎಂ.ಎಸ್.ಮೂಡಿತ್ತಾಯ ಅವರು ಅಧ್ಯಕ್ಷೀಯ ಮಾತುಗಳಲ್ಲಿ ಸಂಸ್ಥೆಯ ಪ್ರಗತಿಯನ್ನು ಶ್ಲಾಘಿಸಿದರು ಮತ್ತು ಉತ್ಕೃಷ್ಟತೆಗಾಗಿ ಶ್ರಮಿಸಲು ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು.

ಸಂಸ್ಥೆಯ ಪ್ರಾಂಶುಪಾಲ ಡಾ.ನಿರಂಜನ್ ಎನ್.ಚಿಪ್ಲುಂಕರ್ ಅವರು ಸ್ವಾಗತಿಸಿ, ವಾರ್ಷಿಕ ಕಾಲೇಜು ವರದಿಯನ್ನು ಪ್ರಸ್ತುತಪಡಿಸಿದರು. ಕಳೆದ ಒಂದು ವರ್ಷದಲ್ಲಿ ಸಂಸ್ಥೆಯ ಶೈಕ್ಷಣಿಕ ಸಾಧನೆಗಳು, ಸಂಶೋಧನಾ ಮೈಲಿಗಲ್ಲುಗಳು ಮತ್ತು ಸಹಪಠ್ಯ ಸಾಧನೆಗಳನ್ನು ಈ ವರದಿ ವಿವರಿಸಿತು. ವಿದ್ಯಾರ್ಥಿ ಕ್ಷೇಮಪಾಲನಾ ವಿಭಾಗದ ಡೀನ್ ಡಾ. ನರಸಿಂಹ ಕೆ. ಬೈಲ್ಕೇರಿ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!