Saturday, October 3, 2026
Saturday, October 3, 2026

ಉಡುಪಿ ಜಿಲ್ಲಾಸ್ಪತ್ರೆಗೆ ಎರಡು ಹವಾನಿಯಂತ್ರಕಗಳ ಹಸ್ತಾಂತರ

ಉಡುಪಿ ಜಿಲ್ಲಾಸ್ಪತ್ರೆಗೆ ಎರಡು ಹವಾನಿಯಂತ್ರಕಗಳ ಹಸ್ತಾಂತರ

Date:

ಉಡುಪಿ, ಏ.19: ಉಡುಪಿ ಜಿಲ್ಲಾಸ್ಪತ್ರೆಯ ಶಸ್ತ್ರಚಿಕಿತ್ಸಾ ಕೊಠಡಿಗೆ ಶಾಸಕ ಯಶ್ಪಾಲ್ ಸುವರ್ಣ ಅವರ ಮನವಿಯ ಮೇರೆಗೆ ಉಡುಪಿಯ ಭೀಮ ಗೋಲ್ಡ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ವತಿಯಿಂದ ಕೊಡುಗೆಯಾಗಿ ನೀಡಿದ ರೂ. 2 ಲಕ್ಷ ಮೌಲ್ಯದ ಎರಡು ಹವಾನಿಯಂತ್ರಕಗಳನ್ನು ಜಿಲ್ಲಾಸ್ಪತ್ರೆಗೆ ಶಾಸಕ ಯಶ್ಪಾಲ್ ಸುವರ್ಣ ಸಮ್ಮುಖದಲ್ಲಿ ಹಸ್ತಾಂತರಿಸಲಾಯಿತು.

ಉಡುಪಿ ಜಿಲ್ಲಾಸ್ಪತ್ರೆಗೆ ಅತೀ ಅಗತ್ಯವಾಗಿದ್ದ ಹವಾನಿಯಂತ್ರಕವನ್ನು ತಕ್ಷಣ ಒದಗಿಸಿದ ಭೀಮ ಗೋಲ್ಡ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಆಡಳಿತ ಮಂಡಳಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ಶಾಸಕರು ತಿಳಿಸಿದರು. ಸಂಸ್ಥೆಯ ಪ್ರತಿನಿಧಿಯಾದ ಜಿ. ರಾಘವೇಂದ್ರ ಭಟ್, ಜಿಲ್ಲಾಸ್ಪತ್ರೆಯ ಜಿಲ್ಲಾ ಸರ್ಜನ್ ಡಾ. ಅಶೋಕ್, ವೈದ್ಯರಾದ ಡಾ. ಸಾಗರ್ ಭಟ್ ಹಾಗೂ ಜಿಲ್ಲಾಸ್ಪತ್ರೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವಭಾರತಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘ ನಿಯಮಿತ- ದಶಮಾನೋತ್ಸವ ಕಾರ್ಯಕ್ರಮ ಹಾಗೂ ವಾರ್ಷಿಕ ಸಾಮಾನ್ಯ ಸಭೆ

ಉಡುಪಿ, ಅ.2: ವಿಶ್ವಭಾರತಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘ ನಿಯಮಿತ, ಉಡುಪಿ...

ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪ್ರದಾನ

ಬೆಂಗಳೂರು, ಅ.2: ಮಹಾತ್ಮ ಗಾಂಧಿ ಜಯಂತಿಯ ಅಂಗವಾಗಿ ಬೆಂಗಳೂರಿನ ಗಾಂಧಿ ಭವನದಲ್ಲಿ...

ಏಷ್ಯನ್ ಗೇಮ್ಸ್: ಭಾರತದ ಒಟ್ಟು ಪದಕಗಳ ಸಂಖ್ಯೆ 76ಕ್ಕೆ ಏರಿಕೆ; ಪದಕ ಪಟ್ಟಿಯಲ್ಲಿ ಐದನೇ ಸ್ಥಾನ

ಯು.ಬಿ.ಎನ್.ಡಿ., ಅ.2: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತದ ಪದಕ...
error: Content is protected !!