Sunday, October 18, 2026
Sunday, October 18, 2026

ಶ್ರೀ ಕೃಷ್ಣ ಮಠಕ್ಕೆ ಉತ್ತರಾಧಿ ಮಠದ ಶ್ರೀ ಸತ್ಯಾತ್ಮ ತೀರ್ಥ ಶ್ರೀಪಾದರ ಭೇಟಿ

ಶ್ರೀ ಕೃಷ್ಣ ಮಠಕ್ಕೆ ಉತ್ತರಾಧಿ ಮಠದ ಶ್ರೀ ಸತ್ಯಾತ್ಮ ತೀರ್ಥ ಶ್ರೀಪಾದರ ಭೇಟಿ

Date:

ಉಡುಪಿ, ಏ.27: ಪರ್ಯಾಯ ಶ್ರೀ ಶೀರೂರು ಮಠ ಪರ್ಯಾಯ ಪೀಠಾಧೀಶರಾದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಪ್ರಥಮ ಪರ್ಯಾಯದ ಸಂದರ್ಭದಲ್ಲಿ ಉತ್ತರಾಧಿ ಮಠದ ಪಟ್ಟದ ದೇವರಾದ ಶ್ರೀ ಮೂಲ ರಾಮ ದೇವರ ಸಹಿತ ಪೀಠಾಧೀಶರಾದ ಶ್ರೀ ಸತ್ಯಾತ್ಮ ತೀರ್ಥ ಶ್ರೀಪಾದರು ಶ್ರೀ ಕೃಷ್ಣ ಮಠಕ್ಕೆ ಮೆರವಣಿಗೆಯ ಮೂಲಕ ಪರ್ಯಾಯ ಶೀರೂರು ಮಠದ ವತಿಯಿಂದ ಸ್ವಾಗತಿಸಲಾಯಿತು ಸಂಸ್ಕೃತ ಕಾಲೇಜಿನಿಂದ ಮೆರವಣಿಗೆಯ ಮೂಲಕ ಶ್ರೀಪಾದರನ್ನು ಸ್ವಾಗತಿಸಲಾಯಿತು.

ನಂತರ ಕನಕನ ಕಿಂಡಿಯಲ್ಲಿ ದೇವರ ದರ್ಶನ ಮಾಡಿದರು. ಕೃಷ್ಣ ಮಠದ ಮುಂಭಾಗದಲ್ಲಿ ಪರ್ಯಾಯ ಪೀಠಾಧೀಶರಾದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಉತ್ತರಾಧಿ ಮಠದ ಶ್ರೀ ಸತ್ಯಾತ್ಮ ತೀರ್ಥ ಶ್ರೀಪಾದರನ್ನು ಸ್ವಾಗತಿಸಿದರು ಹಾಗೂ ದೇವರ ದರ್ಶನ ಮಾಡಿಸಿದರು. ಶೀರೂರು ಮಠದ ದಿವಾನರಾದ ಉದಯಕುಮಾರ್ ಸರಳತ್ತಾಯ, ಪಾರುಪತ್ಯೆಗಾರರಾದ ಶ್ರೀಶ ಭಟ್ ಕಡೆಕಾರು, ಉಭಯ ಮಠಗಳ ಶಿಷ್ಯವರ್ಗದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!