Friday, September 11, 2026
Friday, September 11, 2026

ಬಾಳೆಬರೆ ಘಾಟಿಯಲ್ಲಿ ವಾಹನ ಸಂಚಾರ ನಿಷೇಧ

ಬಾಳೆಬರೆ ಘಾಟಿಯಲ್ಲಿ ವಾಹನ ಸಂಚಾರ ನಿಷೇಧ

Date:

ಉಡುಪಿ, ಏ.14: ಬಾಳೆಬರೇ ರಾಜ್ಯ ಹೆದ್ದಾರಿ 52 ರ ಬಾಳೆಬರೆ ಘಾಟಿಯಲ್ಲಿ ಏಪ್ರಿಲ್ 9 ರಂದು ತಡೆಗೋಡೆಯೊಂದಿಗೆ ರಸ್ತೆ ಅಗಲೀಕರಣ ಕಾಮಗಾರಿಯ ಇನ್ನುಳಿದ ಭಾಗದ ತಳಪಾಯದ ಕಾಮಗಾರಿಯನ್ನು ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಸುಮಾರು 12 ಮೀಟರ್ ಎತ್ತರದಲ್ಲಿ ಹಾಲಿ ಇರುವ ಕಾಂಕ್ರೀಟ್ ರಸ್ತೆಯ ಕೆಳಭಾಗದಲ್ಲಿ ಸುಮಾರು 5 ಅಡಿ ಅಗಲದವರೆಗೆ ಮತ್ತೊಮ್ಮೆ ಭೂ ಕುಸಿತ ಉಂಟಾಗಿ ಕಾಂಕ್ರೀಟ್ ರಸ್ತೆಯ ಮೇಲ್ಮೆನಲ್ಲಿ ಅಲ್ಲಲ್ಲಿ ಬಿರುಕುಗಳು ಕಂಡುಬಂದಿದ್ದು, ಸುರಕ್ಷತಾ ದೃಷ್ಟಿಯಿಂದ ಹುಲಿಕಲ್ ಘಾಟ್ ವ್ಯಾಪ್ತಿಯ ಹೇರ್‌ಪಿನ್ ತಿರುವಿನಲ್ಲಿ ಪ್ರಸ್ತುತ ಕೈಗೊಳ್ಳುತ್ತಿರುವ ರಕ್ಷಣಾತ್ಮಕ ಕಾಮಗಾರಿಯ ಪೂರ್ಣಗೊಳ್ಳುವವರೆಗೆ, ಸಾರ್ವಜನಿಕ ಹಿತದೃಷ್ಟಿಯಿಂದ ಕೇಂದ್ರ ಮೋಟಾರು ವಾಹನ ಕಾಯ್ದೆ 1988 ರ ನಿಯಮ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮವಾಳಿಗಳು 1989 ರ ನಿಯಮ 221 (ಎ )(2) (5) ರನ್ವಯ ತೀರ್ಥಹಳ್ಳಿ – ಕುಂದಾಪುರ ರಾಜ್ಯ ಹೆದ್ದಾರಿ 52 ರ ಬಾಳೆಬರೆ ಘಾಟ್‌ನ ಮೂಲಕ ಎಲ್ಲಾ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ರಕ್ಷಣಾತ್ಮಕ ಕಾಮಗಾರಿ ಪೂರ್ಣಗೊಳ್ಳುವವರೆಗೆ ಸದ್ರಿ ರಸ್ತೆಯಲ್ಲಿ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ನಿಷೇಧಗೊಳಿಸಿ ಈ ಕೆಳಕಂಡ ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಅದೇಶಿಸಿ ಜಿಲ್ಲಾ ದಂಡಾಧಿಕಾರಯೂ ಆಗಿರುವ ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಅದೇಶಿಸಿರುತ್ತಾರೆ.

ತೀರ್ಥಹಳ್ಳಿ – ಕುಂದಾಪುರ ರಾಜ್ಯ ಹೆದ್ದಾರಿ – 52 ರಸ್ತೆಯ ತೀರ್ಥಹಳ್ಳಿ ಯಿಂದ ಕುಂದಾಪುರ ಕಡೆ ಹೋಗುವ ( ತೀರ್ಥಹಳ್ಳಿ – ರಾವೆ – ಕಾನುಗೋಡು – ಮಾಸ್ತಿಕಟ್ಟೆ – ಹುಲಿಕಲ್ ಘಾಟ್ – ಹೊಸಂಗಡಿ – ಸಿದ್ದಾಪುರ ಮೂಲಕ ಕುಂದಾಪುರ ರಾ. ಹೆ -52) ವಾಹನಗಳು ತೀರ್ಥಹಳ್ಳಿ – ರಾವೆ – ಕಾನುಗೋಡು – ನಗರ – ಕೊಲ್ಲೂರು – ಕುಂದಾಪುರ ರಸ್ತೆ ಮೂಲಕ ಸಂಚರಿಸಬೇಕು. ನಗರ ಸಿದ್ದಾಪುರ ರಾಜ್ಯ ಹೆದ್ದಾರಿ -278 ರಸ್ತೆಯ ತೀರ್ಥಹಳ್ಳಿ ಯಿಂದ ಯಡೂರು ಹುಲಿಕಲ್ ಕುಂದಾಪುರ ಕಡೆ ಹೋಗುವ ( ತೀರ್ಥಹಳ್ಳಿ – ಯಡೂರು- ಸುಳುಗೋಡು – ಮಾಸ್ತಿಕಟ್ಟೆ – ಹುಲಿಕಲ್ ಘಾಟ್ – ಹೊಸಂಗಡಿ – ಸಿದ್ದಾಪುರ ಮೂಲಕ ಕುಂದಾಪುರ ಸೇರುವ ರಸ್ತೆ) ವಾಹನಗಳು ತೀರ್ಥಹಳ್ಳಿ – ಯಡೂರು – ಮಾಸ್ತಿಕಟ್ಟೆ – ಕಾನುಗೋಡು – ನಗರ – ಕೊಲ್ಲೂರು – ಕುಂದಾಪುರ ರಸ್ತೆ ಮೂಲಕ ಸಂಚರಿಸಬೇಕು. ಶಿವಮೊಗ್ಗ / ಸಾಗರ ಕಡೆಯಿಂದ ಹೊಸನಗರದ ಮೂಲಕ ಕುಂದಾಪುರ ಕಡೆ ಹೋಗುವ (ಶಿವಮೊಗ್ಗ / ಸಾಗರ ಕಡೆಯಿಂದ ಹೊಸನಗರ – ನಗರ- ಮಾಸ್ತಿಕಟ್ಟೆ – ಹುಲಿಕಲ್ ಘಾಟ್ – ಹೊಸಂಗಡಿ – ಸಿದ್ಧಾಪುರ ಮೂಲಕ ಕುಂದಾಪುರ ಸೇರುವ ರಸ್ತೆ) ವಾಹನಗಳು ಶಿವಮೊಗ್ಗ ಹೊನ್ನಾವರ ರಾಷ್ಟೀಯ ಹೆದ್ದಾರಿ ಮೂಲಕ ಹೊನ್ನಾವರ ಅನಂತರ ಹೊನ್ನಾವರದಿಂದ – ಭಟ್ಕಳ – ಬೈಂದೂರು ಕುಂದಾಪುರ ರಸ್ತೆ ಮೂಲಕ ಸಂಚರಿಸುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಡಾ.ಎ.ವಿ. ಬಾಳಿಗಾ ಸ್ಮಾರಕ ಆಸ್ಪತ್ರೆ: ವಿಶ್ವ ಆತ್ಮಹತ್ಯೆ ತಡೆ ದಿನಾಚರಣೆ

ಉಡುಪಿ, ಸೆ.11: ಸರ್ಕಾರಿ ಜಿಲ್ಲಾ ಆಸ್ಪತ್ರೆ, ಅಜ್ಜರಕಾಡು, ಉಡುಪಿ – ಮನೋರೋಗ...

ಗುರುನರಸಿಂಹ ದೇವಸ್ಥಾನದಲ್ಲಿ ಲಕ್ಷ ತುಳಸಿ ಅರ್ಚನೆ

ಉಡುಪಿ, ಸೆ.11: ಕೆ. ರಾಧಾಕೃಷ್ಣ ಬ್ರಹ್ಮ ದಂಪತಿಗಳ ಲಕ್ಷತುಳಸಿ ಅರ್ಚನೆ ಬುಧವಾರ...

ಕ್ರಿಯೇಟಿವ್‌ ಗ್ಲೋಬಲ್‌ ಸ್ಕೂಲ್‌: ಕಾರ್ಕಳ ತಾಲೂಕು ಮಟ್ಟದ ಕಬ್ಬಡಿ ಪಂದ್ಯಾವಳಿ

ಕಾರ್ಕಳ, ಸೆ.10: ಸಾರ್ವಜನಿಕ ಶಿಕ್ಷಣ ಇಲಾಖೆ ಇದರ ವತಿಯಿಂದ ಕಾರ್ಕಳ ತಾಲೂಕು...

ಅಂತರಂಗ ಅರಳಿದಾಗ ಅನುಭವ ಪ್ರಪಂಚ ವಿಸ್ತಾರವಾದಾಗ ಸಾಹಿತ್ಯ ಹುಟ್ಟುವುದು: ವಸಂತಿ ಶೆಟ್ಟಿ ಬ್ರಹ್ಮಾವರ

ಉಡುಪಿ, ಸೆ.10: ನಿತ್ಯ ಜೀವನದ ಅನುಭವಗಳಿಂದ ಸಾಹಿತ್ಯ ಹುಟ್ಟುತ್ತದೆ. ಸಾಹಿತಿ ನೀತಿ...
error: Content is protected !!