Wednesday, November 18, 2026
Wednesday, November 18, 2026

ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್: ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್‌ರವರ 135ನೇ ಜನ್ಮದಿನಾಚರಣೆ

ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್: ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್‌ರವರ 135ನೇ ಜನ್ಮದಿನಾಚರಣೆ

Date:

ಬೆಳ್ಮಣ್, ಏ.15: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ವತಿಯಿಂದ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‌ನ ರಜತ ಮಹೋತ್ಸವ ಸಭಾಂಗಣದಲ್ಲಿ ಮಂಗಳವಾರ ಭಾರತರತ್ನ, ಸಂವಿಧಾನ ಶಿಲ್ಪಿ, ಸಮಾನತೆಯ ಹರಿಕಾರ, ದೇಶದ ಮೊದಲ ಕಾನೂನು ಸಚಿವರು, ದೇಶ ಕಂಡ ಮಹಾನ್ ವ್ಯಕ್ತಿ ಡಾ. ಬಿ.ಆರ್. ಅಂಬೇಡ್ಕರ್‌ರವರ 135ನೇ ಜನ್ಮದಿನಾಚರಣೆ ಕಾರ್ಯಕ್ರಮ ನಡೆಸಲಾಯಿತು. ಡಾ. ಬಿ.ಆರ್. ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಸಂಘದ ಅಧ್ಯಕ್ಷ ಸುರೇಶ್ ಅಬ್ಬನಡ್ಕ ಅಧ್ಯಕ್ಷತೆ ವಹಿಸಿ ಪುಷ್ಪಾರ್ಚನೆ ಸಲ್ಲಿಸಿ ಮಾಲಾರ್ಪಣೆ ಮಾಡಿ ದೀಪ ಬೆಳಗಿಸುವ ಮೂಲಕ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್‌ರವರ ೧೩೫ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದವರು.

ಡಾ. ಬಿ. ಆರ್. ಅಂಬೇಡ್ಕರ್ ಅವರಷ್ಟು ಡಿಗ್ರಿ ಪಡೆದವರು ದೇಶದಲ್ಲಿ ಯಾರಿಲ್ಲ, ಭಾರತದ ಕಾನೂನು ಸುವ್ಯವಸ್ಥೆ, ಅಸ್ಪೃಶ್ಯತೆ ನಿವಾರಣೆ, ಪ್ರಜೆಗಳ ಮೂಲಭೂತ ಕರ್ತವ್ಯ, ಸಮಾನತೆ, ಶಿಕ್ಷಣ ಕ್ಷೇತ್ರ ಸೇರಿದಂತೆ ಹಲವು ಕ್ಷೇತ್ರಗಳಿಗೆ ಅಂಬೇಡ್ಕರ್ ನೀಡಿದ ಕೊಡುಗೆಯನ್ನು ನಾವೆಲ್ಲರೂ ಸ್ಮರಿಸಲೇ ಬೇಕೆಂದರು.

ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‌ನ ಪೂರ್ವಾಧ್ಯಕ್ಷರಾದ ಆನಂದ ಪೂಜಾರಿ, ರಾಜೇಶ್ ಕೋಟ್ಯಾನ್, ಕೋಶಾಧಿಕಾರಿ ಪ್ರದೀಪ್ ಸುವರ್ಣ, ಮಹಿಳಾ ಸಂಘಟನಾ ಕಾರ್ಯದರ್ಶಿ ಸುಲೋಚನಾ ಕೋಟ್ಯಾನ್, ಸದಸ್ಯರಾದ ಸಂಧ್ಯಾ ಶೆಟ್ಟಿ, ಯೋಗಿಶ್ ಅಚಾರ್ಯ, ಶ್ರೀಕಾಂತ್ ಆಚಾರ್ಯ, ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯ ಉಪಾಧ್ಯಕ್ಷೆ ಅಶ್ವಿನಿ, ಸದಸ್ಯರಾದ ಪ್ರೇರಣ್ ಕುಲಾಲ್, ಅನ್ವಿತಾ, ಭವಿಶ್, ವಂಶಿ, ಹರ್ಷಲ್, ಸಾಕ್ಷಾಮ್, ಓಂಕಾರ್ ಮೊದಲಾದವರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50 ರ ರಿಯಾಯಿತಿ

ಉಡುಪಿ, ನ.17: ಕನ್ನಡ ರಾಜ್ಯೋತ್ಸವದ ಅಂಗವಾಗಿ 2026 ರ ನವೆಂಬರ್ ತಿಂಗಳು...

ರಥಬೀದಿ ಕಾಲೇಜಿನಲ್ಲಿ ವಿದ್ಯಾರ್ಥಿವೇತನ ದತ್ತಿ ನಿಧಿ ಸ್ಥಾಪನೆ

ಮಂಗಳೂರು, ನ.17: ಡಾ. ಪಿ. ದಯಾನಂದ ಪೈ-ಪಿ. ಸತೀಶ ಪೈ ಸರ್ಕಾರಿ...

ತೆಂಕನಿಡಿಯೂರು ಕಾಲೇಜು: ಯುವ ನಿಧಿ ಯೋಜನೆ ಅರಿವು ಕಾರ್ಯಕ್ರಮ

ಉಡುಪಿ, ನ.17: ತೆಂಕನಿಡಿಯೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ...
error: Content is protected !!