Sunday, July 26, 2026
Sunday, July 26, 2026

ಬಿ. ಬಿ. ಹೆಗ್ಡೆ ಕಾಲೇಜು: ರೆಸ್ಯೂಮ್ ಬಿಲ್ಡಿಂಗ್ ಕಾರ್ಯಾಗಾರ

ಬಿ. ಬಿ. ಹೆಗ್ಡೆ ಕಾಲೇಜು: ರೆಸ್ಯೂಮ್ ಬಿಲ್ಡಿಂಗ್ ಕಾರ್ಯಾಗಾರ

Date:

ಕುಂದಾಪುರ, ಏ.17: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಆಶ್ರಯದಲ್ಲಿ ರೆಸ್ಯೂಮ್ ಬಿಲ್ಡಿಂಗ್ ಕಾರ್ಯಾಗಾರ ನಡೆಯಿತು. ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಸಹ ಪ್ರಾಧ್ಯಾಪಕ ಹಾಗೂ ಡೀನ್ ಅಕಾಡೆಮಿಕ್ಸ್ ಗಿರಿರಾಜ್ ಭಟ್ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಪರಿಣಾಮಕಾರಿ ರೆಸ್ಯೂಮ್ ರಚನೆ, ವೃತ್ತಿಪರ ಪ್ರೊಫೈಲ್ ಅಭಿವೃದ್ಧಿ ಹಾಗೂ ಉದ್ಯೋಗಾವಕಾಶಗಳಿಗೆ ಸಿದ್ಧರಾಗುವ ಕುರಿತು ವಿದ್ಯಾರ್ಥಿಗಳಿಗೆ ಉಪಯುಕ್ತ ಮಾರ್ಗದರ್ಶನ ನೀಡಿದರು. ಇದೇ ಸಂದರ್ಭ ಅವರು ವಿದ್ಯಾರ್ಥಿಗಳಿಗೆ ಉದ್ಯೋಗ ಗಿಟ್ಟಿಸುವಲ್ಲಿ ಪ್ರಾಥಮಿಕ ಹಂತದಲ್ಲಿ ರೆಸ್ಯೂಮ್ ಅತ್ಯಂತ ಮಹತ್ವದ್ದಾಗಿದ್ದು, ಉತ್ತಮ ವ್ಯಕ್ತಿತ್ವದ ದರ್ಪಣವಾಗಿ ರೆಸ್ಯೂಮ್ ಮೂಡಿ ಬರಲಿ ಎಂದರು.

ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಮಹೇಶ್ ಕುಮಾರ್, ಕಾರ್ಯಕ್ರಮ ಸಂಯೋಜಕರು ಮತ್ತು ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಮಹೇಶ್ ಪೂಜಾರಿ ಹಾಗೂ ಶಿವಾನಿ ಅಡಿಗ ಉಪಸ್ಥಿತರಿದ್ದರು. ಬಿಸಿಎ ವಿದ್ಯಾರ್ಥಿಗಳಾದ ಅಮರ್ ಸ್ವಾಗತಿಸಿ, ವೈಷ್ಣವಿ ಅತಿಥಿಗಳನ್ನು ಪರಿಚಯಿಸಿ, ಶಶಿಕಾಂತ್ ವಂದಿಸಿ, ರಿಶಿತಾ ಪ್ರಾರ್ಥಿಸಿ, ಶಿಫಾ ಕಾರ್ಯಕ್ರಮ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!