Friday, October 2, 2026
Friday, October 2, 2026

ಬಿ.ಬಿ. ಹೆಗ್ಡೆ ಕಾಲೇಜು: ಹ್ಯಾಕಥಾನ್ ಕಾರ್ಯಕ್ರಮ

ಬಿ.ಬಿ. ಹೆಗ್ಡೆ ಕಾಲೇಜು: ಹ್ಯಾಕಥಾನ್ ಕಾರ್ಯಕ್ರಮ

Date:

ಕುಂದಾಪುರ, ಏ.20: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಆಶ್ರಯದಲ್ಲಿ ಹ್ಯಾಕಥಾನ್ ಕಾರ್ಯಕ್ರಮವನ್ನು ಸಂಸ್ಥೆಯ ಪ್ರಾಂಶುಪಾಲರಾದ ಪ್ರೊ. ಡಾ. ಕೆ. ಉಮೇಶ್ ಶೆಟ್ಟಿ ಉದ್ಘಾಟಿಸಿದರು. ಪ್ರಾಯೋಗಿಕ ಕಲಿಕೆಗೆ ನಮ್ಮ ಸಂಸ್ಥೆಯಲ್ಲಿ ಮನ್ನಣೆಯನ್ನು ನೀಡಲಾಗುತ್ತಿದೆ. ಹ್ಯಾಕಥಾನ್ ಪ್ರಾಯೋಗಿಕ ಕಲಿಕೆಗೆ ಆದ್ಯತೆ ನೀಡುವ ಮಹತ್ವದ ಕಾರ್ಯಕ್ರಮ. ವಿದ್ಯಾರ್ಥಿಗಳಲ್ಲಿ ತಾಂತ್ರಿಕ ಕೌಶಲ್ಯಗಳನ್ನು ವರ್ಧಿಸಲು ಇಂತಹ ಕಾರ್ಯಕ್ರಮ ಅತ್ಯಂತ ಉಪಯುಕ್ತ ಎಂದರು.

ಹ್ಯಾಕಥಾನ್‌ನಲ್ಲಿ ವಿದ್ಯಾರ್ಥಿಗಳನ್ನು ತಂಡಗಳಾಗಿ ವಿಭಜಿಸಿ, ತಂತ್ರಜ್ಞಾನವನ್ನು ಬಳಸಿಕೊಂಡು ನೈಜ ಜೀವನದ ವಿವಿಧ ತಂತ್ರಜ್ಞಾನ ಸಂಬಂಧಿತ ಸಮಸ್ಯೆಗಳಿಗೆ ಪರಿಹಾರ ಕಂಡು ಹಿಡಿಯಲು ಅವಕಾಶ ಕಲ್ಪಿಸಲಾಯಿತು. 24 ಗಂಟೆಗಳ ಕಾಲ ನಡೆದ ಈ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ತಮ್ಮ ಸೃಜನಶೀಲತೆ ಹಾಗೂ ತಾಂತ್ರಿಕ ಕೌಶಲ್ಯಗಳನ್ನು ಪ್ರದರ್ಶಿಸಿದರು.

ಬಿಸಿಎ ವಿಭಾಗದ ಮುಖ್ಯಸ್ಥರಾದ ಮಹೇಶ್ ಕುಮಾರ್ ಅವರು ಹ್ಯಾಕಥಾನ್ ಕಾರ್ಯಕ್ರಮದ ಉದ್ದೇಶಗಳು ಮತ್ತು ಅದರ ಪ್ರಾಮುಖ್ಯತೆ ಕುರಿತು ವಿವರಿಸಿದರು. ಕಾರ್ಯಕ್ರಮದಲ್ಲಿ ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ, ಕಾರ್ಯಕ್ರಮದ ಸಂಯೋಜಕರಾದ ವಿಲ್ಮಾ ಶೆರಲ್ ಹಾಗೂ ಪ್ರಣಮ್ ಆರ್. ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ರಕ್ಷಾ ಸ್ವಾಗತಿಸಿ, ವಾಣಿಶ್ರೀ ವಂದಿಸಿ, ಮನಿಷಾ ಪ್ರಾರ್ಥಿಸಿದರು. ರಶ್ಮಿತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವಭಾರತಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘ ನಿಯಮಿತ- ದಶಮಾನೋತ್ಸವ ಕಾರ್ಯಕ್ರಮ ಹಾಗೂ ವಾರ್ಷಿಕ ಸಾಮಾನ್ಯ ಸಭೆ

ಉಡುಪಿ, ಅ.2: ವಿಶ್ವಭಾರತಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘ ನಿಯಮಿತ, ಉಡುಪಿ...

ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪ್ರದಾನ

ಬೆಂಗಳೂರು, ಅ.2: ಮಹಾತ್ಮ ಗಾಂಧಿ ಜಯಂತಿಯ ಅಂಗವಾಗಿ ಬೆಂಗಳೂರಿನ ಗಾಂಧಿ ಭವನದಲ್ಲಿ...

ಏಷ್ಯನ್ ಗೇಮ್ಸ್: ಭಾರತದ ಒಟ್ಟು ಪದಕಗಳ ಸಂಖ್ಯೆ 76ಕ್ಕೆ ಏರಿಕೆ; ಪದಕ ಪಟ್ಟಿಯಲ್ಲಿ ಐದನೇ ಸ್ಥಾನ

ಯು.ಬಿ.ಎನ್.ಡಿ., ಅ.2: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತದ ಪದಕ...
error: Content is protected !!