ಕೋಟ, ಏ.20: ಹೆದ್ದಾರಿ ಬದಿಯಲ್ಲಿ ಕಸದ ಕೊಂಪೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಇದರ ಬಗ್ಗೆ ಮಣೂರು ಹಾಲು ಉತ್ಪಾದಕರ ಸಹಕಾರಿ ಸಂಘದ ಸಿಇಒ ಹರ್ಷ ಪೂಜಾರಿ ಬೇಸರ ವ್ಯಕ್ತಪಡಿಸಿದರು. ಭಾನುವಾರ ಕೋಟದ ಪಂಚವರ್ಣ ಯುವಕ ಮಂಡಲ ಕೋಟ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ಮಣೂರು ಫ್ರೆಂಡ್ಸ್ ಸಹಯೋಗದೊಂದಿಗೆ ಕೋಟ ಗ್ರಾ.ಪಂ ಎಸ್ ಎಲ್ ಆರ್ ಎಂ ಘಟಕ ಇವರ ಸಂಯೋಜನೆಯೊಂದಿಗೆ 299ನೇ ಭಾನುವಾರದ ಸ್ವಚ್ಛತಾ ಅಭಿಯಾನದಲ್ಲಿ ಅವರು ಮಾತನಾಡಿದರು. ಪಂಚವರ್ಣದ ಪರಿಸರ ಸಂರಕ್ಷಣೆ ಕಾರ್ಯ ಶ್ಲಾಘನೀಯ ಎಂದರು.
ಪಂಚವರ್ಣ ಯುವಕ ಮಂಡಲದ ನಿಕಟಪೂರ್ವ ಅಧ್ಯಕ್ಷ ಅಜಿತ್ ಆಚಾರ್, ಗಿರೀಶ್ ಆಚಾರ್, ಉಪಾಧ್ಯಕ್ಷ ದಿನೇಶ್ ಆಚಾರ್, ಪಂಚವರ್ಣ ಮಹಿಳಾ ಮಂಡಲದ ಸಂಚಾಲಕಿ ಸುಜಾತ ಬಾಯರಿ, ಟ್ರಾವೆಲಿಂಕ್ಸ್ ಫ್ರೆಂಡ್ಸ್ ನ ನಾಗರಾಜ್ ಅಮೀನ್ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.




By
ForthFocus™