Sunday, October 18, 2026
Sunday, October 18, 2026

ಬಿ.ಬಿ. ಹೆಗ್ಡೆ ಕಾಲೇಜು; ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

ಬಿ.ಬಿ. ಹೆಗ್ಡೆ ಕಾಲೇಜು; ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

Date:

ಕುಂದಾಪುರ, ಏ.24: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿ ಘಟಕದ ಆಶ್ರಯದಲ್ಲಿ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ನಡೆಯಿತು. ಪದವಿಯ ನಂತರ ಉನ್ನತ ಶಿಕ್ಷಣದ ಅವಕಾಶಗಳು ಹಾಗೂ ಉನ್ನತ ಶಿಕ್ಷಣದ ಮಹತ್ವದ ಕುರಿತು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಅಲಿಯನ್ಸ್ ಅಸ್ಸೆಂಟ್ ಕಾಲೇಜು, ಬೆಂಗಳೂರು ಇಲ್ಲಿನ ಸಹಾಯಕ ಪ್ರಾಧ್ಯಾಪಕರಾದ ಹರ್ಷಿತ್ ಕೆ. ಎಂ. ಮಾಹಿತಿ ನೀಡಿದರು.

ಅಲಿಯನ್ಸ್ ಯೂನಿವರ್ಸಿಟಿ ಮ್ಯಾನೇಜರ್ ಸುಕೇಶ್ ಜೆ. ಭಂಡಾರಿ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ವೃತ್ತಿ ಮಾರ್ಗದರ್ಶಕ ಮತ್ತು ತರಬೇತಿ ಘಟಕದ ಸಂಯೋಜಕ ತಿಮ್ಮಪ್ಪ ಡಿ.ಎಸ್ ಸ್ವಾಗತಿಸಿ, ಸಂಪನ್ಮೂಲ ವ್ಯಕ್ತಿಗಳನ್ನು ಪರಿಚಯಿಸಿ, ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!