Sunday, October 18, 2026
Sunday, October 18, 2026

ಭಗೀರಥರ ತಪಸ್ಸು ಪರಿಶ್ರಮ ಬದುಕಿಗೆ ಮಾದರಿ: ಎಂ ಎ ಗಫೂರ್

ಭಗೀರಥರ ತಪಸ್ಸು ಪರಿಶ್ರಮ ಬದುಕಿಗೆ ಮಾದರಿ: ಎಂ ಎ ಗಫೂರ್

Date:

ಉಡುಪಿ, ಏ.23: ರಾಜನಾಗಿ, ಋಷಿಯಾಗಿ ಭಗೀರಥರು ಸಮಾಜಕ್ಕೆ ಒಂದು ದೊಡ್ಡ ಸಂದೇಶವನ್ನು ನೀಡಿದ್ದಾರೆ. ಅವರು ತಮ್ಮ ಪ್ರಯತ್ನ ಹಾಗೂ ಪರಿಶ್ರಮದ ಮೂಲಕ ಗಂಗೆಯನ್ನೇ ಧರೆಗೆ ತಂದವರು. ಭಗೀರಥರ ತಪಸ್ಸು ಹಾಗೂ ಪರಿಶ್ರಮದ ಮನೋಭಾವವನ್ನು ನಮ್ಮ ದುಡಿಮೆ ಮತ್ತು ದಿನನಿತ್ಯದ ಬದುಕಿನಲ್ಲಿ ಆಳವಡಿಸಿಕೊಳ್ಳಬೇಕು ಎಂದು ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ ಗಫೂರ್ ಹೇಳಿದರು. ಅವರು ಗುರುವಾರ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಛೇರಿಯ ಕೋರ್ಟ್ ಹಾಲ್‌ನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಶ್ರೀ ಭಗೀರಥ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಶ್ರೀ ಭಗೀರಥರ ಭಾವಚಿತ್ರಕ್ಕೆ ಪುಷ್ಫಾರ್ಚನೆ ಸಲ್ಲಿಸಿ ಮಾತನಾಡಿದರು. ಸಮಾಜದಲ್ಲಿರುವ ಅಸಮಾನತೆ, ಅಸ್ಪಶ್ಯತೆ ಹಾಗೂ ಮೌಢ್ಯಗಳನ್ನು ಹೋಗಲಾಡಿಸಲು ಶ್ರಮಿಸಿ ಸಮಾಜಕ್ಕೆ ಕೊಡುಗೆ ನೀಡಿದ ದಾರ್ಶನಿಕರ ಕುರಿತು ಯುವ ಪೀಳಿಗೆಗೆ ತಿಳಿಸುವ ನಿಟ್ಟಿನಲ್ಲಿ ಸರಕಾರವು ಜಯಂತಿ ಕಾರ್ಯಕ್ರಮವನ್ನು ಆಯೋಜಿಸಿಕೊಂಡು ಬಂದಿದ್ದು, ಯುವ ಪೀಳಿಗೆಯು ಮಹನೀಯರ ತತ್ವ ಆದರ್ಶಗಳನ್ನು ತಮ್ಮ ಜೀವನದಲ್ಲಿ ಆಳವಡಿಸಿಕೊಂಡಾಗ ಜಯಂತಿ ಕಾರ್ಯಕ್ರಮಗಳು ಅರ್ಥಪೂರ್ಣಗೊಳ್ಳುತ್ತದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ನೀರಿನಿಂದ ಉಪ್ಪು ತಯಾರಿಸಿದವರು ಉಪ್ಪಾರ ಜನಾಂಗದವರಾದರು. ಹಾಗಾಗಿ ಉಪ್ಪಾರ ಜನಾಂಗಕ್ಕೂ ಭಗೀರಥ ಮಹರ್ಷಿಗೂ ಸಂಬಂಧ ಇದೆ. ಕೆಲಸದಲ್ಲಿ ಬದ್ಧತೆ ಮುಖ್ಯ ಯಾವುದೇ ಕೆಲಸದ ಬಗ್ಗೆ ಬದ್ಧತೆ ಇದ್ದಲ್ಲಿ ಮಾತ್ರವೇ ಯಶಸ್ವಿಗೊಳಿಸಲು ಸಾಧ್ಯ ಎಂದ ಅವರು, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಅನುಕೂಲವಾಗುವ ನಿಟ್ಟಿನಲ್ಲಿ ಅಧಿಕಾರಿಗಳು ಪ್ರಾಮಾಣಿಕ ಕೆಲಸ ಮಾಡಬೇಕು ಎಂದರು.

ಉಪತಹಶೀಲ್ದಾರ್ ನವನೀತ್, ಜಿಲ್ಲಾಡಳಿತ ಸಿಬ್ಬಂದಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿ, ವರ್ಷಾ ನಿರೂಪಿಸಿ, ಕಾರ್ಕಳ ಶ್ರೀ ಭುವನೇಂದ್ರ ಕಾಲೇಜಿನ ಕನ್ನಡ ಉಪನ್ಯಾಸಕ ರಾಮಾಂಜಿ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!