ಉಡುಪಿ: ಉಡುಪಿಯ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 1 ಮತ್ತು 2 ನೇ ವರ್ಷದ ಎನ್.ಸಿ.ವಿ.ಟಿ ಐ.ಟಿ.ಐ ನ ವಿವಿಧ ಕೋರ್ಸುಗಳಲ್ಲಿ ಖಾಲಿ ಉಳಿದಿರುವ ಸ್ಥಾನಗಳ ಪ್ರವೇಶಾತಿಗಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ಜೂನ್ 27 ರ ವರೆಗೆ ವಿಸ್ತರಿಸಲಾಗಿದೆ.
ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಉಡುಪಿ ಮೊನಂ: 9448409355 ಮತ್ತು 9738439619 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.