Sunday, July 26, 2026
Sunday, July 26, 2026

ಬಿ. ಬಿ. ಹೆಗ್ಡೆ ಕಾಲೇಜು: ಭಾಷಾ ಸಂಘದಿಂದ ಕಾರ್ಯಾಗಾರ

ಬಿ. ಬಿ. ಹೆಗ್ಡೆ ಕಾಲೇಜು: ಭಾಷಾ ಸಂಘದಿಂದ ಕಾರ್ಯಾಗಾರ

Date:

ಕುಂದಾಪುರ, ಏ.16: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಭಾಷಾ ಸಂಘದ ಆಶ್ರಯದಲ್ಲಿ ‘ಸ್ಪೀಕ್ ಟು ಕನೆಕ್ಟ್’ ಎನ್ನುವ ವಿಷಯದ ಕುರಿತು ಕಾರ್ಯಾಗಾರ ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ನಡೆಯಿತು. ಕಾಲೇಜಿನ ಇಂಗ್ಲೀಷ್ ವಿಭಾಗದ ಸಹಾಯಕ ಪ್ರಾಧ್ಯಾಪಕಿ ರವೀನಾ ಸಿ. ಪೂಜಾರಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿ, ಸಂಪರ್ಕ ಬೆಳೆಸಲು ಮಾತು ಅತ್ಯಂತ ಮುಖ್ಯ. ಸಂವಹನ ಕೌಶಲ್ಯ ಶ್ರೇಷ್ಠ ಕೌಶಲ್ಯಗಳಲ್ಲಿ ಒಂದು. ಮಾತನಾಡುವುದು ಎಂದರೆ ಕೇವಲ ಪದ ಪ್ರಯೋಗವಲ್ಲ, ಅದು ಭಾವನೆ ಮತ್ತು ವಿಚಾರಗಳನ್ನು ಇನ್ನೊಬ್ಬರ ಜೊತೆ ಹಂಚಿಕೊಳ್ಳುವುದರ ಮೂಲಕ ಆತ್ಮೀಯತೆ, ವಿಶ್ವಾಸ ಮತ್ತು ಬಾಂಧವ್ಯವನ್ನು ಗಟ್ಟಿಗೊಳಿಸುತ್ತದೆ. ಒಳ್ಳೆಯ ಸಂವಹನದ ಮೂಲಕ ಮನುಷ್ಯನ ನಡುವಿನ ಅಂತರವನ್ನು ಕಡಿಮೆಗೊಳಿಸಿ, ಉತ್ತಮ ಸಂಬಂಧವನ್ನು ಬೆಳೆಸಲು ಸಾಧ್ಯ ಎಂದರು. ಇದೇ ಸಂದರ್ಭ ಇಂಗ್ಲೀಷ್‌ನಲ್ಲಿ ಉತ್ತಮ ಸಂವಹನ ಕೌಶಲ್ಯಗಳನ್ನು ಬೆಳೆಸಿಕೊಳ್ಳುವ ಮೂಲಕ, ಜಾಗತಿಕ ಮಟ್ಟದಲ್ಲಿ ಮನ್ನಣೆ ಪಡೆಯಲು, ಉತ್ತಮ ಉದ್ಯೋಗ ಗಳಿಸಲು ಸಾಧ್ಯ ಎಂದರು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಇಂಗ್ಲೀಷ್ ವಿಭಾಗದ ಮುಖ್ಯಸ್ಥೆ ದೀಪಿಕಾ ಜಿ., ಭಾಷಾ ಸಂಘದ ಸಂಯೋಜಕಿ ಪ್ರವೀಣಾ ಎಮ್. ಪೂಜಾರಿ ಉಪಸ್ಥಿತರಿದ್ದರು.

ಕಾರ್ಯಕ್ರಮ ಸಂಯೋಜಕರಾದ ಸಂಸ್ಕೃತ ವಿಭಾಗದ ಮುಖ್ಯಸ್ಥೆ ಮೇಘಾ ಎಸ್. ಭಟ್ ಅತಿಥಿಗಳನ್ನು ಪರಿಚಯಿಸಿದರು. ಭಾಷಾ ಸಂಘದ ಸಂಯೋಜಕರಾದ ಡಾ. ದೀಪಾ ವಂದಿಸಿ, ಸ್ವಾತಿ ಜಿ. ರಾವ್ ಕಾರ್ಯಕ್ರಮ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!