Monday, October 5, 2026
Monday, October 5, 2026

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ

Date:

ಉಡುಪಿ, ಏ.19: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ ಇದರ ವತಿಯಿಂದ ಮೇ 3ರಂದು ಡಾ. ಭಾಸ್ಕರಾಂನಂದ ಕುಮಾರ್ ಅವರ ಸರ್ವಾಧ್ಯಕ್ಷತೆಯಲ್ಲಿ ನಡೆಯಲಿರುವ 16ನೇ ಕನ್ನಡ ಸಾಹಿತ್ಯ ಸಮ್ಮೇಳನ ಭೀಷ್ಮೋತ್ಸವದ ಆಮಂತ್ರಣ ಪತ್ರಿಕೆಯನ್ನು ಸಾಂಸ್ಕೃತಿಕ ರಾಯಭಾರಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಮೋಹನ್ ಆಳ್ವ ಅವರು ಬಿಡುಗಡೆಗೊಳಿಸಿ, ನಾನು ಬರುತ್ತೇನೆ, ನೀವೆಲ್ಲಾ ಬನ್ನಿ ಎಂದು ಕನ್ನಡಾಭಿಮಾನಿಗಳಿಗೆ ಕರೆಯಿತ್ತು ಕಾರ್ಯಕ್ರಮ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.

ಕಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್.ಪಿ., ಕಸಾಪ ಗೌರವ ಸಲಹೆಗಾರರಾದ ಉಡುಪಿ ವಿಶ್ವನಾಥ್ ಶೆಣೈ, ಪ್ರೊ. ಶಂಕರ್, ಗೌರವ ಕಾರ್ಯದರ್ಶಿಗಳಾದ ಜನಾರ್ದನ್ ಕೊಡವೂರು, ರಂಜನಿ ವಸಂತ್, ಗೌರವ ಕೋಶಾದ್ಯಕ್ಷ ರಾಜೇಶ್ ಭಟ್ ಪಣಿಯಾಡಿ, ಮಾಧ್ಯಮ ಪ್ರತಿನಿಧಿ ಆಸ್ಟ್ರೋ ಮೋಹನ್, ಸಂಘಟನಾ ಕಾಯ೯ದಶಿ೯ ರಾಘವೇಂದ್ರ ಪ್ರಭು ಕವಾ೯ಲು, ವಸಂತ್, ದೀಪಾ ಕಕಿ೯, ಚಂದ್ರಶೇಖರ್, ಸಾಮಾಜಿಕ ಜಾಲತಾಣ ಸಂಚಾಲಕ ಸಿದ್ದಬಸಯ್ಯ ಸ್ವಾಮಿ ಚಿಕ್ಕ ಮಠ ಮೊದಲಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ಜಾನಕಿ ನಮನ’

ಉಡುಪಿ, ಅ.4: ಉಡುಪಿಯ ಕೋಸ್ಟಲ್‌ ಸ್ಟಾರ್‌ ಮ್ಯೂಸಿಕ್‌ ಕ್ಲಬ್‌ ಆಶ್ರಯದಲ್ಲಿ ಕರ್ಣಾಟಕ...

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಡಾ. ನಿಖಿಲ್ ಗುಪ್ತ ಭೇಟಿ

ಕಾಪು, ಅ.4: ಮಹಾರಾಷ್ಟ್ರದ ಕಾನೂನು ಮತ್ತು ಸುವ್ಯವಸ್ಥೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ...

ಕುಪ್ಮಾ ಉತ್ತಮ ಉಪನ್ಯಾಸಕ ಪ್ರಶಸ್ತಿ ಪ್ರದಾನ

ಮಣಿಪಾಲ, ಅ.4: ಕರ್ನಾಟಕ ಅನುದಾನ ರಹಿತ ಪದವಿಪೂರ್ವ ಕಾಲೇಜು ಆಡಳಿತ ಮಂಡಳಿಗಳ...
error: Content is protected !!