Sunday, October 18, 2026
Sunday, October 18, 2026

ಎಸ್.ಎಸ್.ಎಲ್.ಸಿ ಫಲಿತಾಂಶ: ಉಡುಪಿ ಜಿಲ್ಲೆ ರಾಜ್ಯಕ್ಕೆ ದ್ವಿತೀಯ; ಶಂಕರನಾರಾಯಣ ಮದರ್ ಥೆರೇಸಾ ಮೆಮೋರಿಯಲ್ ಸ್ಕೂಲ್‌ನ ಪ್ರೀತಮ್ ಜಿ. ಪೂಜಾರಿ ರಾಜ್ಯಕ್ಕೆ ಪ್ರಥಮ

ಎಸ್.ಎಸ್.ಎಲ್.ಸಿ ಫಲಿತಾಂಶ: ಉಡುಪಿ ಜಿಲ್ಲೆ ರಾಜ್ಯಕ್ಕೆ ದ್ವಿತೀಯ; ಶಂಕರನಾರಾಯಣ ಮದರ್ ಥೆರೇಸಾ ಮೆಮೋರಿಯಲ್ ಸ್ಕೂಲ್‌ನ ಪ್ರೀತಮ್ ಜಿ. ಪೂಜಾರಿ ರಾಜ್ಯಕ್ಕೆ ಪ್ರಥಮ

Date:

ಉಡುಪಿ, ಏ.23: ಇಂದು ಪ್ರಕಟಗೊಂಡ 2025-26 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶದಲ್ಲಿ ಉಡುಪಿ ಜಿಲ್ಲೆಯು ರಾಜ್ಯಕ್ಕೆ ಎರಡನೇ ಸ್ಥಾನವನ್ನು ಪಡೆದಿರುವುದು ಸಂತೋಷದ ವಿಷಯವಾಗಿದೆ. ಕುಂದಾಪುರ ತಾಲೂಕಿನ ಶಂಕರನಾರಾಯಣ ಮದರ್ ಥೆರೇಸಾ ಮೆಮೋರಿಯಲ್ ಸ್ಕೂಲ್‌ನ ಪ್ರೀತಮ್ ಜಿ. ಪೂಜಾರಿ ಅವರು ಪರೀಕ್ಷೆಯಲ್ಲಿ 625 ಕ್ಕೆ 625 ಅಂಕ ಪಡೆಯುವುದರೊಂದಿಗೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ ಇವರಿಗೆ ಜಿಲ್ಲಾಡಳಿತದ ಪರವಾಗಿ ಹಾಗೂ ನನ್ನ ವೈಯಕ್ತಿಕ ಅಭಿನಂದನೆಗಳು ಎಂದು ಉಡುಪಿ ಜಿಲ್ಲಾಧಿಕಾರಿ ಹೇಳಿದ್ದಾರೆ.

ಜಿಲ್ಲೆಯು ರಾಜ್ಯದಲ್ಲಿ ಎರಡನೇ ಸ್ಥಾನವನ್ನು ಪಡೆಯುವಲ್ಲಿ ವಿದ್ಯಾರ್ಥಿಗಳ ಪರಿಶ್ರಮ, ಪೋಷಕರ ಸಹಕಾರ, ಮುಖ್ಯವಾಗಿ ಇಲ್ಲಿನ ಬೋಧಕರು ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವಲ್ಲಿ ವಹಿಸಿರುವ ನಿರ್ಣಾಯಕ ಪಾತ್ರ ಮತ್ತು ಎಲ್ಲಾ ಅಧಿಕಾರಿ ಸಿಬ್ಬಂಧಿಗಳ ಕಾರ್ಯತತ್ಪರತೆ ಶ್ಲಾಘನೀಯ. ಶೈಕ್ಷಣಿಕವಾಗಿ ಜಿಲ್ಲೆಯ ಗರಿಮೆಯನ್ನು ಹೆಚ್ಚಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ತುಂಬು ಹೃದಯದ ಅಭಿನಂದನೆಗಳು. ಇದರೊಂದಿಗೆ 625 ಕ್ಕೆ 624 ಅಂಕ ಪಡೆದ ವಿದ್ಯಾರ್ಥಿಗಳಾದ ಕುಂದಾಪುರದ ಶ್ರೀ ವೆಂಕಟ್‌ರಮಣ ಇಂಗ್ಲೀಷ್ ಮೀಡಿಯಂ ಹೈಸ್ಕೂಲ್‌ನ ಅನ್ವರ್ಥ್ ಪೂಜಾರಿ, ಕಾರ್ಕಳ ತಾಲೂಕು ಬೈಲೂರು ಸರಕಾರಿ ಜೂನಿಯರ್ ಕಾಲೇಜಿನ ಲಿಸಾ ಬಾರ್ಬೋಝಾ, ಕಾರ್ಕಳ ಕುಕ್ಕುಂದೂರು ಗಣಿತ್ ನಗರದ ಜ್ಞಾನಸುಧಾ ಇಂಗ್ಲೀಷ್ ಮೀಡಿಯಂ ಹೈಸ್ಕೂಲ್‌ನ ವಿದ್ಯಾರ್ಥಿಗಳಾದ ಮಹಾಲಕ್ಷ್ಮೀ ಭಾಗವ್ ಹಾಗೂ ಮಹಾಲಕ್ಷ್ಮೀ ಪೈ ಬಿ, ಕೋಟ ವಿವೇಕ ಇಂಗ್ಲೀಷ್ ಮೀಡಿಯಂ ಹೈಸ್ಕೂಲ್‌ನ ಚೈತನ್ಯಶ್ರೀ ಆರ್ ಉಡುಪ, 625 ಕ್ಕೆ 623 ಅಂಕ ಪಡೆದ ಕುಂದಾಪುರದ ಶ್ರೀ ವೆಂಕಟರಮಣ ಇಂಗ್ಲೀಷ್ ಮೀಡಿಯಂ ಹೈಸ್ಕೂಲ್‌ನ ಪ್ರಾರ್ಥನಾ ಜಿ, ಸಾತ್ವಿಕ್ ಎಸ್ ಭಟ್, ಥಕ್ಷಾ ಪಿ. ಶೆಟ್ಟಿ ಹಾಗೂ ಕಾರ್ಕಳ ಕುಕ್ಕುಂದೂರು ಗಣಿತ್ ನಗರದ ಜ್ಞಾನಸುಧಾ ಇಂಗ್ಲೀಷ್ ಮೀಡಿಯಂ ಹೈಸ್ಕೂಲ್‌ನ ವೈಷ್ಣವಿ ಶೆಟ್ಟಿಗಾರ್ ಮತ್ತು 625 ಕ್ಕೆ 622 ಅಂಕ ಪಡೆದ ಕೋಟ ವಿವೇಕ ಇಂಗ್ಲೀಷ್ ಮೀಡಿಯಂ ಹೈಸ್ಕೂಲ್‌ನ ಸಂಕಲ್ಪ್ ಕುಮಾರ್ ಇವರಿಗೂ ಜಿಲ್ಲಾಡಳಿತ ಅಭಿನಂದಿಸಿದೆ. ಜಿಲ್ಲೆಯಲ್ಲಿ ಒಟ್ಟು 13,373 ರೆಗ್ಯೂಲರ್ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಇವರಲ್ಲಿ 13,129 ವಿದ್ಯಾರ್ಥಿಗಳು ಉತ್ತೀರ್ಣರಾಗುವುದರೊಂದಿಗೆ ಉಡುಪಿ ಜಿಲ್ಲೆಯು ಶೇ. 98.18 ರಷ್ಟು ಫಲಿತಾಂಶ ದಾಖಲಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!