Thursday, July 23, 2026
Thursday, July 23, 2026

ಜೆಇಇ ಮೈನ್ಸ್ ಫಲಿತಾಂಶ ಪ್ರಕಟ: ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

ಜೆಇಇ ಮೈನ್ಸ್ ಫಲಿತಾಂಶ ಪ್ರಕಟ: ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

Date:

ಕಾರ್ಕಳ, ಏ.21: ದೇಶದ ಪ್ರತಿಷ್ಠಿತ ತಾಂತ್ರಿಕ ವಿಶ್ವವಿದ್ಯಾನಿಲಯಗಳಿಗೆ ಸೇರ ಬಯಸುವ ವಿದ್ಯಾರ್ಥಿಗಳಿಗೆ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯವರು ನಡೆಸುವ ಅತಿ ಕ್ಲಿಷ್ಟಕರವೆನಿಸಿದ ಪರೀಕ್ಷೆಗಳಲ್ಲೊಂದಾದ ಜೆಇಇ ಮೈನ್ಸ್ (ಸೆಷನ್-2) 2026 ನೇ ಸಾಲಿನ ಅರ್ಹತಾ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ 3 ಮಂದಿ ವಿದ್ಯಾರ್ಥಿಗಳು 99 ಪರ್ಸೆಂಟೈಲ್ ಗಿಂತ ಅಧಿಕ ಅಂಕವನ್ನು ಪಡೆದು ವಿಶಿಷ್ಟ ಸಾಧನೆ ಗೈದು ಮುಂದಿನ ಹಂತದ ಜೆಇಇ ಅಡ್ವಾನ್ಸ್ ಪರೀಕ್ಷೆಗೆ ತೇರ್ಗಡೆಯನ್ನು ಹೊಂದಿದ್ದಾರೆ. ವಿದ್ಯಾರ್ಥಿಗಳಾದ ನಮಿತ್ ಕೃಷ್ಣಮೂರ್ತಿ ಹೆಗಡೆ 99.4981217 ಪರ್ಸೆಂಟೈಲ್, ನಾಗದೇವ್ ಎಂ.ಜಿ. – 99.5970242 ಪರ್ಸೆಂಟೈಲ್, ಪ್ರಥಮ್ ತಮ್ಮಣ್ಣ ಗೌಡರ್ – 99.1416986 ಪರ್ಸೆಂಟೈಲ್ ಪಡೆದುಕೊಳ್ಳುವ ಮೂಲಕ ವಿಶಿಷ್ಟ ಶ್ರೇಣಿಗಳಿಸಿದ್ದಾರೆ. ಬಸವರೆಡ್ಡಿ ವಿಷ್ಣುರೆಡ್ಡಿ – 98.9823753 ತೇಜಸ್ ಆರ್. ಬಿ.- 98.9615457 ನಿನಾದ್ ರಾಜೇಶ್ ನಾಯ್ಕ್- 98.946358 ಧನುಷ್ ಹೆಚ್. ಎ.- 98.863449 ಸಂವಿತ್‌ ಅಮಿತ್ ಗೋಕರ್ಣ- 98.5729919 ದೃಶ್ಯ್‌- 98.4130581 ಸುಕ್ಷಿತ್ ಗಿರೀಶ್ ಗೌಡ- 98.3503888 ತೇಜಸ್ ಎನ್. ಇ. – 98.3454350 ತೇಜಸ್ ಹೆಗಡೆ ಎಚ್. ಡಿ.-98.1925416 ಅಕ್ಷತಾ ಮೋಹನ್ ಹೆಗಡೆ -98.168271 ಪ್ರಜ್ವಲ್ ಭಟ್- 98.0498968 ವಿಶ್ವೇಶ್ ಎನ್. ಎಚ್.98.0348799 ಪರ್ಸೆಂಟೈಲ್ ಗಳನ್ನು ಪಡೆದುಕೊಂಡಿದ್ದಾರೆ.

99 ಪರ್ಸೆಂಟೈಲ್ ಗಿಂತ ಅಧಿಕ 03 ಮಂದಿ ವಿದ್ಯಾರ್ಥಿಗಳು, 98 ಪರ್ಸೆಂಟೈಲ್ ಗಿಂತ ಅಧಿಕ 15ವಿದ್ಯಾರ್ಥಿಗಳು, 95 ಪರ್ಸೆಂಟೈಲ್ ಗಿಂತ ಅಧಿಕ 51 ವಿದ್ಯಾರ್ಥಿಗಳು, 90 ಪರ್ಸೆಂಟೈಲ್ ಗಿಂತ ಅಧಿಕ 114 ವಿದ್ಯಾರ್ಥಿಗಳು ಅಂಕಗಳನ್ನು ಪಡೆದುಕೊಂಡು ಮುಂದಿನ ಹಂತದ ಜೆಇಇ ಅಡ್ವಾನ್ಸ್ ಪರೀಕ್ಷೆಗೆ ಅರ್ಹತೆಯನ್ನು ಗಳಿಸಿಕೊಂಡಿದ್ದಾರೆ. ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಸಂಸ್ಥೆಯ ಪ್ರಾಂಶುಪಾಲರು,ಆಡಳಿತ ಮಂಡಳಿ, ಉಪನ್ಯಾಸಕ ವರ್ಗ ಹಾಗೂ ಬೋಧಕೇತರ ಸಿಬ್ಬಂದಿಗಳು ಮತ್ತು ಸಂಸ್ಥೆಯ ಜೆಇಇ ಪರೀಕ್ಷೆಯ ಸಂಯೋಜಕರಾದ ಶ್ರೀ ನಂದೀಶ್ ಅಭಿನಂದಿಸಿ ಮುಂದಿನ ಹಂತದ ಪರೀಕ್ಷೆಗೆ ಶುಭ ಹಾರೈಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬೊಮ್ಮರಬೆಟ್ಟು: ಗ್ರಾಮಸ್ಥರ ಅಹವಾಲು ಸ್ವೀಕಾರ

ಕಾಪು, ಜು.21: ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ...

ರಿಕ್ಷಾ ಚಾಲಕರ ಅಗತ್ಯ ಬೇಡಿಕೆಗಳ ಈಡೇರಿಕೆಗೆ ವಿಶೇಷ ಆದ್ಯತೆ: ಯಶ್ಪಾಲ್ ಸುವರ್ಣ

ಬ್ರಹ್ಮಾವರ, ಜು.21: ಸಾರ್ವಜನಿಕರ ಸಾರಿಗೆ ವ್ಯವಸ್ಥೆಯಲ್ಲಿ ವಿಶೇಷ ಪಾತ್ರವಹಿಸುವ ರಿಕ್ಷಾ ಚಾಲಕರ...

ಬಡಾ ಗ್ರಾಮ ಪಂಚಾಯತ್: ವಿವಿಧ ಸವಲತ್ತು ವಿತರಣೆ

ಕಾಪು, ಜು.21: ಬಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ...

ಕ್ರೀಡಾ ದಾಖಲೆಗಳ ಮಾಹಿತಿ ಹಾಗೂ ತರಬೇತಿ ಸಾಧನೆಗೆ ಸ್ಪೂರ್ತಿ: ಡಾ.ಸುಧಾಕರ ಶೆಟ್ಟಿ

ಮಣಿಪಾಲ, ಜು.21: ಕ್ರೀಡಾ ದಾಖಲೆಗಳ ಮಾಹಿತಿ ಹಾಗೂ ತರಬೇತಿ ವಿದ್ಯಾರ್ಥಿಗಳ ಸಾಧನೆಗೆ...
error: Content is protected !!