Saturday, October 17, 2026
Saturday, October 17, 2026

ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಯಶಸ್ವಿನ ತಂತ್ರಗಳು

ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಯಶಸ್ವಿನ ತಂತ್ರಗಳು

Date:

ಬಸ್ರೂರು, ಏ.22: ಶ್ರೀ ಶಾರದಾ ಕಾಲೇಜು ಬಸ್ರೂರು ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ವಿಭಾಗ ಆಶ್ರಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಯಶಸ್ವಿನ ತಂತ್ರಗಳು ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಪೂರ್ಣಪ್ರಜ್ಞಾ ಕಾಲೇಜಿನ ಪ್ರಾಧ್ಯಾಪಕರಾದ ರಾವ್‌ ಹರ್ಷಲ್‌ ದೇವರಾಜ್‌ ಇವರು ಇಂದಿನ ಕಾಲದಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಬಹಳ ಮುಖ್ಯವಾಗಿದ್ದು, ಅದಕ್ಕೆ ಬೇಕಾದ ಸರಿಯಾದ ಯೋಜನೆ ಮತ್ತು ಕಠಿಣ ಪರಿಶ್ರಮ ಅಗತ್ಯ ಅದಕ್ಕಾಗಿ ವಿದ್ಯಾರ್ಥಿಗಳು ಸರಿಯಾದ ಗುರಿಯನ್ನು ನಿಗದಿಪಡಿಸಿಕೊಂಡು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿದಾಗ ಮಾತ್ರ ಯಶಸ್ಸು ಸಾಧಿಸಲು ಸಾಧ್ಯವಾಗುತ್ತದೆ ಎಂದರು.

ಕಾಲೇಜಿನ ಆಡಳಿತಾಧಿಕಾರಿಯಾದ ಡಾ. ಮೋಹನ ಕೆ.ಎನ್ ಉಪಸ್ಥಿತರಿದ್ದರು. ಕಾರ್ಯಕ್ರಮದ ಸಂಯೋಜಕ ಮುರುಳಿಧರ ಹೆಗ್ಡೆ ಸ್ವಾಗತಿಸಿ, ವಿದ್ಯಾರ್ಥಿನಿ ವಿಕಾಶ್‌ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ ಭೂಮಿಕಾ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!