Thursday, July 30, 2026
Thursday, July 30, 2026

ಬಿ. ಬಿ. ಹೆಗ್ಡೆ ಕಾಲೇಜು: ನೆಕ್ಸ್ಟ್ ಜನ್ ಎ.ಐ. ಟೂಲ್ಸ್: ಟ್ರಾನ್ಸ್ಫಾರ್ಮಿಂಗ್ ಇನ್ನೋವೇಶನ್ ಕಾರ್ಯಾಗಾರ

ಬಿ. ಬಿ. ಹೆಗ್ಡೆ ಕಾಲೇಜು: ನೆಕ್ಸ್ಟ್ ಜನ್ ಎ.ಐ. ಟೂಲ್ಸ್: ಟ್ರಾನ್ಸ್ಫಾರ್ಮಿಂಗ್ ಇನ್ನೋವೇಶನ್ ಕಾರ್ಯಾಗಾರ

Date:

ಕುಂದಾಪುರ, ಏ.23: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ ವಿಜ್ಞಾನ ವಿಭಾಗದ ವತಿಯಿಂದ ನೆಕ್ಸ್ಟ್ ಜನ್ ಎ.ಐ. ಟೂಲ್ಸ್: ಟ್ರಾನ್ಸ್ಫಾರ್ಮಿಂಗ್ ಇನ್ನೋವೇಶನ್ ಎಂಬ ವಿಷಯದ ಕುರಿತು ಒಂದು ದಿನದ ಕಾರ್ಯಾಗಾರ ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿ ಸ್ಕೂಲ್ ಆಫ್ ಐಟಿ ಸ್ಕಿಲ್ಸ್ ಎಂಎಸ್‌ಡಿಸಿ, ಮಣಿಪಾಲ ಇಲ್ಲಿನ ಸೆಂಟರ್ ಹೆಡ್ ರಾಜಲಕ್ಷ್ಮಿ ಅವರು ಮಾತನಾಡಿ, ಇಂದಿನ ತಂತ್ರಜ್ಞಾನ ಯುಗದಲ್ಲಿ ಕೃತಕ ಬುದ್ಧಿಮತ್ತೆ ಸಾಧನಗಳ ಮಹತ್ವ, ಅವುಗಳ ಬಳಕೆ ಹಾಗೂ ವಿದ್ಯಾರ್ಥಿಗಳಿಗೆ ಇರುವ ಉದ್ಯೋಗಾವಕಾಶಗಳ ಕುರಿತು ಮಾಹಿತಿಯನ್ನು ಒದಗಿಸಿದರು. ಇದೇ ಸಂದರ್ಭ ಮಾಹೆ, ಮಣಿಪಾಲದ ಸ್ಕೂಲ್ ಆಫ್ ಇಂಜಿನಿಯರಿಂಗ್ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಪ್ರಿಯಾ ಕಾಮತ್ ಬಿ. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆಯನ್ನು ವಹಿಸಿದರು. ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ, ವಿಭಾಗದ ಮುಖ್ಯಸ್ಥರಾದ ಶ್ರೀ ಮಹೇಶ್ ಕುಮಾರ್, ವಿಭಾಗದ ಪ್ರಾಧ್ಯಾಪಕರಾದ ವಿಲ್ಮಾ ಶೆರಲ್, ಮೇಘಾ, ಮಹೇಶ್ ಪೂಜಾರಿ ಉಪಸ್ಥಿತರಿದ್ದರು. ಬಿಸಿಎ ವಿಭಾಗದ ವಿದ್ಯಾರ್ಥಿಗಳಾದ ಮನಿಷಾ ಪ್ರಾರ್ಥಿಸಿ, ಅಪೂರ್ವಾ ಡಿ. ಸ್ವಾಗತಿಸಿ. ಸ್ಮಿತಾ ಮತ್ತು ನಿರೀಕ್ಷಾ ಅತಿಥಿಗಳನ್ನು ಸಭೆಗೆ ಪರಿಚಯಿಸಿದರು. ಶಿಫಾ ಕಾರ್ಯಕ್ರಮವನ್ನು ನಿರೂಪಿಸಿದರು. ಶ್ರೇಯಾ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ

ನವದೆಹಲಿ, ಜು.29: ಲೋಕಸಭೆ ಬುಧವಾರ ಸಾರ್ವಜನಿಕ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ)...

ಶಾಸಕ ಯಶ್ಪಾಲ್ ಸುವರ್ಣ ಅವರಿಗೆ ನೋಟೀಸ್

ಉಡುಪಿ, ಜು.29: ರಾಹುಲ್ ಗಾಂಧಿ ವಿರುದ್ಧ ಶಾಸಕ ಯಶ್ಪಾಲ್ ಸುವರ್ಣ ಅವರು...

ಹಡಪದ ಅಪ್ಪಣ್ಣ ರವರ ಚಿಂತನೆಗಳು ಮನುಕುಲದ ಉದ್ಧಾರಕ್ಕೆ ದಾರಿದೀಪ: ಮಂಜುನಾಥ ಪೂಜಾರಿ

ಉಡುಪಿ, ಜು.29: ಹನ್ನೆರಡನೇ ಶತಮಾನದಲ್ಲಿ ಬಸವಣ್ಣನವರ ಅನುಯಾಯಿಯಾಗಿದ್ದ ಶಿವಶರಣ ಹಡಪದ ಅಪ್ಪಣ್ಣ...

ಚಾತುರ್ಮಾಸ ಸಾಧನೆಗೆ ಶ್ರೇಷ್ಠ ಕಾಲ: ಭಂಡಾರಕೇರಿ ಶ್ರೀ ವಿದ್ಯೇಶ ತೀರ್ಥ ಶ್ರೀಪಾದರು

ಬಾರಕೂರು, ಜು.೨೯: ಶ್ರಾವಣದಿಂದ ಕಾರ್ತಿಕ ಮಾಸದವರೆಗಿನ ನಾಲ್ಕು ತಿಂಗಳ ಕಾಲ ಭಗವಂತ...
error: Content is protected !!