Sunday, July 26, 2026
Sunday, July 26, 2026

ಶಿಬಿರಗಳಿಂದ ಸಂಸ್ಕಾರದ ಬೆಳವಣಿಗೆ: ಗುಂಡ್ಮಿ ರಾಮಚಂದ್ರ ಐತಾಳ

ಶಿಬಿರಗಳಿಂದ ಸಂಸ್ಕಾರದ ಬೆಳವಣಿಗೆ: ಗುಂಡ್ಮಿ ರಾಮಚಂದ್ರ ಐತಾಳ

Date:

ಕೋಟ, ಏ.17: ಕಳೆದ ಹದಿಮೂರು ವರ್ಷಗಳಿಂದ ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ ಐರೋಡಿ ಇವರು ಆಯೋಜಿಸುತ್ತಿರುವ ಯಕ್ಷಗಾನ ನೃತ್ಯ ಮತ್ತು ಅಭಿನಯ ಶಿಬಿರ ‘ನಲಿಕುಣಿ’ ಪರಿಸರದ ಮಕ್ಕಳಲ್ಲಿ ಸಂಸ್ಕಾರದ ಬೆಳವಣಿಗೆಗೆ ಸಹಕಾರಿಯಾಗುತ್ತಿದೆ. ಈ ಸಂಸ್ಥೆಯಲ್ಲಿ ನೀಡಲಾಗುವ ಶಿಸ್ತುಬದ್ದ ಶಿಕ್ಷಣ ಮಕ್ಕಳ ಜೀವನದಲ್ಲಿ ನಶಿಸದಂತ ಸಂಸ್ಕೃತಿಯನ್ನು ಕಲಿಸುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಬ್ರಹ್ಮಾವರ ಘಟಕದ ಅಧ್ಯಕ್ಷ ಗುಂಡ್ಮಿ ರಾಮಚಂದ್ರ ಐತಾಳ ಹೇಳಿದರು.

ಅವರು ಗುಂಡ್ಮಿ ಹಂಗಾರಕಟ್ಟೆ ಯಕ್ಷಗಾನ ಕಲಾಕೇಂದ್ರದವರು ಆಯೋಜಿಸಿರುವ ಇಪ್ಪತ್ತು ದಿನಗಳ ‘ನಲಿ ಕುಣಿ’ ಶಿಬಿರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಪ್ರಾಚಾರ್ಯ ಸದಾನಂದ ಐತಾಳರು ಮಾತನಾಡಿ ಉತ್ತಮ ಯಕ್ಷ ಶಿಕ್ಷಣವನ್ನು ನೀಡುತ್ತಿರುವ ಕಲಾಕೇಂದ್ರದ ಶ್ರಮ ಶ್ಲಾಘನೀಯ ಎಂದರು.

ವೇದಿಕೆಯಲ್ಲಿ ಯಕ್ಷ ಗುರುಗಳಾದ ಕೇಶವ ಆಚಾರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು. ಜಯೇಂದ್ರ ಅಡಿಗ, ರಾಘವೇಂದ್ರ ಮಟಪಾಡಿ ಸಭೆಯಲ್ಲಿ ಉಪಸ್ಥಿತರಿದ್ದರು. ಕಾರ್ಯದರ್ಶಿ ಐರೋಡಿ ರಾಜಶೇಖರ ಹೆಬ್ಬಾರ್ ಸ್ವಾಗತಿಸಿ, ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!