Sunday, October 18, 2026
Sunday, October 18, 2026

ಪಂಚವರ್ಣ: ಅಂಬೇಡ್ಕರ್ ಜಯಂತಿ

ಪಂಚವರ್ಣ: ಅಂಬೇಡ್ಕರ್ ಜಯಂತಿ

Date:

ಕೋಟ, ಏ.16: ಅಂಬೇಡ್ಕರ್ ಅನುಭವಿಸಿದ ಯಾತನೆ ಸಮಾಜದ ಕಣ್ಣು ತೆರೆಸಿತ್ತಲ್ಲದೆ ಕೆಳ ಮತ್ತು ಮಧ್ಯಮ ವರ್ಗದವರ ಶಿಕ್ಷಣ ಕ್ರಾಂತಿಗೆ ಮುನ್ನುಡಿ ಬರೆಯಿತು ಎಂದು ಶಿಕ್ಷಕ ಹೆರಿಯ ಮಾಸ್ಟರ್ ಹೇಳಿದರು. ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಇಂಡಿಕಾ ಕಲಾ ಬಳಗ ಮಣೂರು ಸಹಕಾರದೊಂದಿಗೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ ೧೩೫ನೇ ಜಯಂತೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ವೇದಿಕೆಯಲ್ಲಿದ್ದ ಗಣ್ಯರು ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಮಾಲಾರ್ಪಣೆಗೈದು ನಮನ ಸಲ್ಲಿಸಿದರು.

ಇಂಡಿಕಾ ಕಲಾ ಬಳಗದ ಸಂಚಾಲಕ ಪ್ರಭಾಕರ್ ಪಡುಕರೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಭಾಧ್ಯಕ್ಷತೆಯನ್ನು ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಮನೋಹರ್ ಪೂಜಾರಿ ವಹಿಸಿದ್ದರು. ಮುಖ್ಯ ಅಭ್ಯಾಗತರಾಗಿ ಸಾಲಿಗ್ರಾಮ ಶ್ರೀ ಗುರುನರಸಿಂಹ ದೇಗುಲದ ಆಡಳಿತ ಮಂಡಳಿಯ ಸದಸ್ಯ ಕೆ. ತಾರಾನಾಥ ಹೊಳ್ಳ, ಪಂಚವರ್ಣದ ಸಂಚಾಲಕ ಅಮೃತ್ ಜೋಗಿ ಉಪಸ್ಥಿತರಿದ್ದರು. ಪಂಚವರ್ಣ ಮಹಿಳಾ ಮಂಡಲದ ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್ ಸ್ವಾಗತಿಸಿದರು. ಪಂಚವರ್ಣ ಮಹಿಳಾ ಮಂಡಲದ ಸಂಚಾಲಕಿ ಸುಜಾತ ಬಾಯರಿ ನಿರೂಪಿಸಿ, ಯುವಕ ಮಂಡಲದ ಸದಸ್ಯ ಪ್ರಶಾಂತ್ ಪಡುಕರೆ ವಂದಿಸಿದರು. ರವೀಂದ್ರ ಕೋಟ ಕಾರ್ಯಕ್ರಮ ಸಂಯೋಜಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!